ನಿನ್ನೆ ಬೆಳಗ್ಗೆ 11 ಗಂಟೆಯಿಂದ ಸಂಜೆಯವರೆಗೂ ಇಡೀ ದಿನ ವಿವಿಧ ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ. ಆದ್ರೆ, ಬಜೆಟ್ ಮಂಡನೆಯಾವಾಗ ಎನ್ನುವುದೇ ಇನ್ನೂ ದಿನಾಂಕ ಫಿಕ್ಸ್ ಆಗಿಲ್ಲ. ಹೀಗಾಗಿ ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ದಿನಾಂಕ ನಿಗಧಿ ಮಾಡಲಿದ್ದಾರೆ.
ಇನ್ನೂ ಒಳಾಡಳಿತ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ, ಸಣ್ಣ ಕೈಗಾರಿಕಾ, ಇಂಧನಾ ಇಲಾಖೆ, ಲೋಕೋಪಯೋಗಿ ಕಾರ್ಮಿಕ ಇಲಾಖೆ ಸೇರಿದಂತೆ 10ಕ್ಕೂ ಹೆಚ್ಚು ಇಲಾಖೆಗಳ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಇಂದು (ಫೆಬ್ರವರಿ 07) ಸಭೆ ಮುಂದುವರಿಯಲಿದ್ದು, ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ ಇಲಾಖೆ, ಕಂದಾಯ ಇಲಾಖೆ, ಕೃಷಿ ಇಲಾಖೆ, ಅಲ್ಪಸಂಖ್ಯಾತ ಮತ್ತು ವಕ್ಪ್ ಸೇರಿದಂತೆ ಹಲವು ಇಲಾಖೆಗಳೊಂದಿಗೆ ಸಭೆ ನಡೆಯಲಿದೆ. ಬಹುತೇಕ ಎಲ್ಲ ಇಲಾಖೆಗಳ ಸಚಿವರು ಹೆಚ್ಚು ಅನುದಾನದ ಜೊತೆಗೆ ಹೊಸ ಕಾರ್ಯಕ್ರಮಗಳ ಅನುದಾನಕ್ಕೂ ಡಿಮ್ಯಾಂಡ್ ಮಾಡಿದ್ದಾರೆ.