Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಆಪರೇಷನ್ ಕೈ' ಜೆಡಿಎಸ್ ಅಭ್ಯರ್ಥಿಗೆ ಸಿದ್ದರಾಮಯ್ಯ ಗಾಳ: ಆಪರೇಷನ್ ಜೆಡಿಎಸ್​ಗೆ ಕೈ ಹಾಕಿದ ಕುಮಾರಸ್ವಾಮಿ

¨ÉAUÀ¼ÀÆgÀÄ,K1: ಮಂಡ್ಯ ಲೋಕಸಭಾ ಕ್ಷೇತ್ರ ಹೆಚ್​ಡಿ ಕುಮಾರಸ್ವಾಮಿಗೆ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಸಿದ್ದರಾಮಯ್ಯಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಹೀಗಾಗಿ ಎರಡು ಕ್ಷೇತ್ರಗಳಲ್ಲಿ ಇಬ್ಬರು ನಾಯಕರು ಆಪರೇಷನ್​ಗೆ ಕೈಹಾಕಿದ್ದಾರೆ. ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಕುಳಿತುಕೊಂಡು ಜೆಡಿಎಸ್ ನಾಯಕರಿಗೆ ಗಾಳ ಹಾಕುತ್ತಿದ್ದರೆ, ಮಂಡ್ಯದಲ್ಲಿ ಕುಮಾರಸ್ವಾಮಿ ಅವರು ಕಾಂಗ್ರೆಸ್  ನಾಯಕರಿಗೆ ಗಾಳ ಹಾಕುತ್ತಿದ್ದಾರೆ.

ಇತ್ತೀಚೆಗೆ, ಚಿಕ್ಕಬಳ್ಳಾಪುರದಲ್ಲಿ ಕುಮಾರಸ್ವಾಮಿ ಆಪ್ತರೂ ಆಗಿರುವ ಜೆಡಿಎಸ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಅವರು ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇದೀಗ, ವರುಣಾದಲ್ಲಿ ತನ್ನ ವಿರುದ್ಧವೇ ಸ್ಪರ್ಧಿಸಿದ್ದ ಜೆಡಿಎಸ್ ಮಾಜಿ ಶಾಸಕ ಭಾರತಿ ಶಂಕರ್ ಅವರನ್ನೇ ಸಿದ್ದರಾಮಯ್ಯ ಅವರು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಭಾರತಿ ಶಂಕರ್ ಅವರು ಕಾಂಗ್ರೆಸ್ ಸೇರ್ಪಡೆಯಾದರು. ನಾಯಕನಿಗೆ ಕಾಂಗ್ರೆಸ್ ಬಾವುಟ ನೀಡಿ ಸಿದ್ದರಾಮಯ್ಯ ಅವರು ಪಕ್ಷಕ್ಕೆ ಬರಮಾಡಿಕೊಂಡರು. ಭಾರತಿ ಶಂಕರ್ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದ್ದ ವರುಣಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಇನ್ನೊಂದೆಡೆ, ಜೆಡಿಎಸ್ ಮುಖಂಡರಿಗೆ ಕಾಂಗ್ರೆಸ್ ಗಾಳ ಹಾಕುತ್ತಿರುವ ಹಿನ್ನೆಲೆ ಅಲರ್ಟ್ ಆಗಿರುವ ಕುಮಾರಸ್ವಾಮಿ, ಮಂಡ್ಯದಲ್ಲಿ ರಿವರ್ಸ್ ಆಪರೇಷನ್​ಗೆ ಮುಂದಾಗಿದ್ದಾರೆ. ಸುಮಲತಾ ಅಂಬರೀಶ್ ಅವರ ಆಪ್ತರಾಗಿರುವ ಬಿಜೆಪಿ ಮುಖಂಡ ಸಚ್ಚಿದಾನಂದ ಅವರು ಈಗಾಗಲೇ ಕುಮಾರಸ್ವಾಮಿ ಬೆಂಬಲಿಸಿದ್ದಾರೆ. ಈ ನಡುವೆ, ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರನ್ನು ಜೆಡಿಎಸ್​ಗೆ ಸೇರ್ಪಡೆಗೊಳಿಸುವ ಮೂಲಕ ಕೈ ನಾಯಕರಿಗೆ ಮಾಸ್ಟರ್ ಸ್ಟ್ರೋಕ್ ನೀಡಲು ಮುಂದಾಗಿದ್ದಾರೆ.

ಕಾಂಗ್ರೆಸ್ ಮುಖಂಡ, ದಿವಂಗತ ಅಂಬರೀಶ್ ಆಪ್ತ ಅಮರಾವತಿ ಚಂದ್ರಶೇಖರ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಳ್ಳಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಈಗಾಗಲೇ ಅಮರಾವತಿ ಚಂದ್ರಶೇಖರ್​ ಅವರನ್ನು ಭೇಟಿಯಾಗಿ ಕುಮಾರಸ್ವಾಮಿ ಮಾತುಕತೆ ನಡೆಸಿದ್ದರು. ಇದೀಗ ಮಂಡ್ಯದ ಖಾಸಗಿ ಹೋಟೆಲ್​ನಲ್ಲಿ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೌರಿಶಂಕರ್ ಬಳಿಕ ಜೆಡಿಎಸ್ ನಾಯಕರಿಲ್ಲದಂತಾಗಿತ್ತು. ಅದರಂತೆ, ಇತ್ತೀಚೆಗೆ, ಮಾಜಿ ಶಾಸಕ ಹೆಚ್​ ನಿಂಗಪ್ಪ ಅವರನ್ನು ಭೇಟಿಯಾಗಿ ತಮ್ಮ ಪಕ್ಷಕ್ಕೆ ಬರುವಂತೆ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಆಹ್ವಾನ ನೀಡಿದ್ದರು. ಇದರ ಬೆನ್ನಲ್ಲೇ, ವೈಯಕ್ತಿಕ ಕಾರಣ ನೀಡಿ ನಿಂಗಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಇದರ ಪ್ರತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರವಾನಿಸಿದ್ದಾರೆ.

ಪ್ರತಿ ಚುನಾವಣೆಯಲ್ಲೂ ಪಕ್ಷಾಂತರ ಮಾಡುವ ಹೆಚ್.ನಿಂಗಪ್ಪ ಅವರು ಈ ಹಿಂದೆ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾಂತರವಾಗಿದ್ದರು. ಇದೀಗ ಕಾಂಗ್ರೆಸ್​ನಿಂದ ವಾಪಸ್ ಜೆಡಿಎಸ್​ ಸೇರ್ಪಡೆಯಾಗುವ ಸಾಧ್ಯತೆ ಇದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ