Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ಧಲಿಂಗೇಶ್ವರ ಶಿವಯೋಗಿಗಳು ಐತಿಹಾಸಿಕ ಪುರುಷರು : ಚನ್ನವೀರ ಶಿವಾಚಾರ್ಯ ಸ್ವಾಮೀಜಿಗಳು

ಸಿರುಗುಪ್ಪ, ಏ.11:  ‘ಎಡೆಯೂರು ತೋಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು ಐತಿಹಾಸಿಕ ಪುರುಷರು’ ಎಂದು ಪಾಲ್ತೂರು ಕಲ್ಲುಹೊಳೆ ಸಂಸ್ಥಾನ ಮಠದ ಚನ್ನವೀರ ಶಿವಾಚಾರ್ಯ ಸ್ವಾಮೀಜಿಗಳು ತಿಳಿಸಿದರು.

ತಾಲ್ಲೂಕಿನ ನಾಗರಹಾಳು ಗ್ರಾಮದ ಶ್ರೀಬೃಹನ್ಮಠದಲ್ಲಿ ಏಕೀಕರಣ ಹೋರಾಟಗಾರರಾದ ಲಿಂಗೈಕ್ಯ ಶರಣ ದೊಡ್ಡಯ್ಯಶಾಸ್ತ್ರಿಗಳ ಮತ್ತು ಲಿಂಗೈಕ್ಯ ಬಸವಮ್ಮ ಅವ್ವನವರ ಪುಣ್ಯಾರಾಧನೆ ಮತ್ತು ರಥೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಎಡೆಯೂರು ತೋಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳ ಪುರಾಣ ಪ್ರವಚನ ಉದ್ಘಾಟಿಸಿ, ಲೋಕದ ಜನರ ಅಧರ್ಮ, ಅನ್ಯಾಯಗಳನ್ನು ತಿದ್ದುವುದಕ್ಕೋಸ್ಕರ ಸಿದ್ಧಲಿಂಗೇಶ್ವರರು ಉದಯಿಸಿದರು ಎಂದು ಅಭಿಪ್ರಾಯಪಟ್ಟರು.

‘ನೈತಿಕ, ಧಾರ್ಮಿಕ, ತಾತ್ವಿಕ ಚಿಂತನೆಗಳನ್ನು ಜಾಗೃತಗೊಳಿಸಿದವರು ಸಿದ್ಧಲಿಂಗೇಶ್ವರರು’ ಎಂದು ಆಂಧ್ರಪ್ರದೇಶದ ಆದೋನಿಯ ಮಂಡಗಿರಿ ಕಲ್ಮಠದ ಗುರುಸಿದ್ಧದೇವರು ತಿಳಿಸಿದರು.

ಗಡಿನಾಡ ಸಾಹಿತಿ ನಾ.ಮ. ಮರುಳಾರಾಧ್ಯರ ಪುರಾಣ ಪ್ರಚಚನ, ನಾ.ಮ. ಜಗದೀಶ್ ಗವಾಯಿಗಳ ಪುರಾಣ ವಾಚನ, ಧಾರವಾಡ ಪ್ರಸನ್ನಕುಮಾರ ಹಿರೇಮಠ ವಾಯೋಲಿನ್ಗೆ ವಂದಲಿ ಬಸವರಾಜ ಹೂಗಾರ್ ತಬಲಾಸಾಥ್ ನೀಡಿದರು.

ಶರಣ ಬಸವರಾಜಯ್ಯತಾತ, ಶ್ರೀಕಂಠಯ್ಯತಾತ, ಎನ್.ಎಂ. ಕಲಿಗಣನಾಥ, ಚಂದ್ರಗೌಡ, ಹುಸೇನಪ್ಪ, ಹೊನ್ನೂರಸಾಬ್, ಶ್ರೀಮಠದ ಭಕ್ತರು, ಗ್ರಾಮಸ್ಥರು ಹಾಜರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ