Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ಸ್ನೇಹ ಜ್ಯೋತಿ ಅಂದ ಮಕ್ಕಳ ತರಬೇತಿ ಕೇಂದ್ರದ ಬೆಳ್ಳಿ ಮಹೋತ್ಸವ ಸಂಭ್ರಮ

ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ 

ಅಥಣಿ : ಅಂದ ಹಾಗೂ ವಿಶೇಷ ಚೇತನ ಮಕ್ಕಳ ಬದುಕಿನಲ್ಲಿ ಆತ್ಮವಿಶ್ವಾಸದ ಬೆಳಕು ಮೂಡಿಸಿ, ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಸಮಾಜದಲ್ಲಿ ಗೌರವ ಘನತೆಯಿಂದ ಬದುಕಲು ಮತ್ತು ಸ್ವಾವಲಂಬಿ ಜೀವನಕ್ಕೆ ಪ್ರೇರಣೆ ನೀಡುತ್ತಿರುವ ಸ್ನೇಹಜ್ಯೋತಿ ಅಂದ ಮಕ್ಕಳ ತರಬೇತಿ ಕೇಂದ್ರದ 25ನೇ ವಾರ್ಷಿಕೋತ್ಸವ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬೆಳಗಾವಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಡೇರಿಕ್ ಫರ್ನಾಂಡಿಸ್ ಮಾತನಾಡಿ ಅಂದ ಹಾಗೂ ವಿಶೇಷ ಚೇತನ ಮಕ್ಕಳಿಗೆ ಅನುಕಂಪ ತೋರಿಸುವುದಕ್ಕಿಂತ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು. ಇಂತಹ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಶಿಕ್ಷಣ, ತರಬೇತಿ ಮತ್ತು ಪ್ರೋತ್ಸಾಹ ನಿರಂತರವಾಗಿ ದೊರೆಯಬೇಕು. ಆ ಮಕ್ಕಳ ಸಾಧನೆಗೆ ಅವರ ದೈಹಿಕ ನ್ಯೂನತೆಗಳು ಅಡ್ಡಿಯಾಗದಂತೆ, ಅವರಿಗೆ ಅಗತ್ಯವಾದ ಬೆಂಬಲ ಮತ್ತು ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.
ಇಪ್ಪತ್ತೈದು ವರ್ಷಗಳ ಹಿಂದೆ ಈ ಸಂಸ್ಥೆಯನ್ನು ಸ್ಥಾಪಿಸಿದಾಗ ಅನೇಕ ತೊಂದರೆಗಳು ಹಾಗೂ ಸವಾಲುಗಳು ಎದುರಾಗಿದ್ದವು. ಆದರೆ, ಎಲ್ಲ ಸಂಕಷ್ಟಗಳನ್ನು ಎದುರಿಸಿ ಅಂಧ ಮತ್ತು ವಿಕಲಚೇತನರ ಬದುಕಿಗೆ ಬೆಳಕಾಗಿ ನಿಂತಿರುವ ಫಾದರ್ ಕೆ ಸಿ ಚಾಕೋ ಅವರ ಸಾಧನೆ ನಿಜಕ್ಕೂ ಶ್ಲಾಘನೀಯ. ವಿಶೇಷ ಚೇತನರ ಬದುಕಿನಲ್ಲಿ ಭರವಸೆ ಮೂಡಿಸುವ ಇಂತಹ ಸೇವಾ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಿವೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಗೌರವ ಅತಿಥಿಯಾಗಿ ಆಗಮಿಸಿದ್ದ ಬೆಳ್ತಂಗಡಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟೇರಿಲ್ ವಿಶೇಷ ಚೇತನ ಮಕ್ಕಳ ಬದುಕಿನಲ್ಲಿ ಆತ್ಮವಿಶ್ವಾಸದ ಬೆಳಕು ಮೂಡಿಸಿ, ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಸ್ವಾವಲಂಬಿ ಜೀವನಕ್ಕೆ ಪ್ರೇರಣೆ ನೀಡುತ್ತಿರುವ ಸ್ನೇಹಜ್ಯೋತಿ ತರಬೇತಿ ಕೇಂದ್ರವು ಕಳೆದ 25 ವರ್ಷಗಳಿಂದ ವಿಶೇಷ ಚೇತನ ಮಕ್ಕಳ ಬದುಕಿನಲ್ಲಿ ಭರವಸೆ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಸಂಸ್ಥೆಯ ಸೇವಾ ಮನೋಭಾವ ಇನ್ನಷ್ಟು ವಿಸ್ತಾರಗೊಳ್ಳಲಿ, ಹೆಚ್ಚಿನ ಮಕ್ಕಳಿಗೆ ತರಬೇತಿ ಹಾಗೂ ಮಾರ್ಗದರ್ಶನ ದೊರೆಯಲಿ. ಅಂತಹ ಮಕ್ಕಳ ಮುಖದಲ್ಲಿ ಸಂತೋಷ ಮೂಡಿಸುವುದೇ ನಿಜವಾದ ಮಾನವೀಯ ಸೇವೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಇನ್ನೋರ್ವ ಗೌರವ ಅತಿಥಿಯಾಗಿ ಆಗಮಿಸಿದ್ದ ಬೆಂಗಳೂರು ಪ್ರಾಂತ್ಯದ ಪ್ರಾಂತ್ಯಾಧಿಕಾರಿ ಜಾರ್ಜ್ ಕಣ್ಣಾಂಧಾನಮ್ ಕೆ. ಮಾತನಾಡಿ ಅಂದ ಮಕ್ಕಳು ಸೇರಿದಂತೆ ವಿಶೇಷ ಅಗತ್ಯಗಳಿರುವ  ಪ್ರತಿಯೊಂದು ಮಗುವಿನಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಅಡಗಿರುತ್ತದೆ. ಆ ಪ್ರತಿಭೆಯನ್ನು ಗುರುತಿಸಿ, ಅದಕ್ಕೆ ಸೂಕ್ತ ವೇದಿಕೆ ಕಲ್ಪಿಸುವುದು ನಮ್ಮ ನಿಮ್ಮೆಲ್ಲರ ಹಾಗೂ ಸಮಾಜದ ಪ್ರತಿಯೊಬ್ಬರ ಪ್ರಮುಖ ಜವಾಬ್ದಾರಿಯಾಗಿದೆ. ಸ್ನೇಹ ಜ್ಯೋತಿ ಅಂದ ಮಕ್ಕಳ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದು ತಮ್ಮ ಬದುಕನ್ನು ಸುಂದರವಾಗಿ ರೂಪಿಸಿಕೊಂಡಿದ್ದಾರೆ. ಉನ್ನತ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದ ಅವರು 
ಫಾದರ್ ಕೆ ಸಿ ಚಾಕೋ ಅವರು ಒಬ್ಬ ಸಾಧಕ ವ್ಯಕ್ತಿ. ತಾವು ಕೈಗೆತ್ತಿಕೊಂಡ ಕೆಲಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವವರೆಗೂ ಛಲ ಬಿಡದ ವ್ಯಕ್ತಿತ್ವ ಅವರದು. ಅನೇಕ ಸವಾಲುಗಳ ನಡುವೆಯೂ ಅಂಧ ಮತ್ತು ವಿಕಲಚೇತನ ಮಕ್ಕಳ ಏಳಿಗೆಗಾಗಿ ಅವರು ಸಲ್ಲಿಸಿರುವ ಸೇವೆ ಪ್ರಶಂಸನೀಯ,” ಎಂದು ಹೇಳಿದರು.
ಸ್ನೇಹ ಜ್ಯೋತಿ ಅಂದ ಮಕ್ಕಳ ತರಬೇತಿ ಕೇಂದ್ರದಲ್ಲಿ ಸುಧೀರ್ಘವಾಗಿ ಸೇವೆ ಸಲ್ಲಿಸಿದ ಸಿಸ್ಟರ್ ಲೂಸಿ. ಸಿಸ್ಟರ್ ಯ್ಯಾನಸಿ. ಸಿಸ್ಟರ್ ಅಂತೋನಮ್ಮಾ. ಅವರಿಗೆ ಗೌರವ ಪೂರ್ವಕವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಫಾದರ್ ಮ್ಯಾಥ್ಯೂ ಪಿ. ಫಾದರ್ ಜೇಮ್ಸ್ ಕೆ. ಸಿಸ್ಟರ್ ಗಾಸ್ಪರ್. ಆರತಿ ಕಾಂಬಳೆ. ಸೇರಿದಂತೆ ಹಲವಾರು ಉಪಸ್ಥಿತರಿದ್ದರು.
ನ್ಯಾಯವಾದಿ ಪ್ರಮೋದ ಹಿರೇಮನಿ ಕಾರ್ಯಕ್ರಮ ನಿರೂಪಿಸಿದರು ಸ್ನೇಹ ಜ್ಯೋತಿ ಅಂದ ಮಕ್ಕಳ ತರಬೇತಿ ಕೇಂದ್ರದ ನಿರ್ದೇಶಕ ಫಾದರ್ ಕೆ ಸಿ ಚಾಕೋ ವಂದಿಸಿದರು.
2001ರಲ್ಲಿ ಫಾದರ್ ಚಾಕೋ ಕೆ.ಸಿ. ಅವರು ಸ್ಥಾಪಿಸಿದ ಈ ಸಂಸ್ಥೆಯು ಕಳೆದ 25 ವರ್ಷಗಳಿಂದ ಅಂಧ ಹಾಗೂ ವಿಕಲಚೇತನ ಮಕ್ಕಳಿಗೆ ಶಿಕ್ಷಣ ಮತ್ತು ತರಬೇತಿ ನೀಡುವ ಮೂಲಕ ಅವರ ಬದುಕಿನಲ್ಲಿ ಹೊಸ ಭರವಸೆಯ ಬೆಳಕು ಮೂಡಿಸುತ್ತಿದೆ. ಅಂಗವೈಕಲ್ಯವು ಸಾಧನೆಗೆ ಅಡ್ಡಿಯಲ್ಲ, ಸೂಕ್ತ ಅವಕಾಶ ಹಾಗೂ ಪ್ರೋತ್ಸಾಹ ದೊರೆತರೆ ಅಂಧ ಮತ್ತು ವಿಕಲಚೇತನರೂ ಜೀವನದಲ್ಲಿ ಮಹತ್ತರ ಸಾಧನೆ ಮಾಡಬಲ್ಲರು ಎಂಬ ಸಂದೇಶವನ್ನು ಸಂಸ್ಥೆಯು ಸಮಾಜಕ್ಕೆ ಸಾರಿದೆ. ಕಳೆದ ಎರಡೂವರೆ ದಶಕಗಳಿಂದ ವಿಶೇಷ ಚೇತನ ಮಕ್ಕಳ ಶಿಕ್ಷಣ, ತರಬೇತಿ ಹಾಗೂ ಸಬಲೀಕರಣಕ್ಕೆ ಶ್ರಮಿಸುತ್ತಿರುವ ಸ್ನೇಹ ಜ್ಯೋತಿ ಸಂಸ್ಥೆಯ ಬೆಳ್ಳಿ ಮಹೋತ್ಸವವು, ಮಾನವೀಯ ಸೇವೆ ಮತ್ತು ಸಮಾನ ಅವಕಾಶಗಳ ಮಹತ್ವವನ್ನು ಸಾರುವ ಕಾರ್ಯಕ್ರಮವಾಗಿ ಗಮನ ಸೆಳೆಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ