LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಂಸದ ಪ್ರಜ್ವಲ್ ರೇವಣ್ಣರನ್ನ ಆರ್ಥಿಕವಾಗಿ ಇಕ್ಕಟ್ಟಿಗೆ ಸಿಲುಕಿಸಲು ಎಸ್ಐಟಿ ತಂತ್ರ

ಬೆಂಗಳೂರು,18: ಅಶ್ಲೀಲ ವಿಡಿಯೋ ಪ್ರಕರಣದ ಆರೋಪ ಎದುರಿಸುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಕುರಿತು ಸುಳಿವಿಲ್ಲ‌. ಪ್ರಕರಣ ದಾಖಲಾಗುತ್ತಿದ್ದಂತೆ ಮೇ 1ರಂದು ತಮ್ಮ ಎಕ್ಸ್ ಖಾತೆಯ ಮೂಲಕ ಪ್ರತಿಕ್ರಿಯಿಸಿದ್ದ ಪ್ರಜ್ವಲ್ ರೇವಣ್ಣ, 'ತಾನು ಬೆಂಗಳೂರಿನಲ್ಲಿ ಇರದ ಕಾರಣ ಎಸ್ಐಟಿ ಮುಂದೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ 7 ದಿನಗಳ ಕಾಲಾವಕಾಶ ನೀಡಬೇಕು' ಎಂದಿದ್ದರು. ಆದರೆ ಎರಡು ವಾರಗಳೇ ಕಳೆದರೂ ಸಹ ಪ್ರಜ್ವಲ್ ರೇವಣ್ಣ ಭಾರತಕ್ಕೆ ಮರಳಿಲ್ಲ. ಆದ್ದರಿಂದ ಅವರನ್ನ ಕಾನೂನಾತ್ಮಕವಾಗಿ ಕಟ್ಟಿಹಾಕಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.


ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರನ್ನ ಆರ್ಥಿಕವಾಗಿ ಇಕ್ಕಟ್ಟಿಗೆ ಸಿಲುಕಿಸಲು ಎಸ್ಐಟಿ ತಂತ್ರ ರೂಪಿಸಿದ್ದು, ನ್ಯಾಯಾಲಯದ ಅನುಮತಿ ಪಡೆದು ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಗಳನ್ನ ಫ್ರೀಜ್ ಮಾಡಿಸಲು ಎಸ್‌ಐಟಿ ಅಧಿಕಾರಿಗಳು ತಯಾರಿ ಆರಂಭಿಸಿದ್ದಾರೆ. ಆದ್ದರಿಂದ ಪ್ರಜ್ವಲ್ ಅವರ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಎಸ್‌ಐಟಿ ಅಧಿಕಾರಿಗಳು ಕಲೆ ಹಾಕುತ್ತಿರುವುದಾಗಿ ಎಸ್ಐಟಿಯ ಉನ್ನತ ಮೂಲಗಳು ಖಚಿತಪಡಿಸಿವೆ.


ತಂದೆಯ ಬಂಧನದ ನಂತರ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರುವ ನಿರೀಕ್ಷೆಯಿತ್ತು. ಆದರೆ ಮೇ 3 ಹಾಗೂ ಮೇ 15ರಂದು ಭಾರತಕ್ಕೆ ಬರಲು ಸಿದ್ದವಾಗಿದ್ದ ಪ್ರಜ್ವಲ್, ವಿಮಾನದ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಬೇಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್