Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಸಕ್ರಿಯ ವ್ಯಕ್ತಿತ್ವ ರೂಪಿಸಲು ಸಹಾಯಕ: ಯು.ಟಿ.ಖಾದರ

ಬೆಳಗಾವಿ ೨೭:- ಮಕ್ಕಳು ದೇಶದ ಸಂಪತ್ತು. ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಮಕ್ಕಳಿಗೆ ಸಕ್ರಿಯವಾಗಿ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಾಯವಾಗುತ್ತದೆ. ಭಾರತ ದೇಶ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವುದು ಪ್ರತಿಯೊಬ್ಬರು ಕನಸು. ಭಾರತ ದೇಶ ಬಲಿಷ್ಯವಾಗಲು ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ ಎಂದು ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ(ಫರೀದ್) ತಿಳಿಸಿದರು.


ಹೊನಗಾ ಗ್ರಾಮದ ಫೀನಿಕ್ಸ್ ಪಬ್ಲಿಕ್ ಶಾಲೆಯಲ್ಲಿ ಶನಿವಾರ (ಡಿ.27) ನಡೆದ 29ನೇ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ -2025 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ವಿದ್ಯಾರ್ಥಿಗಳು ಸಮಯದ ಮೌಲ್ಯ ತಿಳಿದು ಸರಿಯಾಗಿ ಸಮಯವನ್ನು ಬಳಸಿಕೊಂಡು ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಬರುವ ದಿನಗಳಲ್ಲಿ ನಿಮ್ಮ ವ್ಯಕ್ತಿತ್ವ ನಿಮ್ಮನ್ನು ಹೆಚ್ಚಿನ ಸ್ಥಾನಕ್ಕೆ ಕರೆದುಕೊಂಡು ಹೋಗುತ್ತದೆ ಎಂದರು.

Advertisement

ಮಕ್ಕಳು ಉತ್ತಮ ಪ್ರಜೆಗಳಾಗಿ ಉನ್ನತ ಸ್ಥಾನ ಪಡೆದುಕೊಂಡು ಸಮಾಜ ಸುಧಾರಣೆಯಲ್ಲಿ ತೊಡಗಿಕೊಳ್ಳಬೇಕು ಎಂದು ವಿಧಾನ ಸಭಾ ಅಧ್ಯಕ್ಷರಾದ ಯು.ಟಿ.ಖಾದರ(ಫರೀದ್) ಅವರು ಹೇಳಿದರು.



  ವಿಧಾನ ಪರಿಷತ್ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ ಮಾತನಾಡಿ ಮಕ್ಕಳಿಗೆ ಶಿಕ್ಷಣ ನೀಡುವುದು ಶಿಕ್ಷಕರ ಕೆಲಸ ಅದರಂತೆ ಮಕ್ಕಳಿಗೆ ಶಿಸ್ತು ಕಲಿಸುವುದು ಸ್ಕೌಟ್ಸ್ ಮತ್ತು ಗೈಡ್ ಕೆಲಸವಾಗಿದೆ. ಸ್ಕೌಟ್ಸ್ ಜೀವನದಲ್ಲಿ ಉತ್ತಮ ಪಾಠ ಪರಿಸರ ಕಲಿಸಿಕೊಡುತ್ತದೆ ಎಂದು ಹೇಳಿದರು.


5 ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ಯಾವುದೇ ಜಾತಿ ಧರ್ಮ ಇಲ್ಲದೇ ಎಲ್ಲರೂ ಸರಿಸಮ ಎಂಬ ಪಾಠ ಹೇಳಿಕೊಡಲಾಗುತ್ತದೆ.


ಜಗಜ್ಯೋತಿ ಬಸವಣ್ಣನವರ ಕಾಯಕವೇ ಕೈಲಾಸ, ಎಲ್ಲರೂ ಸಮಾನರೆಂಬ ಪಾಠ ಇಲ್ಲಿ ಕಲಿಸಲಾಗುತ್ತದೆ.


ಎಲ್ಲಾ ಮಕ್ಕಳ ದೇಶಪ್ರೇಮಿಗಳಾಗಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು. ಮಕ್ಕಳು ತಂದೆ ತಾಯಿ ಶಿಕ್ಷರಿಗೆ ಗೌರವ ತರುವ ಕೆಲಸ ಮಾಡುವ ಮೂಲಕ ಶ್ರೇಷ್ಠ ವ್ಯಕ್ತಿಗಳಾಗಬೇಕು ಎಂದು ಬಸವರಾಜ ಹೊರಟ್ಟಿ ಹೇಳಿದರು.


ವಿದ್ಯಾರ್ಥಿಗಳಿಗೆ ಶಾಲಾ‌ ಚಟುವಟಿಕೆಗಳ ಜೊತೆಗೆ ದೈಹಿಕ,‌ ಮಾನಸಿಕವಾಗಿ ಉತ್ತೇಜನೆ ನೀಡುವ ಕಾರ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಾಡುತ್ತಿದೆ. ಇದರಿಂದ ವಿಧ್ಯಾರ್ಥಿಗಳು  ಶಿಸ್ತು ಬದ್ಧ ಜೀವನ ನಡೆಸಲು ಅನುಕೂಲವಾಗಲಿದೆ ಎಂದು ಸಂಸದರಾದ ಜಗದೀಶ ಶೆಟ್ಟರ ತಿಳಿಸಿದರು.


ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ ಇನ್ನೂ ಮುಂಚೂಣಿಯಲ್ಲಿ ಬೆಳೆಯುವಂತೆ ಶಿಕ್ಷಣ ಇಲಾಖೆಯ ಜವಾಬ್ದಾರಿಯಾಗಿದೆ. ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಲು ಸ್ಕೌಟ್ಸ್ ಮತ್ತು ಗೈಡ್ ಬಹಳ ಮುಖ್ಯವಾಗಿದೆ. ಈಗಾಗಲೇ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳೆಸುವುದು ನನ್ನ ಅರಿವಿಗೆ ಬಂದಿದ್ದು, ಹೆಚ್ಚಿನ ಮಟ್ಟದಲ್ಲಿ ಸ್ಕೌಟ್ಸ್ ಮತ್ತು ಗೈಡ್ ಗೆ ಇನ್ನೂ ಹೆಚ್ಚು ಒತ್ತು ಕೊಡಲಾಗುವುದು ಎಂದರು.


ರಾಜ್ಯದ ಪ್ರತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ ಪ್ರಾರಂಭಿಸಲು ಚಿಂತಿಸಲಾಗುವುದು. ಸ್ಕೌಟ್ಸ್ ಮತ್ತು ಗೈಡ್ ನಲ್ಲಿ ಮಕ್ಕಳಿಗೆ ಮಾನವೀಯತೆಯ ಮೌಲ್ಯಗಳನ್ನು ಕೊಡಲಾಗುತ್ತಿದ್ದು, ಮಕ್ಕಳು ಶ್ರದ್ಧೆಯಿಂದ ಶಿಸ್ತು ಕಲಿತುಕೊಳ್ಳಬೇಕು ಎಂದು ಸಚಿವ ಬಂಗಾರಪ್ಪ ಹೇಳಿದರು.



ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಮಾತನಾಡಿ ಜಿಲ್ಲೆಯಲ್ಲಿ ಕಾರ್ಯಕ್ರಮ ಆಯೋಜನೆಯಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಇಂದು ಸೇರಿರುವ ಮಕ್ಕಳನ್ನು‌ ಉತ್ತಮ ದಾರಿಯಲ್ಲಿ ಬಳಸಿಕೊಂಡಲ್ಲಿ‌ ಭವ್ಯ ಭಾರತ ನಿರ್ಮಾಣಕ್ಕೆ ಅನುಕೂಲಕರವಾಗಿದೆ. ಇದೊಂದು ಕೌಶಲ್ಯಗಳನ್ನು ಮಾನವಿಯ ಮೌಲ್ಯಗಳನ್ನು ತಿಳಿ ಹೇಳುವಂತಹ ಕಾರ್ಖಾನೆಯಂತಿದ್ದು, ಈ ತರಬೇತಿಯಲ್ಲಿ‌ ಪಾಲ್ಗೊಂಡ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ಭವ್ಯ ಭಾರತ‌ ನಿರ್ಮಾಣಕ್ಕೆ‌ ಮುಂದಾಗಲು ಕರೇ ನೀಡಿದರು


ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯ ಮಾತನಾಡಿ ಯಾವುದೇ ಒಂದು ಧರ್ಮಕ್ಕೆ ಸೀಮತಿವಲ್ಲದ ಆಧ್ಯಾತ್ಮಿಕ ಕೆಲಸವನ್ನು ಸ್ಕೌಟ್ಸ್ ಮತ್ತು ಗೈಡ್ ಮಾಡುತ್ತದೆ. ಎಲ್ಲರ ಸಹಕಾರದಿಂದ 7 ದಿನಗಳ ಕಾಲ ಜಾಂಬೊರೆಟ್ ಕಾರ್ಯಕ್ರಮ ನಡೆಯುತ್ತಿದೆ. 200 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ ಕೆಲಸ ಮಾಡುತ್ತಿದೆ. ಸಾಮಾಜಿಕ ಅಭಿವೃದ್ಧಿ, ಶಿಕ್ಷಣ ನಮ್ಮ ಗುರಿಯಾಗಿದೆ ಇದಕ್ಕೆ ಪೂರಕವಾಗಿ ರಾಷ್ಟ್ರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ನಿರ್ವಹಿಸುತ್ತಿದೆ ಎಂದು ಪಿ.ಜಿ.ಆರ್.ಸಿಂಧ್ಯ ಹೇಳಿದರು.


ಭೂತರಾಮನಹಟ್ಟಿಯ ಮುಕ್ತಿಮಠದ ಧರ್ಮಶ್ರೀ ತಪೋರತ್ನ ಶಿವಸಿದ್ಧ ಶಿವಾಚಾರ್ಯ ಮಹ್ವಾಮಿಗಳು ಕಾರ್ಯಕ್ರಮದ‌ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಪೊಲಿಸ್ ಆಯುಕ್ತರಾದ ಗುಲಬಾರಾವ್ ಭೂಷಣ ಭೊರಸೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ, ಜಿಲ್ಲಾ‌ ಪಂಚಾಯತ ಉಪ ಕಾರ್ಯದರ್ಶಿಗಳಾದ ಬಸವರಾಜ ಹೆಗನಾಯಕ, ಅಂತರಾಷ್ಟ್ರೀಯ ಹೆಚ್ಚುವರಿ ಆಯುಕ್ತ ಎ. ಎಸ್. ಮಧುಸೂದನ್, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೀಲಾವತಿ ಹಿರೇಮಠ ಹಾಗೂ ಸ್ಥಾನಿಕ ಆಯುಕ್ತ ರಾಜಶೇಖರ ಚಳಗೇರಿ,ಎ.ಆರ್.ಅಂಬಗಿ, ಎನ್‌.ಆರ್.ಮೆಳವಂಕಿ,ಎಂ.ಎಂ.ಪಾಟೀಲ, ಬೆಳಗಾವಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕೆ.ಆಂಜನೇಯ, ಭಾರತ ಸ್ಕೌಟ್ಸ್ ಗೈಡ್ಸ್ ರಾಜ್ಯ ಸಹಾಯಕ ಆಯುಕ್ತೆ ಪ್ರಭಾವತಿ ಪಾಟೀಲ, ರಾಜ್ಯ ಕೋಶಾಧಿಕಾರಿ ಟಿ. ಪ್ರಭಾಕರ, ಡಿಒಟಿ ರಾಜಕುಮಾರ ಕುಂಬಾರ, ನಾಗೇಶ ಶಿವಾಪುರ, ವಿಠ್ಠಲ ಎಸ್, ಹನುಮಂತ ಭಜಂತ್ರಿ, ಶಿವರಾಯ ಏಳುಕೋಟಿ  ಹಾಗೂ ಕರ್ನಾಟಕ ರಾಜ್ಯ ಸ್ಕೌಟ್ಸ್ ಗೈಡ್ಸ್ ಪದಾಧಿಕಾರಿಗಳು


ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ‌ ಆಯುಕ್ತರು, ಉಪಾಧ್ಯಕ್ಷರು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್  ಕರ್ನಾಟಕ ಹಾಗೂ ಜಿಲ್ಲಾ ಮುಖ್ಯ ಆಯುಕ್ತ ಗಜಾನನ ಮನ್ನಿಕೇರಿ ಅವರು ಸ್ವಾಗಿತಿಸಿದರು. ರಾಜ್ಯ ಸಂಘಟನಾ ಆಯುಕ್ತೆ ಮಂಜುಳಾ ಕಾರ್ಯಕ್ರಮ ನಿರೂಪಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*