ಯರಗಟ್ಟಿ,ಜು,೨೫ : ಪಟ್ಟಣದ ಕರ್ನಾಟಕ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೬-೨೭ ನೇ ಸಾಲಿನ ಶಾಲಾ ಸಂಸತ ಚುನಾವಣೆ ಜರುಗಿತು.
ಸಂಸ್ಥೆಯ ಅಧ್ಯಕ್ಷರ, ರುದ್ರಪ್ಪ ಹಟ್ಟಿ ಮಾತನಾಡಿ ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನದ ಮೂಲಕ ಸಾಗಿದ್ದು ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ನೆರವಾಗಿದೆ. ಶಿಕ್ಷ ಣ ಇಲಾಖೆಯ ಈ ಕ್ರಮ ಶ್ಲಾಘನೆಗೆ ಕಾರಣವಾಗಿದೆ.
ಶಾಲೆ ಆರಂಭವಾಯಿತೆಂದರೆ ಪ್ರತೀ ಶಾಲೆಗಳಲ್ಲಿ ಶಾಲಾ ಸಂಸತ್ ಚುನಾವಣೆಗೆ ತಯಾರಿ ನಡೆಯುತ್ತದೆ. ಆಯಾ ವರ್ಷದ ವಿದ್ಯಾರ್ಥಿ ನಾಯಕನ ಆಯ್ಕೆ ಪ್ರಕ್ರಿಯೆ ಚುನಾವಣೆಯ ಮೂಲಕ ಸಾಗುತ್ತದೆ. ಶಾಲೆಗಳಲ್ಲಿ ಮಕ್ಕಳಿಗೆ ಚುನಾವಣೆಯ ಅರಿವು ಮೂಡಿಸುವ ಪ್ರಯುಕ್ತ ಶಾಲಾ ಸಂಸತ್ ರಚನೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶಿಸಿದ್ದು ಮಕ್ಕಳಿಗೆ ದೇಶದ ರಾಜಕೀಯ ವ್ಯವಸ್ಥೆಯನ್ನು ತಿಳಿಯುವಲ್ಲಿ ಸಹಕಾರಿಯಾಗಿದೆ.
ಪ್ರಧಾನ ಗುರುಗಳಾದ ವ್ಹಿ. ಎಂ. ಹಾದಿಮನಿ ಮಾತನಾಡಿ ಶಾಲೆಗಳಲ್ಲಿ ನಡೆದ ಚುನಾವಣೆಗಳ ಅನ್ವಯ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಖಾತೆಗಳ ಹಂಚಿಕೆ ಮಾಡಿ ಆಯಾ ವರ್ಷದ ಶಾಲಾ ಜವಾಬ್ದಾರಿ ವಹಿಸಲಾಯಿತ್ತಿ. ಪ್ರಧಾನ ಮಂತ್ರಿ, ಶಿಕ್ಷಣ ಮಂತ್ರಿ, ಸ್ವಚ್ಛತಾ ಮಂತ್ರಿ, ಗ್ರಂಥಾಲಯ ಪಾಲನೆ, ರಕ್ಷಣಾ ಮಂತ್ರಿ, ಆಹಾರ ಮಂತ್ರಿ ಹೀಗೆ ನಾನಾ ಖಾತೆಗಳನ್ನು ನೀಡಿ ಮಕ್ಕಳಿಗೆ ಜವಾಬ್ದಾರಿಯನ್ನು ನೀಡುವುದರಿಂದ ವರ್ಷವಿಡೀ ಶಾಲೆಯ ನಿರ್ವಹಣೆ ಮಾಡಲು ಶಿಕ್ಷ ಕರಿಗೆ ಸುಲಭವೆನಿಸುತ್ತದೆ.
ಶಿಕ್ಷ ಣ ಇಲಾಖೆಯ ಈ ತಂತ್ರದಿಂದ ಮಕ್ಕಳಿಗೆ ದೇಶದ ರಾಜಕೀಯ ವ್ಯವಸ್ಥೆಯ ಬಗ್ಗೆ ಪ್ರಾಯೋಗಿಕ ಅನುಭವ ಸಿಗಲಿದೆ ಎಂದು ಹೇಳಿದರು.
ಈ ವೇಳೆ ಸಂಸ್ಥೆಯ ನಿರ್ದೇಶಕರಾದ. ಅಶೋಕ ಹೊಂಗಲ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ವಸಂತ ಬಡಿಗೇರ, ಪಾಲಕ ಪ್ರತಿನಿಧಿಗಳಾದ ಶಾವಲಿ ಕರ್ನಾಚಿ, ದುಂಡಯ್ಯ ಹಿರೇಮಠ, ಮಲ್ಲಿಕಾರ್ಜುನ ಶಿವಣ್ಣವರ ಸೇರಿದಂತೆ ಶಾಲೆ ಭೋದಕ-ಭೋದಕೇತರ ಸಿಬ್ಬಂದಿ ವರ್ಗದವರು ಉಪಸ್ಥತರಿದ್ದರು.
