Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ನಾಗರಿಕ ಹೋರಾಟ ಸಮಿತಿಯಿಂದ ಸಹಿ ಸಂಗ್ರಹಣಾ ಅಭಿಯಾನ


ಬಳ್ಳಾರಿ,ಜೂ.೩೦: ನಾಗರಿಕ ಹೋರಾಟ ಸಮಿತಿಯಿಂದ ಮೂಲ ಸೌಕರ್ಯಗಾಗಿ ಆಗ್ರಹಿಸಿ ಸಹಿ ಸಂಗ್ರಹಣಾ ಅಭಿಯಾನವನ್ನು ರಾಯಲ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜುಲೈ ೨೭ರಂದು ನಡೆಯುವ ಬೃಹತ್ ಜನತೆಯ ಸಮಾವೇಶದ ಪೂರಕವಾಗಿ ಈ ಸಹಿ ಸಂಗ್ರಹಣಾ ಅಭಿಯಾನವನ್ನು ಆಯೋಜಿಸಲಾಗಿತ್ತು. ಇಂದು ಸಾವಿರಾರು ಸಹಿಗಳನ್ನು ಸಂಗ್ರಹಿಸಲಾಯಿತು.

ಸಹಿ ಸಂಗ್ರಹ ಅಭಿಯಾನವನ್ನು ಉದ್ಘಾಟಿಸಿದ ಸಲಹೆಗಾರರಾದ ಮುರ್ತುಜಾ ಸಾಬ್ ಅವರು ಮಾತನಾಡುತ್ತಾ “ಕಳೆದ ೨-೩ ತಿಂಗಳುಗಳಿAದ ಸಮರ್ಪಕ ನಾಗರಿಕ ಸೌಲಭ್ಯಗಳಿಗಾಗಿ ಆಗ್ರಹಿಸಿ ಸಂಬAಧಪಟ್ಟವರಿಗೆ ಅನೇಕ ಮನವಿ ಪತ್ರಗಳನ್ನು ಸಲ್ಲಿಸಿದೆ, ಪ್ರತಿಭಟನೆಗಳನ್ನು ಸಂಘಟಿಸಿದೆ. ಮಹಾನಗರಪಾಲಿಕೆಯಿಂದ, ಜಿಲ್ಲಾಡಳಿತದಿಂದ ಸರಿಯಾದ ಸ್ಪಂದನೆ ಇಲ್ಲ. ನಗರದ ಪರಿಸ್ಥಿತಿಯನ್ನು ಗಮನಿಸಿದರೆ, ಮಹಾನಗರಪಾಲಿಕೆ, ಜಿಲ್ಲಾಡಳಿತ ಹಾಗೂ ಸರ್ಕಾರ ಮೂಲ ಸೌಕರ್ಯದ ಸಮಸ್ಯೆಗಳ ಪರಿಹಾರಕ್ಕೆ ಒಂದು ಹೆಜ್ಜೆಯೂ ಸಹ ಮುಂದಕ್ಕೆ ಹೋಗಿಲ್ಲ ಎನ್ನುವುದು ಮನದಟ್ಟಾಗುತ್ತದೆ. ಬದಲಿಗೆ ನಗರದ ಪರಿಸ್ಥಿತಿ ದಿನದಿನಕ್ಕೆ ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ಬಲಿಷ್ಠ ಜನತೆ ಹೋರಾಟ ರೂಪಿಸಬೇಕು. ಸಹಿ ಸಂಗ್ರಹಣಾ ಅಭಿಯಾನವನ್ನು ಯಶಸ್ವಿಗೊಳಿಸಬೇಕಾಗಿ” ಮನವಿ ಮಾಡಿದರು.

ಬಳ್ಳಾರಿ ನಾಗರಿಕ ಹೋರಾಟ ಸಮಿತಿ ಸಂಚಾಲಕರಾದ ಸೋಮಶೇಖರ ಗೌಡ ಮಾತನಾಡುತ್ತಾ, “ಕುಡಿಯುವ ನೀರಲ್ಲಿ ಚರಂಡಿ ನೀರು ಮಿಶ್ರಣವಾಗದಂತೆ ತಡೆಯುವುದು, ರಿಂಗ್ ರಸ್ತೆ ನಿರ್ಮಿಸುವುದು, ಮೋತಿ ಬ್ರಿಡ್ಜ್ ಅಗಲೀಕರಣ, ಮಹಾನಗರಪಾಲಿಕೆಯ ಸಿಬ್ಬಂದಿ ಹಾಗೂ ಪೌರಕಾಮಿಕರ ಸಂಖ್ಯೆಯನ್ನು ಹೆಚ್ಚಿಸುವುದು, ಸುಧಾಕ್ರಾಸ್ ಮೇಲ್ಸೇತುವೆ ಪೂರ್ಣಗೊಳಿಸುವುದು ತುರ್ತಾಗಿ ಆಗಬೇಕಾದ ಇಂತಹ ಕೆಲಸಗಳ ಬಗ್ಗೆ ಸರಿಯಾದ ಕ್ರಮಗಳಿಲ್ಲ. ಬದಲಿಗೆ ಅವೈಜ್ಞಾನಿಕ, ಅನಾವಶ್ಯಕ ಕಾಮಗಾರಿಗಳಲ್ಲಿ ಜನರ ತೆರಿಗೆ ಹಣ ಪೋಲಾಗುತ್ತಿದೆ. ಜನರ ಆದ್ಯತೆ ಕೈಬಿಟ್ಟು, ಇರುವ ರಸ್ತೆ ಹಾಗೂ ಫುಟ್‌ಪಾತ್‌ನ್ನು ಅಗೆದು ಇನ್ನೊಂದು ರಸ್ತೆ ಹಾಗೂ ಫುಟ್‌ಪಾತ್ ನಿರ್ಮಿಸುವುದು, ಇರುವ ಸರ್ಕಲ್‌ಗಳನ್ನು ಹೊಡೆದು ಹಾಕಿ ಅವೈಜ್ಞಾನಿಕ ಸರ್ಕಲ್‌ಗಳನ್ನು ನಿರ್ಮಿಸುವುದು, ಇವೇ ಬಳ್ಳಾರಿಯಲ್ಲಿ ‘ಅಭಿವೃದ್ಧಿ’ ಕೆಲಸವಾಗಿಬಿಟ್ಟಿವೆ. ಈ ಹಿನ್ನಲೆಯಲ್ಲಿ ನಾಗರಿಕರ ಹೋರಾಟವನ್ನು ತೀವ್ರಗೊಳಿಸುವ ಉದ್ದೇಶದಿಂದ ೧ ಲಕ್ಷ ಸಹಿ ಸಂಗ್ರಹ ಅಭಿಯಾನ ಹಾಗೂ ಜುಲೈ ೨೭, ೨೦೨೫ರಂದು ನಗರದ ಗಾಂಧಿಭವನದಲ್ಲಿ ಬೃಹತ್ ಸಮಾವೇಶ ಸಂಘಟಿಸಲು ನಿರ್ಧರಿಸಲಾಗಿದೆ. ಈ ಸಮಾವೇಶದಲ್ಲಿ ಇತರೆ ಜನಪರ ಸಂಘ ಸಂಸ್ಥೆಗಳನ್ನು ತೊಡಗಿಸಿಕೊಂಡು, ಮುಂದಿನ ದಿನಗಳಲ್ಲಿ ಬೃಹತ್ ಹೋರಾಟಕ್ಕೆ ರೂಪರೇಷೆಗಳನ್ನು ರಚಿಸಲಾಗುವುದು” ಎಂದರು.

ಈ ಕಾರ್ಯಕ್ರಮದಲ್ಲಿ ಮುಖಂಡರಾದ ಡಾ.ಪ್ರಮೋದ್, ಶಾಂತಾ, ನಾಗರತ್ನ, ಗೋವಿಂದ್, ಈಶ್ವರಿ, ರಾಜಾ, ಪಂಪಾಪತಿ ಮುಂತಾದವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ