ಬೆಂಗಳೂರು, ನವೆಂಬರ್ 04: ಅನಾರೋಗ್ಯದಿಂದ ಬಳಲುತ್ತಿದ್ದ
ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ.ಮೇಟಿ (79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಹೆಚ್.ವೈ. ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ H.Y. ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ H.Y.ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಗೆದ್ದಿದ್ದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.