LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನ

ಹಸಿರು ಕ್ರಾಂತಿ ವರದಿ ಬೆಳಗಾವಿ

ಬೆಂಗಳೂರಿನ ಸರ್‌.ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್)ನಲ್ಲಿ ಕರ್ನಾಟಕ ಪ್ರೆಸ್‌ ಕ್ಲಬ್‌ ವತಿಯಿಂದ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ನಿಮಿತ್ತ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬೆಳಗಾವಿಯ ಶ್ರವಣದೋಷವುಳ್ಳ ಮಕ್ಕಳ ಸರ್ಕಾರಿ ಶಾಲೆಯ ಅಧೀಕ್ಷಕ ಶಂಕರಗೌಡ ಬಾಳಗೌಡ ಪಾಟೀಲ ಅವರಿಗೆ 2026ನೇ ಸಾಲಿನ ಶಿಕ್ಷಣ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೋಧನಾ ಕೌಶಲ್ಯ, ಮಾರ್ಗದರ್ಶನ, ನಿಶ್ವಾರ್ಥ ಸೇವೆ, ಜೀವನ ಪಾಠ, ಹೊಣೆಗಾರಿಕೆ, ಆಡಳಿತ ನಿರ್ವಹಣೆಗಾಗಿ ನೀಡುವ ಅನುಪಮ ಸೇವೆಗಾಗಿ ಶ್ರೇಷ್ಠ ಶಿಕ್ಷಕರಿಗೆ ಈ ಪ್ರಶಸ್ತಿಯನ್ನು ಪ್ರತಿವರ್ಷ ನೀಡಲಾಗುತ್ತಿದೆ.


2002ರಲ್ಲಿ ಸಹಾಯಕ ಶಿಕ್ಷಕರಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ತಮ್ಮ ಶಿಕ್ಷಕ ವೃತ್ತಿ ಪ್ರಾರಂಭಿಸಿದ್ದು, ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾಗಿ ನಿಪ್ಪಾಣಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುತ್ತಾರೆ. ತಮ್ಮ ವೃತ್ತಿ ಜೊತೆಗೆ ಎಂಎಸ್‌ಡಬ್ಲ್ಯೂ, ಎಂಎ ರಾಜಶಾಸ್ತ್ರ ಎಂಎ ಮನೋವಿಜ್ಞಾನ ಪದವಿಗಳನ್ನು ಪಡೆದುಕೊಂಡಿದ್ದಾರೆ.

 ಕರ್ನಾಟಕ ಲೋಕಸೇವಾ ಆಯೋಗ ಬೆಂಗಳೂರು ವತಿಯಿಂದ ವಿಶೇಷ ಶಿಕ್ಷಕರಾಗಿ ಆಯ್ಕೆಗೊಂಡು ಬೆಳಗಾವಿಯ ಶ್ರವಣದೋಷವುಳ್ಳ ಮಕ್ಕಳ ಸರ್ಕಾರಿ ಶಾಲೆಯಲ್ಲಿ 2019 ರಿಂದ ಸೇವೆ ಸಲ್ಲಿಸುತ್ತಿದ್ದಾರೆ.

ಸಂಜ್ಞಾ ಭಾಷೆಯಲ್ಲಿ (Sign language )ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆ, ಪರಿಸರ ಮತ್ತು ಆರೋಗ್ಯ ಕಾಳಜಿ ಕುರಿತು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿ ವಿಶೇಷ ಚೇತನ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್‌ ರಾಜ್ಯಾಧ್ಯಕ್ಷ ಎಸ್.ರಾಮಸ್ವಾಮಿ, ಪ್ರಧಾನ ಕಾರ್ಯದರ್ಶಿ ರಮೇಶ.ಎಸ್.ಜಿ, ಹೆನ್ನಾಗರ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಮುನಿರತ್ನ ಎಂ.ಮುನಿರಾಜು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ