Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಂದ ಸ್ವಚ್ಛತೆಗಾಗಿ ಸಹಿ ಸಂಗ್ರಹಣೆ ಅಭಿಯಾನ


ಮುದ್ದೇಬಿಹಾಳ ಫೆ., ೦೨- ಪುರಸಭಾ ವ್ಯಾಪ್ತಿಯಲ್ಲಿ ಇಂದು ಸ್ವಚ್ಛ ಭಾರತ್ ಮಿಷನ್ (ಎಸ್‌ಬಿಎಂ) 2.0 ನಗರ ಯೋಜನೆಯಡಿ ಐಇಸಿ (IEC) ಕಾರ್ಯಕ್ರಮವಾಗಿ ಸ್ವಚ್ಛತಾ ರ‍್ಯಾಲಿಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಸರ್ಕಾರಿ ಗಂಡು ಮಕ್ಕಳ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಾಲಾ ಮಕ್ಕಳಿಗೆ ಸ್ವಚ್ಛತೆಯ ಮಹತ್ವದ ಕುರಿತು ಸಮಗ್ರ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪ್ಲಾಸ್ಟಿಕ್ ನಿಷೇಧ, ತ್ಯಾಜ್ಯ ವಿಂಗಡಣೆ, ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಕುರಿತು ಮಾಹಿತಿ ನೀಡಲಾಗಿದ್ದು, ಸ್ವಚ್ಛ ನಗರ ನಿರ್ಮಾಣದ ಸಂಕಲ್ಪದೊಂದಿಗೆ ವಿದ್ಯಾರ್ಥಿಗಳಿಂದ ಸ್ವಚ್ಛತೆಗಾಗಿ ಸಹಿ ಸಂಗ್ರಹಣೆ ಅಭಿಯಾನವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮುದ್ದೇಬಿಹಾಳ ಪುರಸಭೆಯ ಆಫೀಸ್ ಮ್ಯಾನೇಜರ್ ಹೆಚ್.ಎ. ದಲಾಯತ್, ಆರೋಗ್ಯ ನಿರೀಕ್ಷಕರು ಜಾವೇದ್ ಅಹ್ಮದ್, ನಾಯ್ಕೋಡಿ ಮಹಂತೇಶ್ ಕಟ್ಟಿಮನಿ, ಪುರಸಭೆಯ ಇತರೆ ಸಿಬಂದಿಗಳು, ಶಾಲೆಯ ಮುಖ್ಯಗುರುಗಳು, ಶಿಕ್ಷಕರು, ಹಾಗೂ ಕಮ್ಯೂನಿಟಿ ಮೊಬ್ಲೈಜರ್ ಸಿಬಂದಿಗಳು ಭಾಗವಹಿಸಿದ್ದರು. ಶಾಲಾ ಮಕ್ಕಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವಚ್ಛತಾ ಸಂದೇಶವನ್ನು ಪರಿಣಾಮಕಾರಿಯಾಗಿ ಸಾರಿದರು.

ಪರಿಸರ ಸಂರಕ್ಷಣೆಯ ಉದ್ದೇಶದಿಂದ ಬಟ್ಟೆ ಕೈಚೀಲಗಳ ಬಳಕೆಗೆ ಉತ್ತೇಜನ ನೀಡುವಂತೆ ಶಾಲಾ ಮಕ್ಕಳಿಗೆ ಬ್ಯಾಗ್‌ಗಳನ್ನು ವಿತರಿಸಲಾಯಿತು. ಜೊತೆಗೆ, ತ್ಯಾಜ್ಯವನ್ನು ಸರಿಯಾಗಿ ವಿಂಗಡಿಸಿ ಸಂಗ್ರಹಿಸಲು ಅನುಕೂಲವಾಗುವಂತೆ ಶಾಲೆಗಳಿಗೆ ವಿಶೇಷ ತ್ಯಾಜ್ಯ ಸಂಗ್ರಹ ಡಬ್ಬಿಗಳನ್ನು ವಿತರಿಸಲಾಯಿತು.

ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣದ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರವಹಿಸಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ