LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಕಾಗವಾಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ‘ಪ್ರಜಾಸೇವೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಆಕ್ರೋಶ

ಕಾಗವಾಡ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸರ್ಕಾರದಿಂದ ಉಚಿತವಾಗಿ ನೀಡಬೇಕಾದ ಔಷಧಿಗಳನ್ನು ನೀಡದೆ, ಹೊರಗಿನಿಂದ ಔಷಧಿ ಖರೀದಿಸುವಂತೆ ಚೀಟಿ ನೀಡಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದರು. ತಾಲೂಕು ಆಡಳಿತದ ವತಿಯಿಂದ ಶೇಡಬಾಳ ಪಟ್ಟಣದ ಬಸವೇಶ್ವರ ಸಭಾಭವನದಲ್ಲಿ ಶನಿವಾರ ದಿ. 03 ರಂದು ಆಯೋಜಿಸಿದ್ದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಅದಕ್ಕೆ ಅಧಿಕಾರಿಗಳು ಕೆಲ ಸಮಸ್ಯೆಗಳ ಇತ್ಯರ್ಥಕ್ಕೆ ಸ್ಥಳದಲ್ಲಿಯೇ ಸ್ಪಂದಿಸಿದರೇ ಉಳಿದ ಸಮಸ್ಯೆಗಳಿಗೆ ಶೀರ್ಘ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ ರವೀಂದ್ರ ಹಾದಿಮನಿ ಮಾತನಾಡಿ, ನಿಮ್ಮ ಮನೆ ಬಾಗಿಲಿಗೆ ನಮ್ಮ ಸರ್ಕಾರ ಎಂಬ ಘೋಷವಾಕ್ಯದೊಂದಿಗೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿ, ಶೀಘ್ರ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮತ್ತು ಪ್ರತಿಯೊಬ್ಬರೂ ಸಹ ಇಲ್ಲಿ ತೆರೆದಿರುವ ಆನ್‌ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಿ, ತಮ್ಮ ಸಮಸ್ಯೆಗಳನ್ನು ಮಂಡಿಸಬೇಕೆAದು ತಿಳಿಸಿದರು.
ಮುಖಂಡ ಶ್ರೀನಿವಾಸ ಕಾಂಬಳೆ ಮಾತನಾಡಿ, ಕಾಗವಾಡದ ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರ ಪೂರೈಸುವ ಔಷಧಿಗಳನ್ನು ನೀಡುವ ಬದಲು ಹೊರಗಿನಿಂದ ಔಷಧಿ ತರುವಂತೆ ಚೀಟಿ ಬರೆಯಲಾಗುತ್ತಿದೆ. ಹೊರಗಿನಿಂದಲೇ ಔಷಧಿ ಖರೀದಿಸುವುದಾದರೆ ಸರ್ಕಾರಿ ಆಸ್ಪತ್ರೆ ಏಕೆ ಬೇಕು ಎಂದು ಪ್ರಶ್ನಿಸಿದರು. ಹಾವು ಕಡಿತದಂತಹ ತುರ್ತು ಸಂದರ್ಭಗಳಲ್ಲಿಯೂ ಔಷಧಿ ಲಭ್ಯವಿಲ್ಲ ಎಂದು ಹೇಳಲಾಗುತ್ತಿದ್ದು, ಬಡವರು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಹೆಚ್ಚಿನ ಹಣ ಖರ್ಚು ಮಾಡಬೇಕಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಭೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳಿಗೆ ಸಲ್ಲಿಸಿದರು.
 ರವೀಂದ್ರ ನಾಂದನಿ ಬಿ ಆರ್ ಸಿ. ನಿರೂಪಿಸಿದರು 
ಈ ವೇಳೆ ಶೇಡಬಾಳ ಪ.ಪಂ. ಅಧ್ಯಕ್ಷ ಉತ್ಕರ್ಷ ಪಾಟೀಲ, ಇಒ ವೀರಣ್ಣ ವಾಲಿ, ಗ್ರೆಡ್-2 ತಹಶೀಲ್ದಾರ ರಶ್ಮಿ ಜಕಾತಿ, ಉಪ ತಹಶೀಲ್ದಾರ ಅಣ್ಣಾಸಾಬ ಕೋರೆ, ಸಿಡಿಪಿಒ ಸಂಜಯಕುಮಾರ ಸದಲಗೆ, ಪಿಎಸ್‌ಐ ರಾಘವೇಂದ್ರ ಖೋತ, ಬಿಸಿಎಂ ಅಧಿಕಾರಿ ವೆಂಕಟೇಶ ಕುಲಕರ್ಣಿ, ಅರಣ್ಯ ಇಲಾಖೆಯ ರಾಕೇಶ ಅರ್ಜುನವಾಡ, ಕುಡಿಯುವ ನೀರು ಸರಬರಾಜು ಇಲಾಖೆಯ ರವೀಂದ್ರ ಮುರಗಾಲಿ, ಹೆಸ್ಕಾಂ ಎಇಇ ಎ.ಎಸ್. ಮಾಕಣಿ, ಡಿ.ಎಸ್. ಅರಳೀಕಟ್ಟಿ, ಕೃಷಿ ಅಧಿಕಾರಿ ನಿಂಗನಗೌಡ ಬಿರಾದರ, ತೋಟಗಾರಿಗೆ ಇಲಾಖೆಯ ರೇಖಾ ಹಳ್ಳೂರ, ಪ.ಪಂ. ಮುಖ್ಯಾಧಿಕಾರಿ ಕೆ.ಕೆ. ಗಾವಡೆ ಸೇರಿದಂತೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವನ್ಯಜೀವಿಗಳಿಗೂ ಮಾನವರಂತೆ ಮನಸ್ಸಿದೆ, ಅವುಗಳನ್ನು ಪ್ರೀತಿಸೋಣ: ಡಿಎಫ್‌ಒ ಮಲ್ಲಿನಾಥ ಕುಸನಾಳದೈನಂದಿನ ಜೀವನದಲ್ಲಿ ಪ್ರಾಣಾಯಾಮದಿಂದ ಆರೋಗ್ಯ ಮತ್ತು ಮನಃಶಾಂತಿ: ಅಮೃತಾಂನಂದ ಮಹಾಸ್ವಾಮಿಗಳ ಬೋಧನೆಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲ ಅವರ 59ನೇ ಜನ್ಮದಿನದ ನಿಮಿತ್ತ ಉಚಿತ ಆರೋಗ್ಯ ತಪಾಸಣಾ ಶಿಬಿರಕೊಪ್ಪಳದಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಸಾಮೂಹಿಕ ಪಿಂಡ ಪ್ರದಾನ ಹಾಗೂ ಪಿತೃ ತರ್ಪಣಬಳ್ಳಾರಿಯ ಶ್ರೀ ಸಣ್ಣದುರ್ಗಮ್ಮ ದೇವಸ್ಥಾನದಲ್ಲಿ  11ನೇ ವರ್ಷದ ಶರನ್ನವರಾತ್ರಿ ಉತ್ಸವ ಇಂದು ಹನುಮಾನ್ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮಮೂಳೆಯ ಗುಣಮಟ್ಟ ಕಡಿಮೆ ಇರುವ ರೋಗಿಗಳಲ್ಲಿ ಆಂಕರ್‌ರಹಿತ ರಿಪೇರ್‌ಗೆ ನೆರವಾಗುವ ಸಾಧನ ಅಭಿವೃದ್ಧಿಹೊಸಪೇಟೆಯಲ್ಲಿ ಪಂಡಿತ್ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೆಗ್ರಾಮೀಣ ಕ್ರೀಡೆಗಳು ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಸಂಕೇತ: ಶಾಸಕ ವಿಶ್ವಾಸ ವೈದ್ಯಸಮಾಜದ ಓರೆಕೋರೆಗಳನ್ನು ತಿದ್ದುವ ವರದಿಗಾರರು ಶ್ರೇ?ರು: ಧರೆಪ್ಪ ಸಾಂಗ್ಲೀಕರ