Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ



ಬೆಳಗಾವಿ: ನಗರದ ಸಾಹಿತ್ಯ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ 2026–28ನೇ ಅವಧಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜನಂದಾ ಘಾರ್ಗಿ ಅವರು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ವಿದ್ಯಾ ಹುಂಡೆಕರ ಅವರು ಕಾರ್ಯದರ್ಶಿಯಾಗಿ ಹಾಗೂ ರೇಣುಕಾ ಜಾಧವ್ ಅವರು ಖಜಾಂಚಿಯಾಗಿ ಆಯ್ಕೆಯಾದರು.


ನೂತನ ಪದಾಧಿಕಾರಿಗಳು ಸಂಘದ ಸಾಹಿತ್ಯ ಚಟುವಟಿಕೆಗಳನ್ನು ಇನ್ನಷ್ಟು ವಿಸ್ತರಿಸಿ, ಮಹಿಳಾ ಲೇಖಕಿಯರ ಪ್ರತಿಭೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಭರವಸೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಹಿರಿಯ ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST