Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆ.04 ರಂದು ಸಿರುಗುಪ್ಪ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳು


ಬಳ್ಳಾರಿ,ಸೆ.03 : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನ ಸಿರುಗುಪ್ಪ  ತಾಲ್ಲೂಕು  ಮಟ್ಟದ ದಸರಾ ಕ್ರೀಡಾಕೂಟಗಳನ್ನು ಸೆ.04 ರಂದು ಬೆಳಿಗ್ಗೆ 11 ಗಂಟೆಗೆ ಸಿರುಗುಪ್ಪ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಕ್ರೀಡಾಕೂಟಗಳು: ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್ಬಾಲ್ (ಪುರುಷರಿಗೆ ಮಾತ್ರ), ಥ್ರೋಬಾಲ್ ಮತ್ತು ಯೋಗಾ.ತಾಲ್ಲೂಕು ದಸರಾ ಸ್ಪರ್ಧೆಗಳಲ್ಲಿ ಆಯಾ ತಾಲ್ಲೂಕು ಕ್ರೀಡಾಪಟುಗಳು ಮಾತ್ರ ಭಾಗವಹಿಸಲು ಅವಕಾಶ. ಕ್ರೀಡಾಪಟುಗಳು ಪ್ರತಿನಿಧಿಸುವ ತಾಲ್ಲೂಕು ದೃಢೀಕರಣದ ಬಗ್ಗೆ ದಾಖಲೆ ಸಲ್ಲಿಸಬೇಕು ಹಾಗೂ ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಹಾಜರುಪಡಿಸಬೇಕು (ಶಾಲಾ, ಕಾಲೇಜಿನ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ಸರ್ಕಾರದಿಂದ ಅಧಿಕೃತ ಇರುವ ಇತರೆ ಗುರುತಿನ ಚೀಟಿ).

ಬೇರೆ ಜಿಲ್ಲೆಯಿಂದ ಭಾಗವಹಿಸುವ ಕ್ರೀಡಾಪಟುಗಳಿಗೆ ಅವಕಾಶ ಇರುವುದಿಲ್ಲ. ಕ್ರೀಡಾಪಟುಗಳು ವಿದ್ಯಾಭ್ಯಾಸ, ಸೇವೆಯಲ್ಲಿದ್ದರೆ ಸಂಬAಧಪಟ್ಟ ಕಾಲೇಜು-ಸಂಸ್ಥೆಗಳ ಗುರುತಿನ ಚೀಟಿಯೊಡನೆ ಭಾಗವಹಿಸಲು ಅವಕಾಶವಿದೆ.

ಪ್ರಸಕ್ತ ಸಾಲಿನಿಂದ ದಸರಾ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ತಾಲ್ಲೂಕು, ಜಿಲ್ಲೆ ಮತ್ತು ವಿಭಾಗ ಮಟ್ಟದವರಿಗೆ Dasara CM Cup 2025 Sports Registration QR Code ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಕ್ರೀಡಾ ಕೂಟದಲ್ಲಿ ಭಾಗವಹಿಸಿಲು ಅವಕಾಶ ಇರುವುದಿಲ್ಲ.
ತಾಲ್ಲೂಕು ಮಟ್ಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ.

ವಿವಿಧ ಮಟ್ಟದ ದಸರಾ ಕ್ರೀಡಾ ಕೂಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಅರ್ಹರಿರುತ್ತಾರೆ. ಕ್ರೀಡಾ ಕೂಟದಲ್ಲಿ ರಕ್ಷಣಾ ಪಡೆ, ಅರೆ ರಕ್ಷಣಾ ಪಡೆ, ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅವಕಾಶ ಇರುವುದಿಲ್ಲ.

ತಾಲ್ಲೂಕು ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ಒಬ್ಬ ಕ್ರೀಡಾಪಟು ಕೇವಲ ಒಂದು ಗುಂಪು ಕ್ರೀಡೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಎಂ.ಜಾಕೀರ್-9036335986, ಮಹ್ಮದ್ ಮಸೂದ್-9886688858 ಮತ್ತು ಕಚೇರಿ ಸಿಬ್ಬಂದಿ ರತಿಕಾಂತ್-8971238689 ಗೆ ಸಂಪರ್ಕಿಸಬಹುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ