ಸಿಸೋಡಿಯಾ ಪರವಾಗಿ ಅರವಿಂದ್ ಕೇಜ್ರಿವಾಲ್ ಜಂಗ್ಪುರದಲ್ಲಿ ಪ್ರಚಾರ ಮಾಡಿದ್ದಾರೆ. ಈ ವೇಳೆ ಸಾರ್ವಜನಿಕ ರ್ಯಾಲಿಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ ಆಪ್ ಸರ್ಕಾರ ರಚಿಸುತ್ತದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಹಾಗಾಗಿ ನಮ್ಮ ಮುಂದಿನ ಸರ್ಕಾರದಲ್ಲೂ ಮನೀಶ್ ಸಿಸೋಡಿಯಾ ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಾರೆ.
ಸಿಸೋಡಿಯಾ ಅವರನ್ನು ತಮ್ಮ ಕಮಾಂಡರ್ ಮತ್ತು ಕಿರಿಯ ಸಹೋದರ ಎಂದು ಉಲ್ಲೇಖಿಸಿರುವ ಕೇಜ್ರಿವಾಲ್, ರಾಷ್ಟ್ರ ರಾಜಧಾನಿಯಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆಗಳನ್ನು ಪರಿವರ್ತಿಸುವುದರೊಂದಿಗೆ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ನೀಡುವ ಭರವಸೆ ಮಾಡಿದ್ದಾರೆ. ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆಗಳನ್ನು ಮುಚ್ಚಲಿದೆ ಎಂದು ವಾಗ್ದಾಳಿ ಮಾಡಿದ್ದಾರೆ.