LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಸಮೀರ್ ಎಂಡಿ ಸೇರಿ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ SIT ನೋಟೀಸ್

ಧರ್ಮಸ್ಥಳ, ಅ.3: ಧರ್ಮಸ್ಥಳ ಪ್ರಕರಣಕ್ಕೆ  ಸಂಬಂಧಿಸಿದ ತನಿಖೆಯನ್ನು ವಿಶೇಷ ತನಿಖಾ ತಂಡ ಮತ್ತಷ್ಟು ಚುರುಕುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ತಯಾರಿಸಿದ ಹಲವಾರು ಯೂಟ್ಯೂಬರ್‌ಗಳಿಗೆ SIT ಅಧಿಕಾರಿಗಳು ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಈ ಬೆಳವಣಿಗೆಯಿಂದ ಯೂಟ್ಯೂಬರ್‌ಗಳ ಸಂಕಷ್ಟ ಮುಗಿಯುವ ಲಕ್ಷಣಗಳು ಸದ್ಯಕ್ಕೆ ಕಾಣಿಸುತ್ತಿಲ್ಲ. ವಿವಾದಿತ ಯೂಟ್ಯೂಬರ್ ಸಮೀರ್ ಎಂಡಿ ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ ನೋಟಿಸ್ ಹೋಗಿದ್ದು, ಅವರು ಬೆಳ್ತಂಗಡಿ SIT ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. SIT ಅಧಿಕಾರಿಗಳು ಈ ವಿಚಾರಣೆಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು,ಈ ಬಾರಿ ಯಾವೆಲ್ಲಾ ಪ್ರಶ್ನೆಗಳನ್ನು ಕೇಳಬೇಕು ಎಂಬುದರ ಕುರಿತು ಅಧಿಕಾರಿಗಳು ಪೂರ್ವ ಸಿದ್ಧತೆ ನಡೆಸಿದ್ದಾರೆ.

ಈ ಹಿಂದಿನ ತನಿಖೆಯ ಸಂದರ್ಭದಲ್ಲಿ ಆರೋಪಿ ಚಿನ್ನಯ್ಯ ನೀಡಿದ ಹೇಳಿಕೆಗಳನ್ನು ಆಧರಿಸಿ SIT ತನ್ನ ತನಿಖೆಯನ್ನು ಮುಂದುವರಿಸಿದೆ. ಚಿನ್ನಯ್ಯ ನೀಡಿದ ಹೇಳಿಕೆಗಳಲ್ಲಿ ಕೆಲವೊಂದು ವಿಚಾರಗಳ ಬಗ್ಗೆ ಯೂಟ್ಯೂಬರ್‌ಗಳ ಮೂಲಕ ಮರು ಪರಿಶೀಲನೆ ನಡೆಸುವುದು ಮತ್ತು ಪ್ರಶ್ನೆಗಳನ್ನು ಕೇಳುವ ಉದ್ದೇಶದಿಂದ ಅವರನ್ನು ಕರೆಸಿಕೊಳ್ಳಲಾಗುವುದು ಎಂದು ಹೇಳಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್