Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೈಲರಿಂಗ್ ವೃತ್ತಿಯಿಂದ ಮಹಿಳೆಯರಿಗೆ ಸ್ವಾವಲಂಬನೆ ; ಹಂಪಿ ರಮಣ

 ಬಳ್ಳಾರಿ, ಮಾ.13.: ಮಹಿಳೆಯರಿಗೆ ಯಾವುದೇ ಪದವಿ ಇಲ್ಲದೆ ಸಿಗುವ ಪ್ರಮಾಣ ಪತ್ರ ಎಂದರೆ ಅದು ಟೈಲರಿಂಗ್ ತರಬೇತಿ ಪ್ರಮಾಣ ಪತ್ರ ಇದರಿಂದ ತಮ್ಮ ಜೀವನವನ್ನು ಸ್ವಾವಲಂಬಿಯಾಗಿ ರೂಪಿಸಿಕೊಳ್ಳಬಹುದು ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಹಂಪಿರಮಣ ತಿಳಿಸಿದರು.


ಅವರು ಇಂದು ನಗರದ ಸಿಂಧಿಗಿ ಕಾಂಪೌಂಡ್‌ನಲ್ಲಿ  ಪ್ರತಿಭಾ ಮಹಿಳಾ ಮಂಡಳಿ (ರಿ) ವತಿಯಿಂದ ಆಯೋಜಿಸಿದ್ದ ಟೈಲರಿಂಗ್ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಿ  ಮಾತನಾಡಿ,

ಕಾರ್ಯಕ್ರಮದಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಲು ಇಂತಹ ತರಬೇತಿ ಕಾರ್ಯಕ್ರಮಗಳು ಬಹಳ ಉಪಯುಕ್ತವಾಗುತ್ತವೆ ಎಂದು ಅಭಿಪ್ರಾಯ ಪಟ್ಟರು.


ಈ ಸಂದರ್ಭದಲ್ಲಿ ಪ್ರತಿಭಾ ಮಹಿಳಾ ಮಂಡಳಿ ಅಧ್ಯಕ್ಷೆ ಸುಜಾತ ರವಿಚಂದ್ರ ಮಾತನಾಡಿ, ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸಂಘಟನೆ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ವಕೀಲರಾದ ಸಾಧನ ಹಿರೇಮಠ, ವಿಶೇಷ ಅತಿಥಿಗಳಾಗಿ ವಕೀಲರಾದ ವಿಜಯಲಕ್ಷ್ಮಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಸುಗುಣ,  ಪುಷ್ಪ ಭಾಗವಹಿಸಿ ಮಹಿಳೆಯರಿಗೆ ಶುಭಾಶಯ ಕೋರಿದರು.


ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಅನೇಕ ಮಹಿಳೆಯರು ಹಾಗೂ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ