Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಪಕ್ಷಗಳ ಆರೋಪಕ್ಕೆ ಎದಿರೇಟು ನೀಡಬೇಕೆಂದು ಸಿದ್ದರಾಮಯ್ಯ ಶಾಸಕರಿಗೆ ಸೂಚನೆ

ಬೆಂಗಳೂರು: ಅಧಿವೇಶನದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಪ್ರಕರಣದ ಬಗ್ಗೆ ಪ್ರತಿಪಕ್ಷಗಳ ಆರೋಪಕ್ಕೆ ರಕ್ಷಣಾತ್ಮಕವಾಗಿರುವ ಬದಲು ಪ್ರಬಲವಾಗಿ ಎದಿರೇಟು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ.


ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ''ಸದನದಲ್ಲಿ ಪ್ರತಿಪಕ್ಷಗಳ ವಾಗ್ದಾಳಿಗೆ ಗಟ್ಟಿಯಾಗಿ ಪ್ರತ್ಯುತ್ತರ ನೀಡಬೇಕು. ನಾವು ಬಿಜೆಪಿ ಹೇಳಿದ್ದನ್ನು ಕೇಳಿಕೊಂಡು ಕೂತಿದ್ದೇವೆ. ಈ ವಾರ ಡಿಫೆನ್ಸಿವ್ ಆಗಿ ಮುಂದುವರೆದಿದ್ದು ಸಾಕು. ಇನ್ಮುಂದೆ ನೇರಾನೇರ ಬಿಜೆಪಿಗೆ ಟಕ್ಕರ್ ಕೊಡಬೇಕು. ಬಿಜೆಪಿಯವರು ಹೇಳಿದ್ದನ್ನು ಕೇಳಿಕೊಂಡು ಕೂರಲು ನಾವು ಸದನಕ್ಕೆ ಹೋಗುವುದಲ್ಲ. ಎಲ್ಲ ಶಾಸಕರು ಸಚಿವರ ಹಾಜರಾತಿ ಕಡ್ಡಾಯ. ಬಿಜೆಪಿಯ ಲೋಪದೋಷಗಳನ್ನು ಎತ್ತಿ ಹಿಡಿದು ತೋರಿಸಬೇಕು'' ಎಂದು ಸಲಹೆ ಕೊಟ್ಟಿದ್ದಾರೆ.


ಮುಡಾ ಪ್ರಕರಣ ಸಂಬಂಧ ಸಭೆಯಲ್ಲಿ ಸ್ಪಷ್ಟನೆ ನೀಡಿದ ಸಿಎಂ, ''ಬಿಜೆಪಿ ಮತ್ತು ಜೆಡಿಎಸ್ ನಾಯಕರು ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ಕಾನೂನಾತ್ಮಕವಾಗಿ ಯಾವುದೇ ತೊಂದರೆ ಇಲ್ಲ. ಆದರೂ, ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ. ಮುಡಾದಲ್ಲಿ ನಮ್ಮ ಕುಟುಂಬ ಯಾವುದೇ ಅಕ್ರಮ ಎಸಗಿಲ್ಲ.‌ ಕಾನೂನು ವ್ಯಾಪ್ತಿ ಮೀರಿ ನಾವು ಎಲ್ಲೂ, ಏನೂ ಮಾಡಿಲ್ಲ" ಎಂದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ