LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಎಸ್.ಸಿ-ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆ


ಬೆಳಗಾವಿ, ಜು.13: ಜಿಲ್ಲಾ ಕೇಂದ್ರಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೇ ನಿಗಮದ ಕೆಲಸ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿನ ಯೋಜನೆಗಳ ಅರ್ಜಿಗಳ ಅಂಕಿ ಅಂಶಗಳ ಮಾಹಿತಿ ಅಧಿಕಾರಿಗಳಿಗೆ ಇರಬೇಕು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಅವರು ತಿಳಿಸಿದರು.


ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ (ಜು.13) ನಡೆದ ಎಸ್.ಸಿ-ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು, ಮಧ್ಯವರ್ತಿಗಳ ಹಾವಳಿ ಹೆಚ್ಚುತ್ತಿರುವ ಕುರಿತು ಕೆಲವು ದೂರುಗಳು ಬರುತ್ತಿವೆ. ಹಾಗಾಗಿ ಯಾವುದೇ ಮಧ್ಯವರ್ತಿಗಳು ಇಲ್ಲದೇ ಯೋಜನೆಗಳ ಸೌಲಭ್ಯ ಫಲಾನುಭವಿಗೆ ದೊರೆಯುವಂತೆ ಎಲ್ಲ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.


ಇಲಾಖೆ ಯೋಜನೆಗಳಿಗಾಗಿ ಸಲ್ಲಿಸಿದ ಅರ್ಜಿಗಳ ಮಾಹಿತಿಯನ್ನು ಅಧಿಕಾರಿಗಳು ಕಡ್ಡಾಯವಾಗಿ ತರಬೇಕು. ಸಭೆಗೆ ಮುಂಚಿತವಾಗಿ ಎಲ್ಲಾರಿಗೂ ಸಭೆಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ದಾಖಲಾತಿ ಒದಗಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.


ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸಿದ ಅಲೆಮಾರಿಗಳ, ಅರೆ ಅಲೆಮಾರಿ ಜನನಗಳ ಅಂಕಿ ಅಂಶಗಳನ್ನು ಮಾಹಿತಿಗಾಗಿ ಸಂಗ್ರಹಿಸಬೇಕು. ಆಯ್ಕೆಯಾದ ಫಲಾನುಭವಿಗಳಿಗೆ ಕೆಲವು ಬ್ಯಾಂಕ್ ಸಾಲ ಸೌಲಭ್ಯ ನೀಡುವುದಿಲ್ಲ ಅಂತಹ ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಿಂದ ನಿರ್ದೇಶನ ನೀಡುವಂತೆ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ತಿಳಿಸಿದರು.


ಈಗಾಗಲೇ ಮಂಜೂರಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಯಾವುದೇ ಅನುದಾನವನ್ನು ಬಾಕಿ ಉಳಸಿಕೊಳ್ಳಬಾರದು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಸೂಚಿಸಿದರು..


ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರೆ ಸೇರಿಂತೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಸಭೆಯಲ್ಲಿ ಉಪಸ್ಥಿತರಿದ್ದರು.

***

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್