Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿರಸಂಗಿ ಲಿಂಗರಾಜರು ಶಿಕ್ಷಣಕ್ಕಾಗಿ ಮಾಡಿದ ತ್ಯಾಗ ಚಿರಸ್ಥಾಯಿಯಾಗಿದೆ: ಡಾ.ಡಿ.ಕೆ.ಗಾಂವಕರ

ಸಂಭ್ರಮದ 165 ಲಿಂಗರಾಜ ಜಯಂತೋತ್ಸವ

ಬೆಳಗಾವಿ ಜನವರಿ 10: ಸಮಾಜದ ಕಲ್ಯಾಣಕ್ಕೆ ಶಿಕ್ಷಣವೇ ಮೂಲವೆಂದು ತಿಳಿದ ಲಿಂಗರಾಜರು ತಮ್ಮ ಇಡೀ ಸಂಪತ್ತನ್ನು ಶಿಕ್ಷಣಕ್ಕೆ ಮೀಸಲಾಗಿಟ್ಟಿದ್ದು ಭಾರತದ ಚರಿತ್ರೆಯಲ್ಲಿಯೇ ಅಪರೂಪವೆನಿಸಿದೆ. ಸಮಾಜದ ಸುಖವೇ ತನ್ನ ಸುಖವೆಂದು ಎಲ್ಲವನ್ನೂ ಧಾರೆ ಎರೆದ ಲಿಂಗರಾಜರು ಇಂದಿಗೂ ಅಮರರೆನಿಸಿದ್ದಾರೆ ಎಂದು  ಯಲ್ಲಾಪುರ ವಿಶ್ವದರ್ಶನ ಪಪೂ ಕಾಲೇಜಿನ ಪ್ರಾಚಾರ್ಯ ಡಾ.ಡಿ.ಕೆ.ಗಾಂವಕರ ಹೇಳಿದರು.

ಅವರು ಲಿಂಗರಾಜ ಕಾಲೇಜಿನಲ್ಲಿ ಬೆಳಗಾವಿಯ ಎಲ್ಲ ಕೆಎಲ್‌ಇ ಅಂಗಸAಸ್ಥೆಯ ಆಶ್ರಯದಲ್ಲಿ ಜರುಗಿದ ಸಿರಸಂಗಿ ಲಿಂಗರಾಜರ 165ನೇ ಜಯಂತಿ ಉತ್ಸವದಲ್ಲಿ ಅತಿಥಿಗಳಾಗಿ ಮಾತನಾಡಿದರು.

 

ಸ್ವಾಮಿ ವಿವೇಕಾನಂದರು ಹಾಗೂ ಲಿಂಗರಾಜರು ಅಲ್ಪಾವಧಿಯಲ್ಲಿ ನಮ್ಮನ್ನಗಲಿದರೂ ಲೋಕದಲ್ಲಿ ಅಮರವಾಗಿ ಉಳಿಯುವಂತ ಕಾರ್ಯಮಾಡಿದರು. ಲಿಂಗರಾಜರು ಸಮಾಜದ ಉದಾತ್ತ ಉದ್ದೇಶಕ್ಕಾಗಿ ಮಹಾದಾನ ನೀಡಿ ಔದರ‍್ಯವನ್ನು ಮೆರೆದಿದ್ದಾರೆ.  ಅವರ ಬದುಕು ಸುಖದ ಸುಪತ್ತಿಕೆಯಾಗಿರಲಿಲ್ಲ. ಕೌಟುಂಬಿಕವಾಗಿ ಬವಣೆಗಳಿಂದ ನೊಂದುಕೊAಡರು. ನೂರೆಂಟು ಕಷ್ಟಗಳನ್ನು ಎದುರಿಸಿದರು. ಜೀವನದ ಕೊನೆಗೆ ತಮ್ಮ ಸಮಸ್ತ ಚಿರಾಸ್ಥಿಯನ್ನು ಸಮಾಜದ ಮಕ್ಕಳ ಕಲ್ಯಾಣಕ್ಕಾಗಿ ಸಮರ್ಪಿಸಿದರು. ಕೃಷಿ, ನೀರಾವರಿ ಮೊದಲ್ಗೊಂಡು ಹಲವಾರು ಮೌಲಿಕ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಅಂತಹ ಪ್ರಾಥಃಸ್ಮರಣೀಯರು ಇಂದಿನ ಯುವ ಪೀಳಿಗೆಗೆ ಅನುಕರಣೀಯರು.  ಇಂದು ಕೆಎಲ್‌ಇಯ ಎಲ್ಲ ಅಂಗಸAಸ್ಥೆಗಳಲ್ಲಿ ಅವರ ಜಯಂತಿಯನ್ನು ಆಚರಿಸಿ ಮಕ್ಕಳಲ್ಲಿ ಅವರ ದಾನದ, ತ್ಯಾಗದ ಕುರಿತು ಹೇಳುತ್ತಿರುವುದು ಅಭಿನಂದನೀಯವೆನಿಸಿದೆ ಎಂದರು.



ದಿವ್ಯ ಸಾನ್ನಿಧ್ಯವಹಿಸಿದ್ದ ಶೇಗುಣಸಿ ವಿರಕ್ತಮಠದ ಪೂಜ್ಯ ಮಹಾಂತಪ್ರಭು ಸ್ವಾಮೀಜಿಯವರು ಆಶೀರ್ವಚನ  ನೀಡುತ್ತಾ, ಲಿಂಗರಾಜರAತಹ ಪುಣ್ಯಾತ್ಮರನ್ನು ಸ್ಮರಿಸುವುದು ನಿಜಮುಕ್ತಿ ಇದ್ದಂತೆ. ಲಿಂಗರಾಜರು ತಮ್ಮ ಜನಮುಖಿಯಾದ ಸೇವೆಗಳಿಂದ ಅಮರತ್ವವನ್ನು ಪಡೆದರು. ಸಮಸ್ತ ನಾಡಿಗೆ ಅವರು ನೀಡಿದ ಕೊಡುಗೆ ಅನನ್ಯ ಅನುಪಮ. ಅವರಂತಹ ದಾನಿಗಳು ಯುಗಯುಗಳು ಕಳೆದರೂ ಬರುವುದು ದುರ್ಲಭ. ಲಿಂಗರಾಜರು ದಾನ ಅಷ್ಟೇ ಅಲ್ಲದೆ ಬದುಕಿನುದ್ದಕ್ಕೂ ಅನೇಕ ಜನೋಪಯೋಗಿ ಕಾರ್ಯಗಳನ್ನು ನಿರ್ವಹಿಸಿದರು. ಲಿಂಗರಾಜರ ತ್ಯಾಗದಲ್ಲಿ ಒಂದು ವೈಶಿಷ್ಟö್ಯವುಂಟು, ಅವರು ಸ್ವಾರ್ಥವನ್ನು ಸಂಪೂರ್ಣವಾಗಿ ಮರೆತು ತಮ್ಮ ಇಡಿಯ ಆಸ್ತಿಯನ್ನು ಸಮಾಜದ ಶಿಕ್ಷಣಕ್ಕಾಗಿ ಧಾರೆಯೆರೆದರು. ಅಂತಹ ಮಹಾತ್ಮರನ್ನು ಇಂದಿನ ಯುವಪೀಳಿಗೆ ತಿಳಿದುಕೊಳ್ಳುವುದು ಅಗತ್ಯವಿದೆ. ಇಂದು ಎಐ ಯುಗ, ಕ್ರಿಯೆಟಿವ್ಹಿಡಿ ಬಹುಮುಖ್ಯ. ನಮ್ಮ ಬದುಕನ್ನು ಹೊಸತನಕ್ಕೆ ತೆರೆದುಕೊಳ್ಳಬೇಕು. ಕ್ರಿಯಾತ್ಮಕವಾದ ಬದುಕು ಹೊಸತನವನ್ನು ಕಲಿಸುತ್ತದೆ ಎಂದು ನುಡಿದರು.

ಕೆಎಲ್‌ಇ ಅಧ್ಯಕ್ಷರು ಹಾಗೂ ಬೈಲಹೊಂಗಲ ಶಾಸಕರಾದ ಶ್ರೀ ಮಹಾಂತೇಶ ಕೌಜಲಗಿಯವರು ಅಧ್ಯಕ್ಷೀಯ ನುಡಿಗಳನ್ನಾಡಿ ಜನತೆಯ ಹಿತಕ್ಕಾಗಿ ಬದುಕಿದ  ಮಹಾಚೇತನ ಸಿರಸಂಗಿ ಲಿಂಗರಾಜರು. ಸಮಾಜದ ಪ್ರತಿಯೊಬ್ಬರೂ ಸುಶಿಕ್ಷಿತರಾಗಬೇಕು, ಮುಂದೆ ಬರಬೇಕು, ಬದುಕಿನ ಕಷ್ಟಗಳನ್ನು ತೊಡೆದುಹಾಕಬೇಕೆಂಬ ಸಂಕಲ್ಪದೊAದಿಗೆ ಶಿಕ್ಷಣ ರಂಗಕ್ಕೆ ಆರ್ಥಿಕ ಮತ್ತು ಜ್ಞಾನದ ಶಕ್ತಿಯನ್ನು ತುಂಬಿದರು. ವ್ಯಕ್ತಿಯೊಬ್ಬನಿಗೆ ಕೊಡುವ ದಾನಕ್ಕಿಂತಲೂ ಶಿಕ್ಷಣ ಸಂಘ ಸಂಸ್ಥೆಗಳಿಗೆ ಕೊಡುವ ದಾನ ಶ್ರೇಷ್ಠವೆಂದು ತಿಳಿದರು. ಸಮಾಜಕ್ಕೆ ಪ್ರೇರಕರಾದರು. ಅವರ ಇಚ್ಛೆಯಂತೆ ಪ್ರಾರಂಭವಾದ `ಸಿರಸಂಗಿ ನವಲಗುಂದ ಟ್ರಸ್ಟ್’ ಸಾವಿರಾರೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನಸಹಾಯ ಇಂದಿಗೂ ನೀಡುತ್ತಿದೆ.  ಇಂತಹ ತ್ಯಾಗವೀರ ಸಿರಸಂಗಿ ಲಿಂಗರಾಜರ ವ್ಯಕ್ತಿತ್ವಕ್ಕೆ ಮಾರುಹೋದ ನಮ್ಮ ಕೆಎಲ್‌ಇ ಸಂಸ್ಥೆಯ ಏಳು ಜನ ಶಿಕ್ಷಕರು ಅವರ ಆದರ್ಶವನ್ನೇ ಇಟ್ಟುಕೊಂಡು 1916 ರಲ್ಲಿ ಕೆಎಲ್‌ಇ ಸಂಸ್ಥೆಯನ್ನು ಹುಟ್ಟುಹಾಕಿದರು.  1933ರಲ್ಲಿ ಪ್ರಥಮ ಪದವಿ ಕಾಲೇಜಿಗೆ ಲಿಂಗರಾಜರ ಮೇಲಿನ ಅಭಿಮಾನದಿಂದಾಗಿ ‘ಲಿಂಗರಾಜ ಮಹಾವಿದ್ಯಾಲಯ’ವೆಂದು ನಾಮಕರಣ ಮಾಡಿದರು ಎಂದು ಹೇಳಿದರು.



ಕೆಎಲ್‌ಇ ಉಪಾಧ್ಯಕ್ಷರಾದ ಬಸವರಾಜ ತಟವಟಿಯವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ.ಎಚ್.ಎಂ. ಚೆನ್ನಪ್ಪಗೋಳ ವಂದಿಸಿದರು. ಡಾ.ಮಹೇಶ ಗುರನಗೌಡರ ಹಾಗೂ ಪ್ರೊ.ಸಿದ್ಧನಗೌಡ ಪಾಟೀಲ ನಿರೂಪಿಸಿದರು. ಪ್ರಾಚಾರ್ಯ ಡಾ.ಎಚ್.ಎಸ್. ಮೇಲಿನಮನಿ ವೇದಿಕೆಯ ಮೇಲಿದ್ದರು. ಮಾಹೇಶ್ವರ ಅಂಧ ಮಕ್ಕಳ ಶಾಲೆ ವಿದ್ಯಾರ್ಥಿಗಳು ಪ್ರಾರ್ಥಿಸಿದರು.  ಜಯಂತಿ ಉತ್ಸವದ ನಿಮಿತ್ತ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರಕ್ತಭಂಡಾರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. 50ಕ್ಕೂ ಹೆಚ್ಚು ಯುನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಯಿತು. ಡಾ.ಎಚ್.ಬಿ.ರಾಜಶೇಖರ, ಡಾ.ಮಹಾಂತೇಶ ರಾಮಣ್ಣವರ, ಪ್ರೊ.ಕರಡಿಗುದ್ದಿ, ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷೆ ಸುಧಾ ಉಪ್ಪಿನ, ಸದಸ್ಯರಾದ ರಾಜೇಶ್ವರಿ ಸಂಬರಗಿಮಠ, ಶ್ರೀಮತಿ ಎಫ್.ಎಂ.ಮಹಾAತಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಲಿಂಗರಾಜ ಜಯಂತಿ ಉತ್ಸವದ ಅಂಗವಾಗಿ ಜರುಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರಾಥಮಿಕ, ಮಾಧ್ಯಮಿಕ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪಾರಿತೋಷಕಗಳನ್ನು ವಿತರಿಸಲಾಯಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ