ತಾಳಿಕೋಟೆ: ಪಟ್ಟಣದ ಶ್ರೀ ಎಸ್.ಎಸ್. ವಿದ್ಯಾ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಎಚ್.ಎಸ್. ಪಾಟೀಲ್ ದೈಹಿಕ ಶಿಕ್ಷಣ ಮಹಾವಿದ್ಯಾಲಯವು ೨೦೨೬-೨೭ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದೆ.
ಸವದತ್ತಿಯ ಶ್ರೀ ಎಸ್.ವಿ.ಎಸ್. ಬೆಳ್ಳುಬ್ಬಿ ಆರ್ಟ್ಸ್ ಆಂಡ್ ಕಾಮರ್ಸ್ ಕಾಲೇಜಿನಲ್ಲಿ ನಡೆದ ವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳ ತಂಡವು ಅತ್ಯುತ್ತಮ ಕ್ರೀಡಾ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಗಳಿಸಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶ್ರೀ ಎಸ್.ಎಸ್. ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಎಸ್. ಪಾಟೀಲ್, ಕಾರ್ಯದರ್ಶಿ ಸಚಿನ್ ಎಚ್. ಪಾಟೀಲ್, ಆಡಳಿತಾಧಿಕಾರಿ ಕಿರಣ್ ಎಚ್. ಪಾಟೀಲ್, ಮಹಾವಿದ್ಯಾಲಯದ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳ ಕ್ರೀಡಾ ಸಾಧನೆ ಮಹಾವಿದ್ಯಾಲಯದ ಹೆಮ್ಮೆಯ ಸಂಗತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.