LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಟ್ರೇಲರ್ ನಲ್ಲೇ ಮೋಡಿಮಾಡುತ್ತಿರುವ ಶರಣ್ ಚಿತ್ರ ಛೂ ಮಂತರ್  

    ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ,  ಕರ್ವ ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ 'ಛೂ‌ ಮಂತರ್' ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.


     ವಿಭಿನ್ನ ಕಂಟೆಂಟ್ ವುಳ್ಳ ಈ ಚಿತ್ರದ ಟ್ರೇಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಧಿಕ ಸಂಖ್ಯೆಯಲ್ಲಿ ಟ್ರೇಲರ್ ವೀಕ್ಷಣೆಯಾಗುತ್ತಿದ್ದು, ಕುತೂಹಲ ಮೂಡಿಸಿ ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ.

      ಜನವರಿ 10 ರಂದು ಬಹ ನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗುತ್ತಿದೆ. ಸಾಮಾನ್ಯವಾಗಿ ಸಂಕ್ರಾಂತಿ ಸಮಯದಲ್ಲಿ ಬೇರೆ ಭಾಷೆಗಳ ದೊಡ್ಡ ಚಿತ್ರಗಳು ಬಿಡುಗಡೆಯಾಗುವುದರಿಂದ ಕನ್ನಡದ ಚಿತ್ರಗಳನ್ನು ಆ ಸಮಯದಲ್ಲಿ ಹೆಚ್ಚಾಗಿ ಬಿಡುಗಡೆ ಮಾಡುವುದಿಲ್ಲ. ನಮ್ಮ ಚಿತ್ರದ ಕಂಟೆಂಟ್ ಚೆನ್ನಾಗಿದೆ. ಜನರಿಗೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿದೆ. ನಮ್ಮ ಚಿತ್ರ ಪ್ರೇಕ್ಷಕರಿಗೆ ಮೆಚ್ಚುಗೆಯಾಗುವ ಭರವಸೆಯಿದೆ ಹಾಗಾಗಿ ಸಂಕ್ರಾಂತಿ ಸಮಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುತ್ತಿರುವುದಾಗಿ ನಿರ್ಮಾಪಕ ತರಣ್ ಶಿವಪ್ಪ ತಿಳಿಸಿದ್ದಾರೆ.


     ಈಗಾಗಲೇ‌ ಟೀಸರ್, ಟ್ರೇಲರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ತಾರಾಬಳಗದಲ್ಲಿ  ಶರಣ್ , ಚಿಕ್ಕಣ್ಣ,    ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಂತಾದವರಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ  ಸಂಗೀತ ನಿರ್ದೇಶನವಿರುವ 'ಛೂ ಮಂತರ್' ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ