LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

*ಮೂನ್ ವಾಕರ್ಸ್ ವತಿಯಿಂದ "ಶ್ರಾವಣ ಸಂಭ್ರಮ" ಕಾರ್ಯಕ್ರಮ*

*ಬಳ್ಳಾರಿ:19:.ನಗರದ ಪಾಂಚಜನ್ಯ ಸಭಾಂಗಣದಲ್ಲಿ ಮೂನ್ ವಾಕರ್ಸ್ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ "ಶ್ರಾವಣ ಸಂಭ್ರಮ" ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿತು.
ಕಾರ್ಯಕ್ರಮವನ್ನು ಬಯಲಾಟ ರಂಗ ನಿರ್ದೇಶಕ ಮುದ್ದಟನೂರು ಎಚ್. ತಿಪ್ಪೇಸ್ವಾಮಿ ಅವರು ಉದ್ಘಾಟಿಸಿ ಮಾತನಾಡಿದರು. ಕಲೆ, ನಾಡು, ನುಡಿ, ಸಂಸ್ಕೃತಿ ಮತ್ತು ಸಂಸ್ಕಾರ ಇವೆಲ್ಲವೂ ಭಾರತೀಯ ಪರಂಪರೆಯ ಮೂಲ ಬೇರುಗಳು ಎಂದು ಅವರು ಹೇಳಿದರು.
ಇಂತಹ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರೋತ್ಸಾಹ ನೀಡುತ್ತಿದೆ. ಜೊತೆಗೆ ಬಳ್ಳಾರಿ ಜಿಲ್ಲಾ ಕಲಾವಿದರ ಸಂಘವು ಆಯೋಜಿಸುವ ವಾರ್ಷಿಕ ಕಾರ್ಯಕ್ರಮದಲ್ಲಿ ಇಂತಹ ಕಲಾವಿದರಿಗೆ ಮತ್ತು ಕಲಾ ಸಂಸ್ಥೆಗಳಿಗೆ ವೇದಿಕೆಯನ್ನು ಕಲ್ಪಿಸಿ ಕೊಡುವುದರ ಜೊತೆಗೆ ಪ್ರೋತ್ಸಾಹಿಸುತ್ತದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಲಾವಿದರಾದ ರೇಣುಕಾ, ಲಲಿತಾ ಕುಮಾರಿ, ಕಲಾಪೋಷಕರು ಹಾಗೂ ನೃತ್ಯ ಗುರುಗಳಾದ ಜಯಣ್ಣ ಬಬ್ಲೂ ಸೇರಿದಂತೆ ಮತ್ತಿತರರು ಅತಿಥಿಗಳಾಗಿ ಭಾಗವಹಿಸಿದ್ದರು.
ಮೂನ್ ವಾಕರ್ಸ್ ಸಾಂಸ್ಕೃತಿಕ ಕಲಾ ಸಂಘದ ಮಕ್ಕಳು ಮತ್ತು ಕಲಾವಿದರಿಂದ ವಿವಿಧ ಸಮೂಹ ನೃತ್ಯ ಪ್ರದರ್ಶನಗೊಂಡವು. ಶ್ರಾವಣ ಮಾಸದ ವಿಶೇಷತೆಯನ್ನು ಪ್ರತಿಬಿಂಬಿಸುವ ನೃತ್ಯಗಳು ಪ್ರೇಕ್ಷಕರ ಮೆಚ್ಚುಗೆ ಪಾತ್ರವಾದವು.
ಕಾರ್ಯಕ್ರಮದಲ್ಲಿ ನಗರದ ಕಲಾರಸಿಕರು, ಪೋಷಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾರದ ಗಡುವು ಠರಾವು ಅಂಗೀಕರಿಸದಿದ್ದರೆ ಬುಧವಾರ ಬೃಹತ್ ಪ್ರತಿಭಟನೆ: ಆರ್. ಅಭಿಲಾಷ್ ಎಚ್ಚರಿಕೆ. ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ:ಈಶ್ವರ ಖಂಡ್ರೆರೈತ ಸಂಘ ಸ್ಥಾಪನೆಯಿಂದ ರೈತರ ಸಮಸ್ಯ ಪರಿಹಾರ :ಚೂನಪ್ಪ ಪೂಜೇರಿ ಯುವಶಕ್ತಿ ರಾಷ್ಟçಶಕ್ತಿಯಾಗಲಿ: ಡಾ. ಇಂದ್ರಾಣಿ ಕರೆಪೂರ್ವಭಾವಿ ಸಭೆಯಲ್ಲಿ ನಿರ್ಧಾರ: ಮಹನೀಯರ ಜಯಂತಿಗಳ ಅರ್ಥಪೂರ್ಣ ಆಚರಣೆ - ತಹಶೀಲ್ದಾರ ಶೇಷಾವಲಿಬಿಮ್ಸ್  ನಿರ್ದೇಶಕ ಡಾ. ಗಂಗಾಧರ ಗೌಡರವರನ್ನು  ನಿರ್ದೇಶಕರನ್ನಾಗಿ ಮುಂದುವರೆಸಬೇಡಿ : ಕೆ. ಪಿ. ಹಸೇನ್ ಅಗ್ರಹ ಕನಿಷ್ಠ ವೇತನ ಜಾರಿಗೊಳಿಸಲು ಗ್ರಾಮ ಪಂಚಾಯಿತಿ ನೌಕರರಿಂದ ಧರಣಿ  : 13 ಬೇಡಿಕೆಗಳ ಈಡೇರಿಕೆಗೆ ಒತ್ತಾಯ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಅಹೋರಾತ್ರಿ ಧರಣಿ ಎರಡನೇಯ ದಿನದ ಹೋರಾಟ.ಕೆಪಿಎಸ್‌ಸಿ ಅಕ್ರಮದ ಬೆನ್ನತ್ತಿದ ಇಡಿ : ಕಿತ್ತೂರಿನಲ್ಲಿ ಸಂಬಂಧಿಕರ ಮನೆ ಮೇಲೆ ತಪಾಸಣೆ*ಮೂನ್ ವಾಕರ್ಸ್ ವತಿಯಿಂದ "ಶ್ರಾವಣ ಸಂಭ್ರಮ" ಕಾರ್ಯಕ್ರಮ*