LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸಿಂಪಲ್‌ ಸುನಿ ಹೊಸ ಸಿನಿಮಾ ಮೋಡ ಕವಿದ ವಾತಾವರಣ  ಹೊಸ ಹೀರೋ  ಶೀಲಮ್








       ಕನ್ನಡ ಚಿತ್ರರಂಗಕ್ಕೆ ಹೊಸ ಪ್ರತಿಭೆಗಳನ್ನು ಪರಿಚಯಿಸುವ ಖ್ಯಾತ ನಿರ್ದೇಶಕ ಸಿಂಪಲ್‌ ಸುನಿ ಇದೀಗ ಮತ್ತೊಬ್ಬ ಹೊಸ ಹೀರೋವನ್ನು ಸಿನಿಮಾಪ್ರೇಕ್ಷಕರ ಎದುರು ತರುತ್ತಿದ್ದಾರೆ. ಸುನಿ ಅವರ ಹೊಸ ಚಿತ್ರ 'ಮೋಡ ಕವಿದ ವಾತಾವರಣ' ಸಿನಿಮಾ ಮೂಲಕ ಶೀಲಮ್‌ ನಾಯಕನಾಗಿ ಹೆಜ್ಜೆ ಇಡುತ್ತಿದ್ದಾರೆ.

      ನಿರ್ದೇಶಕ ಸುನಿ ಅವರೊಂದಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ, ಸಣ್ಣ ಪುಟ್ಟ ಪಾತ್ರಗಳಲ್ಲೂ ಕಾಣಿಸಿಕೊಂಡಿರುವ ಶೀಲಮ್‌ ನ ಅದೃಷ್ಟ ಪರೀಕ್ಷೆಗಿಳಿಸಿದ್ದಾರೆ. ಇತ್ತೀಚಿಗೆ ಬೆಂಗಳೂರಿನ ಕಂಠಿರವ ಸ್ಟುಡಿಯೋದಲ್ಲಿ ಕೊನೆ ದಿನದ ಚಿತ್ರೀಕರಣ ನಡೆಸಲಾಯಿತು.


     ಈ ಸಂದರ್ಭದಲ್ಲಿ ಮಾತನಾಡಿದ  ನಿರ್ದೇಶಕ ಸಿಂಪಲ್‌ ಸುನಿ "ಇದೊಂದು  ಸರಳ ಪ್ರೇಮಕಥೆಯ ನನ್ನ ಲೈಫ್‌ನಲ್ಲಿ ಬೇರೆ ರೀತಿ ಸಿನಿಮಾ. ನನ್ನ ಲೈಫ್‌ಗೇ ಬೂಸ್ಟ್‌ ಕೊಡ್ತು. ಇದಾದ ಬಳಿಕ ಕೈಗೆತ್ತಿಕೊಂಡಿರುವ ಸಿನಿಮಾವೇ ‘ಮೋಡ ಕವಿದ ವಾತಾವರಣʼ. ಹೊಸ ಹೀರೋ ನಮ್ಮ ಮನೆ ಮಗ. ಶಿಲಮ್‌ ನನ್ನ ಬ್ರದರ್" ಎಂದು ಮಾಹಿತಿ ನೀಡಿದರು.

     ನಟ ಶೀಲಮ್‌ "ಗುರುಪೂರ್ಣಿಮಾ ದಿನ ಸುನಿ ಸರ್‌ ತಮ್ಮ ಶಿಷ್ಯನನ್ನು ಲಾಂಚ್‌ ಮಾಡಿದ್ದಾರೆ. ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿರುವುದು ನನ್ನ ಅದೃಷ್ಟ. ಈ ಚಿತ್ರದಲ್ಲಿ ಕೆಲಸ ಮಾಡಿರುವ ಟೆಕ್ನಿಷಿಯನ್‌ ದೊಡ್ಡ ಹೀರೋಗಳ ಜೊತೆ ಕೆಲಸ ಮಾಡಿದ್ದಾರೆ. ಒಂದೊಳ್ಳೆ ಟೀಂ ಜೊತೆ ಲಾಂಚ್‌ ಆಗುತ್ತಿರುವುದು ಖುಷಿ ಇದೆ" ಎಂದರು.

      ನಟಿ ಸಾತ್ವಿಕಾ "ಇದು ನನ್ನ ಡ್ರೀಮ್‌ ಪ್ರಾಜೆಕ್ಟ್.‌ ಸುನಿ ಸರ್‌ ಜೊತೆ ಕೆಲಸ ಮಾಡಬೇಕೆಂದು ಕೇಳಿಕೊಂಡಿದ್ದೆ. ಅವರ ಬಳಿ ಕಲಿಯುವುದು ತುಂಬಾನೇ ಇದೆ. ಈ ಜರ್ನಿಯಲ್ಲಿ ಬಹಳಷ್ಟು ಕಲಿತಿದ್ದೇನೆ. ಶೀಲಮ್‌ ಡಿಡಿಕೇಟರ್‌ ಆಕ್ಟರ್.‌ ಅವರು ಸಿನಿಮಾಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ" ಎಂದು ಹೇಳಿದರು.

     'ಮೋಡ ಕವಿದ ವಾತಾವರಣʼ ಸಿನಿಮಾದ ಶೂಟಿಂಗ್‌ ಕಂಪ್ಲೀಟ್‌ ಆಗಿದೆ. ರೀ-ರೆಕಾರ್ಡಿಂಗ್‌ ಕೆಲಸಗಳೆಲ್ಲ ಬಹುತೇಕ ಮುಗಿದು ಚಿತ್ರದ ರಿಲೀಸ್‌ಗೆ ತಯಾರಾಗಿದೆ.  ಸೈಂಟಿಫಿಕ್‌ ಫಿಕ್ಷನ್‌ ಪ್ರೇಮಕಥಾಹಂದರವನ್ನು ಹೊಂದಿರುವ ‘ಮೋಡ ಕವಿದ ವಾತಾವರಣʼವನ್ನು ‘ಒಂದು ಸರಳ ಪ್ರೇಮಕಥೆ’ ಸಿನಿಮಾ ನಿರ್ಮಾಣ ಮಾಡಿದ್ದ ರಾಮ್‌ ಮೂವೀಸ್ ಈ ಸಿನಿಮಾ ನಿರ್ಮಾಣ ಮಾಡಿದೆ. ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ ಹಾಗೂ ಗೋವಾ ರಮೇಶ್ ನಿರ್ಮಾಣ ಮಾಡಿದ್ದಾರೆ.‌  ಸಂತೋಷ್ ರೈ ಪಾತಾಜೆ ಕ್ಯಾಮೆರಾ ಹಿಡಿದಿದ್ದು, ಜೂಡಾ ಸ್ಯಾಂಡಿ ಹಾಗೂ ಜೇಡ್ ಸಂಗೀತ ನಿರ್ದೇಶನ ಹಾಗೂ ಆದಿತ್ಯ ಕಶ್ಯಪ್ ಸಂಕಲನ‌ವಿದೆ.
















Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್