LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ವಿರುದ್ಧ ಕಠಿಣ ಕ್ರಮ: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ, ಜೊತೆಗೆ ಕಿರುಕುಳ ತಪ್ಪಿಸಲು ಇರುವ ನಿಯಮಗಳ ಪಾಲನೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ.


ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು, ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ.


ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ ಖರ್ಚಿಗಾಗಿ ತುರ್ತಾಗಿ ಕೈ ಸಾಲ ಪಡೆಯುವ ಪದ್ಧತಿ ರೂಢಿಯಲ್ಲಿದೆ. ಬಹುತೇಕರು ಪಡೆದ ಸಾಲವನ್ನು ವಾಪಸ್​​ ನೀಡುತ್ತಾರೆ. ಆದರೆ, ಕೆಲವು ವ್ಯಕ್ತಿಗಳು ಸಾಮಾಜಿಕ, ವೈಯಕ್ತಿಕ ಅಥವಾ ಉತ್ಪಾದಕವಲ್ಲದ ಕಾರ್ಯಗಳಿಗಾಗಿ ಹಣ ಖರ್ಚು ಮಾಡುವುದರಿಂದ, ಮರುಪಾವತಿ ಕ್ಷಮತೆ ಕಡಿಮೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಸಾಲ ನೀಡಿದವರು ಮರು ವಸೂಲಿಗಾಗಿ ಒತ್ತಾಯಿಸುತ್ತಾರೆ. ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಸ್​ ತಿಳಿಸಿದ್ದಾರೆ.


ಜನವರಿ 25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಿತ್ತು. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕರ್ನಾಟಕ ವಲಯದ ಅಧ್ಯಕ್ಷರು, ಭಾರತೀಯ ರಿಸರ್ವ್​​​ ಬ್ಯಾಂಕ್‌ (RBI) ನ ಪ್ರಾಂತೀಯ ನಿರ್ದೇಶಕರು ಹಾಗೂ ಸಾ-ಧನ್ (SA-DHAN), ಎಕೆಎಂಐ, ಎಂಎಫ್ಐಎನ್ ಮತ್ತು ಪ್ರಮುಖ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು, ರಾಜ್ಯಮಟ್ಟದ ಬ್ಯಾಂಕರ್​​​ಗಳ ಸಮಿತಿ ಸಂಚಾಲಕರು, ಅಧಿಕಾರಿಗಳು, ಪೊಲೀಸ್, ಕಂದಾಯ, ಸಹಕಾರ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಭೆ ನಡೆಸಿ, ಕಿರುಕುಳ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೆಶನ ನೀಡಿದ್ದಾರೆ ಎಂದಿದ್ದಾರೆ.


ಕರ್ನಾಟಕದ ಅಧಿನಿಯಮಗಳು: ಕರ್ನಾಟಕ ಲೇವಾದೇವಿದಾರರ ಅಧಿನಿಯಮ-1961 ಅಡಿಯಲ್ಲಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ಈ ಅಧಿನಿಯಮದಡಿಯಲ್ಲಿ 2024ರ ಡಿಸೆಂಬರ್ 31ರವರೆಗೆ 20,425 ಸಂಸ್ಥೆಗಳು ನೋಂದಣಿಯಾಗಿವೆ. ಅದರಲ್ಲಿ 6,590 ಲೇವಾದೇವಿದಾರರು, 6,772 ಪಾನ್‌ ಬ್ರೋಕರ್‌ಗಳು, 7,063 ಹಣಕಾಸಿನ ಸಂಸ್ಥೆಗಳು (Finance Corporation) ಇವೆ ಎಂದು ಸಿಎಸ್​​ ಮಾಹಿತಿ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್