ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. ಮುಡಾ ಹಗರಣ ಪತಿಗೆ ಕಂಟಕವಾಗಿ ಪರಿಣಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ನಿ ಪಾರ್ವತಿಯವರು ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ವಾಪಸ್ ನೀಡಿದ್ದರು.
ಈ ಬೆನ್ನಲ್ಲೇ ಮೈಸೂರು ಬಿಜೆಪಿ ಶಾಸಕ ಟಿ.ಎಸ್ ಶ್ರೀವತ್ಸ್ 2020ರಲ್ಲಿ 50:50 ಅನುಪಾತದಲ್ಲಿ ಹಂಚಿಕೆಯಾಗಿದ್ದ ಮುಡಾ ನಿವೇಶನಗಳನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಶಾಸಕ ಟಿಎಸ್ ಶ್ರೀವತ್ಸ್ ಅವರ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ.
50:50 ಅನುಪಾತದ ನಿವೇಶನಗಳನ್ನು ಹಿಂಪಡೆಯಲು ಅಗತ್ಯ ಕ್ರಮಕೈಗೊಳ್ಳಿ ಎಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿದ್ದಾರೆ. ಇದರಿಂದ 50:50 ಅನುಪಾತದಲ್ಲಿ ನಿವೇಶನ ಪಡೆದವರಿಗೆ ಟೆನ್ಷನ್ ಶುರುವಾಗಿದೆ.