LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಶೆಲ್ ನೆಕ್ಸ್ ಪ್ಲೋರರ್ಸ್ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ತರಬೇತಿ ರಿಫ್ರೆಶರ್ ತರಬೇತಿ-೭ 

ಬೆಳಗಾವಿ: ನಗರದ  ಈಫಾ ಹೋಟೆಲ್‌ನಲ್ಲಿ ಗುರುವಾರ ದಿ. ೨೦ ರಂದು ಶೆಲ್ ನೆಕ್ಸ್ ಪ್ಲೋರರ್ಸ್ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ತರಬೇತಿ  ರಿಫ್ರೆಶರ್ ತರಬೇತಿ-೭ ಕಾರ್ಯಕ್ರಮವನ್ನು ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ವತಿಯಿಂದ ಆಯೋಜಿಸಗಿತ್ತು. ಬೆಳಗಾವಿಯ ೨೦ ಶಾಲೆಗಳ ೨೫  ಶಿಕ್ಷಕರು ತರಬೇತಿಯಲ್ಲಿ ಭಾಗವಹಿಸಿದ್ದರು. ತರಬೇತಿಯಲ್ಲಿ ಸೀನಿಯರ್ ಫೌಂಡೇಶನ್ ವಿಷಯವಸ್ತು, ಪ್ರಾಜೆಕ್ಟ್ ಅಭಿವೃದ್ಧಿ, ಸ್ಪರ್ಧೆಗಳು, ಎನರ್ಜಿ ಕ್ಲಬ್‌ಗಳ ಪರಿಣಾಮಗಳು ಹಾಗೂ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳು (Uಓ Sಆಉs) ಕುರಿತು ತರಬೇತಿ ಡಲಾಯಿತು. ನೈಜ ಜೀವನದ ಸಮಸ್ಯೆಗಳನ್ನು ಗುರುತಿಸಿ, ನವೀನ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ವಿಧಾನಗಳ ಕುರಿತು ಶಿಕ್ಷಕರಿಗೆ ಪ್ರಾಯೋಗಿಕ ಮಾರ್ಗದರ್ಶನ ನೀಡಲಾಯಿತು. ೨೧ನೇ ಶತಮಾನದ ಕೌಶಲ್ಯಗಳಾದ ಸೃಜನಶೀಲತೆ, ವಿಮರ್ಶಾತ್ಮಕ ಚಿಂತನೆ, ಸಂವಹನ, ಸಹಯೋಗ ಮತ್ತು ಸಮಸ್ಯೆ ಪರಿಹಾರಗಳ ಮೂಲಕ ವಿದ್ಯಾರ್ಥಿಗಳಲ್ಲಿ ನಾವೀನ್ಯತೆಯನ್ನು ಬೆಳೆಸಲು ಒತ್ತು ನೀಡಲಾಯಿತು. ವಿದ್ಯಾರ್ಥಿಗಳ ಪ್ರಾಜೆಕ್ಟ್‌ಗಳು Uಓ Sಆಉs ಗೆ ಕೊಡುಗೆ ನೀಡುವ ಮೂಲಕ ಸಾಮಾಜಿಕ ಮತ್ತು ಪರಿಸರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಕುರಿತು ತಿಳಿಸಲಾಯಿತು. ಕಾರ್ಯಕ್ರಮಕ್ಕೆ ಆಆPI ಸಿಬ್ಬಂದಿಯ ಅಮೂಲ್ಯ ಸಹಕಾರ ದೊರೆಯಿತು ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀಟ್ ಹಾಗೂ ಸಿಇಟಿ ವಿಶೇಷ ಮಾರ್ಗದರ್ಶನ ಕಾರ್ಯಾಗಾರಸಣ್ಣ ನೀರಾವರಿ ಇಲಾಖೆ ಕಛೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಲಕ್ಷ್ಮಣ ಸವದಿ ಭೂಮಿ ಪೂಜೆ.೧೨೫ ದಿನಗಳ ಉದ್ಯೋಗ ಖಾತರಿ: ರಾಮದುರ್ಗ ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆಮಹಾದೇವಪ್ಪ ಯಾದವಾಡ ಅಭಿಮಾನಿ ಬಳಗದಿಂದ ಉಚಿತ ಹೆಲ್ಮೆಟ್ ವಿತರಣೆರಾಮದುರ್ಗದಲ್ಲಿ ಉಚಿತ ಉಚಿತ ಹೃದಯ ಹಾಗೂ ಆರೋಗ್ಯ ತಪಾಸಣಾ ಶಿಬಿರಚಚಡಿ ಏತ ನೀರಾವರಿ ಶೀಘ್ರ  ಯೋಜನೆ ಅನುಷ್ಠಾನಕ್ಕೆ ಅಗ್ರಹಿಸಿ ರೈತರಿಂದ ದಿ. 24 ರಂದು ರಸ್ತಾರೋಖೊ.ಮಲ್ಲಿಕಾರ್ಜುನ ಖರ್ಗೆ ಭಾಷಣದ ಸ್ಥಳ ಶುದ್ಧೀಕರಣಕ್ಕೆ ಖಂಡನೆ: ಕಾಗವಾಡದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ಶೆಲ್ ನೆಕ್ಸ್ ಪ್ಲೋರರ್ಸ್ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ತರಬೇತಿ ರಿಫ್ರೆಶರ್ ತರಬೇತಿ-೭  ಕಂಚವೀರ ನಗರ ನಿವಾಸಿಗಳ ಗ್ರಾಮ ಪಂ ವಿರುದ್ದ ಆಕ್ರೋಶ