LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದರ್ಶನ ಮತ್ತು ಇತರರನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸುವಂತೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ದರ್ಶನ್​ಗೆ​​ ರಾಜಾತಿಥ್ಯ ನೀಡುತ್ತಿರುವ ವಿಚಾರ ಸುದ್ದಿ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದು. ಜೈಲಿನ ಅವ್ಯವಸ್ಥೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಡಾಮಂಡಲಗೊಂಡಿದ್ದಾರೆ.

ಪ್ರಸ್ತುತ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಹಾಗೂ ದರ್ಶನ್ ಮತ್ತು ಅವರ ಸಹಚರರನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೆ, ಕಾರಾಗೃಹಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಡಿಜಿಪಿಗೂ ಸೂಚಿಸಿದ್ದಾರೆ.

ಈ ಮಧ್ಯೆ, ನಟ ದರ್ಶನ್‌ಗೆ ಜೈಲಿನೊಳಗೆ ಸಿಗರೇಟ್ ಸೇದಲು ಮತ್ತು ಕಾಫಿ ಕುಡಿಯಲು ಅವಕಾಶ ನೀಡಿದ ಇಬ್ಬರು ಜೈಲರ್‌ಗಳು ಸೇರಿದಂತೆ ಏಳು ಸಿಬ್ಬಂದಿಯನ್ನು ಕಾರಾಗೃಹ ಇಲಾಖೆ ಅಮಾನತುಗೊಳಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ ಅವರು ಸೋಮವಾರ ಈ ವಿಚಾರವನ್ನು ತಿಳಿಸಿದರು.

ದರ್ಶನ್ ತಮ್ಮ ಬ್ಯಾರಕ್‌ನ ಹೊರಗೆ ಕುರ್ಚಿಯ ಮೇಲೆ ಕುಳಿತು ಒಂದು ಕೈಯಲ್ಲಿ ಸಿಗರೇಟ್ ಮತ್ತು ಮತ್ತೊಂದು ಕೈಯಲ್ಲಿ ಕಾಫಿ ಮಗ್‌ ಹಿಡಿದುಕೊಂಡಿರುವ ಫೋಟೋ ಭಾನುವಾರ ವೈರಲ್ ಆಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್