LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ ಅರಣ್ಯೀಕರಣ



ಬೆಳಗಾವಿ: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಯುವ ಪೀಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು, ಅವುಗಳನ್ನು ಪೋಷಿಸುವ ಮೂಲಕ ಉತ್ತಮ ಪರಿಸರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ನಾಯ್ಕ್ ಕರೆ ನೀಡಿದರು.

ತಾಲೂಕಿನ ಕನಕುಂಬಿ ವಲಯದ ಅಮಟೆ ಕಾರ್ಯಕ್ಷೇತ್ರದ ವ್ಯಾಪ್ತಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಧರ್ಮಸ್ಥಳ ಧರ್ಮಾಧಿಕಾರಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸಮಾಜಮುಖಿ ಚಿಂತನೆಗಳು ಹಾಗೂ ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ಅವರು ವಿವರಿಸಿದರು.

‘ಮರದಿಂದ ಮಳೆ, ಮಳೆಯಿಂದ ಬೆಳೆ’ ಎಂಬ ಸಂದೇಶದೊಂದಿಗೆ ಶಾಲಾ ವಿದ್ಯಾರ್ಥಿಗಳು ವಿವಿಧ ಸಸಿಗಳನ್ನು ನೆಟ್ಟರು. ನೆಟ್ಟ ಸಸಿಗಳನ್ನು ಉತ್ತಮ ರೀತಿಯಲ್ಲಿ ಪೋಷಿಸಿ ಬೆಳೆಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳಿಗೆ ವಹಿಸಲಾಯಿತು.

ಶಾಲೆಯ ಪ್ರಾಂಶುಪಾಲರಾದ ಸಿ.ವೈ. ಮರೆಮ್ಮಗೋಳ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಹಕಾರಿಯಾಗುತ್ತಿವೆ. ನಮ್ಮ ಶಾಲೆಯಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಪಾರ್ವತಿ, ವಿಮಾ ಅಧಿಕಾರಿ ಧನಂಜಯ್, ಒಕ್ಕೂಟದ ಅಧ್ಯಕ್ಷ ಪ್ರಕಾಶ ಗುರವ, ಕೃಷಿ ಮೇಲ್ವಿಚಾರಕ ಮಹಾಂತೇಶ, ವಲಯ ಮೇಲ್ವಿಚಾರಕ ಸಂಜು, ಗ್ರಾಮದ ಸೇವಾ ಪ್ರತಿನಿಧಿ ದಶರಥ, ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್