Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಾನಂದ ಮಹಾವಿದ್ಯಾಲಯ ಕಾಗವಾಡದಲ್ಲಿ ಕಟ್ಟೀಮನಿ ಕಥಿ ಹೇಳೂಣು ಸ್ಪರ್ಧೆ

  ಬಸವರಾಜ ಕಟ್ಟೀಮನಿ ಅವರು ಪ್ರಗತಿಶೀಲ ಸಾಹಿತ್ಯ ಕಂಡಂತಹ ಅಪರೂಪದ ಕಥೆಗಾರರು.ಪ್ರಗತಿಶೀಲ ಸಾಹಿತ್ಯಕ್ಕೆ ಹೊಸ ಆಯಾಮವನ್ನು ನೀಡಿದವರು ಎಂದು ಶಿವಾನಂದ ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕರಾದ ಪ್ರೊ.ಬಿ.ಡಿ.ಧಾಮಣ್ಣವರ ಅಭಿಪ್ರಾಯಿಸಿದರು.


ಅವರು ಸ್ಥಳೀಯ ಶಿವಾನಂದ ಮಹಾವಿದ್ಯಾಲಯದ ಕನ್ನಡ ವಿಭಾಗ ಐಕ್ಯೂಎಸಿ ಅಡಿಯಲ್ಲಿ ಕರ್ನಾಟಕ ಸರಕಾರದ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಸಹಯೋಗದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕಟ್ಟೀಮನಿ ಕಥಿ ಹೇಳೂಣು ಸ್ಫರ್ಧೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕಾಲೇಜು ವಿದ್ಯಾರ್ಥಿ ಕಲ್ಯಾಣಾಧಿಕಾರಿಗಳಾದ ಪ್ರೊ.ಜೆ ಕೆ ಪಾಟೀಲ ಅವರು ಕಟ್ಟೀಮನಿ ಅವರ ಜೀವನ ಮತ್ತು ಸಾಹಿತ್ಯ ಕುರಿತು ಮಾತನಾಡುತ್ತ ಕಟ್ಟೀಮನಿ ಅವರು ಸಮಾಜದಲ್ಲಿನ ಅನಿಷ್ಟಗಳನ್ನು ಹೋಗಲಾಡಿಸಲು ಶ್ರಮವಹಿಸಿದ್ದರು ಎಂದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಎ.ಎಂ.ಜಕ್ಕಣ್ಣವರ ಬಸವರಾಜ ಕಟ್ಟೀಮನಿ ಅವರು ಪ್ರಗತಿಶೀಲ ಸಾಹಿತ್ಯದ ಮೇರು ಶಿಖರ ಅವರ ಕಥೆ ಹಾಗು ಕಾದಂಬರಿಯ ಮೂಲಕ ಸಮಾಜವನ್ನು ತಿದ್ದಿ ಸರಿದಾರಿಗೆ ತರವಲ್ಲಿ ಶ್ರಮವಹಿಸಿದ್ದರು.ಒಟ್ಟು ಒಂಭತ್ತು ಕಥಾ ಸಂಕಲನದಲ್ಲಿ ಸುಮಾರು 65ಕ್ಕೂ ಹೆಚ್ಚು ಕಥೆಗಳಲ್ಲಿ ಅನ್ಯಾಯ,ದಬ್ಬಾಳಿಕೆ, ಅನಾಚಾರ, ಅತ್ಯಾಚಾರದ ಕುರಿತು ಎಗ್ಗಿಲ್ಲದೇ ದಾಖಲಿಸಿದ್ದಾರೆ.


ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಟ್ಟೀಮನಿ ಅವರನ್ನು ಓದಬೇಕು ಎಂದು ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಸಹಕಾರ ನೀಡಿಡ ಕಟ್ಟೀಮನಿ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಸರ್ವ ಸದಸ್ಯರಿಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ ಎಂದರು.


ಆರಂಭದಲ್ಲಿ ಸಸಿಗೆ ನೀರಹಣಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕುಮಾರಿ ಅನನ್ಯ ಕುಲಕರ್ಣಿ ಪ್ರಾರ್ಥಿಸಿದರು. ಪ್ರೊ.ಅಶೋಕ ಪಾಟೀಲ ಸ್ವಾಗತಿಸಿದರು. ಸ್ಪರ್ಧೆಯಲ್ಲಿ ಅನನ್ಯ ಕುಲಕರ್ಣಿ ಪ್ರಥಮ ಸ್ಥಾನ, ಖುಷಿ ಐತವಾಡೆ ಮತ್ತು ಸಮೀಕ್ಷಾ ಸಲಗರೆ ದ್ವಿತೀಯ ಸ್ಥಾನ, ಆರತಿ ಪೂಜಾರಿ ತೃತೀಯ ಸ್ಥಾನ ಪಡೆದುಕೊಂಡರು. ನಿರ್ಣಾಯಕರಾಗಿ ಡಾ.ಅಮೋಲ್ ಪಾಟೀಲ ಹಾಗೂ ಪ್ರೊ ಮಿಸ್ ಎಸ್.ಎಸ್ ಪಡತಾರೆ ಕಾರ್ಯನಿರ್ವಹಿಸಿದರು.ಕನ್ನಡ ವಿಭಾಗದ ಉಪನ್ಯಾಸಕಿ ಶ್ರೀಮತಿ ಬಿ ಆಯ್ ಜಗದಮನಿ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ