LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

'ವಿದ್ಯಾರ್ಥಿ ವಿದ್ಯಾರ್ಥಿನಿಯರೇ'ಭಾರೀ ಮೊತ್ತಕ್ಕೆ ಸೇಲಾಯ್ತು ಮಲೆಯಾಳಂ ಥಿಯೇಟ್ರಿಕಲ್ ರೈಟ್ಸ್!







    ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬಂದಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿರುವ ಸುದ್ದಿ ಇತ್ತೀಚೆಗಷ್ಟೇ ಹೊರಬಿದ್ದಿತ್ತು.


      ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರದ ಕಡೆಯಿಂದ ಮತ್ತೊಂದು ಖುಷಿಯ ಸಂಗತಿ ಜಾಹೀರಾಗಿದೆ. ಇದರನ್ವಯ ಹೇಳುವುದಾದರೆ, ಮಲೆಯಾಳಂ ಚಿತ್ರರಂಗದಲ್ಲಿಯೂ 'ವಿದ್ಯಾರ್ಥಿ ವಿದ್ಯಾರ್ಥಿನಿಯರೆ' ದಾಖಲೆ ಬರೆದಿದ್ದಾರೆ. ಇದರ ಜೊತೆಜೊತೆಗೇ ಈ ಸಿನಿಮಾದ ಆಡಿಯೋ ರೈಟ್ಸ್ ಅನ್ನು ಪ್ರಖ್ಯಾತ ಸಂಸ್ಥೆ  ಟಿ ಸೀರೀಸ್ ದೊಡ್ಡ ಮೊತ್ತಕ್ಕೆ ಖರೀದಿಸಿದೆ. ಬಿಡುಗಡೆಯತ್ತ ಮುಖಮಾಡಿ ನಿಂತಿರುವ ಚಿತ್ರತಂಡದ ಪಾಲಿಗಿದು ಅಕ್ಷರಶಃ ಡಬಲ್ ಧಮಾಕ! ಈ ವಿಚಾರವನ್ನು ಖುದ್ದು ಚಿತ್ರತಂಡವೀಗ ಹಂಚಿಕೊಂಡಿದೆ.


     ಹೇಳಿಕೇಳಿ ಇದು ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಚಿತ್ರ. ಈ ಕಾರಣದಿಂದಲೇ ಹಾಡುಗಳ ಬಗ್ಗೆ ಸಹಜವಾಗಿಯೇ ನಿರೀಕ್ಷೆಗಳು ಮೂಡಿಕೊಂಡಿವೆ. ಅದಕ್ಕೆ ತಕ್ಕುದಾಗಿಯೇ ಚಿತ್ರತಂಡ ಹಾಡುಗಳನ್ನು ರೂಪಿಸಿದೆಯಂತೆ. ವೀಡಿಯೋ ಸಾಂಗುಗಳನ್ನೂ ನೋಡಿದ ಬಳಿಕ ಅತ್ಯಂತ ಖುಷಿಯಿಂದ ಟಿ ಸೀರೀಸ್ ಮುಖ್ಯಸ್ಥರು 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಹಾಡುಗಳ ಹಕ್ಕನ್ನು ದೊಡ್ಡ ಮೊತ್ತಕ್ಕೆ ಖರೀದಿಸಿದೆ. ಈ ಮಾತುಕತೆಗಳೆಲ್ಲವೂ ಮುಂಬೈನಲ್ಲಿರುವ ಟಿ ಸೀರೀಸ್ ಸಂಸ್ಥೆಯ ಮುಖ್ಯ ಕಚೇರಿಯಲ್ಲಿಯೇ ನೆರವೇರಿದೆ.


     ಇನ್ನುಳಿದಂತೆ ಮಲೆಯಾಳಂ ಭಾಷೆಯಲ್ಲಿನ ಥಿಯೇಟ್ರಿಕಲ್ ರೈಟ್ಸ್ ವಿಚಾರದಲ್ಲಿಯೂ ಕೂಡಾ 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಚಿತ್ರ ದಾಖಲೆ ಬರೆದಿದೆ. ಮಲೆಯಾಳಂ ಚಿತ್ರರಂಗದಲ್ಲಿ ಇದುವರೆಗೂ ತೆಲುಗು ಸಿನಿಮಾಗಳಿಗೆ ಬಹು ಬೇಡಿಕೆ ಇತ್ತು. ಆ ಜಾಗವನ್ನೀಗ 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಮೂಲಕ ಕನ್ನಡ ಚಿತ್ರರಂಗವೂ ಆವರಿಸಿಕೊಂಡಂತಾಗಿದೆ. ಯಾಕೆಂದರೆ, ಮಲೆಯಾಳಂನ ಪ್ರಸಿದ್ದ ವಿತರಕರೊಬ್ಬರು ಈ ಚಿತ್ರವನ್ನು ವೀಕ್ಷಿಸಿ, ದೊಡ್ಡ ಮೊತ್ತಕ್ಕೆ ಥಿಯೇಟ್ರಿಕಲ್ ರೈಟ್ಸ್ ಪಡೆದುಕೊಂಡಿದ್ದಾರೆ. ಈ ಸಿನಿಮಾ ಕನ್ನಡದ ಜೊತೆಜೊತೆಗೇ ಕೇರಳದಲ್ಲಿಯೂ ಬಿಡುಗಡೆಗೊಳ್ಳಲಿದೆ. ಈ ಮೂಲಕ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಮಲೆಯಾಳಂ ಭಾಷೆಯಲ್ಲಿಯೂ ದಾಖಲೆ ಬರೆಯಲು ಸಜ್ಜುಗೊಂಡಿದೆ.


     ಚಿತ್ರದಲ್ಲಿರುವ ಯೂಥ್ ಫುಲ್ ಕಥೆ, ಹೊಸತನಗಳನ್ನು ಮೆಚ್ಚಿಕೊಂಡೇ ಮಲೆಯಾಳಂ ವಿತರಕರು ಥಿಯೇಟ್ರಿಕಲ್ ರೈಟ್ಸ್ ಖರೀದಿ ಮಾಡಿದ್ದಾರಂತೆ. ಸದ್ಯಕ್ಕೆ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ಬ್ಯುಸಿಯಾಗಿದೆ.


ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶ್ರೀಕಾಂತ್ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಹಾಗು ನರಸಿಂಹ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ.















Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್