LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Dharwad

ಸಾಮಾಜಿಕ ನ್ಯಾಯದ ಹರಿಕಾರ ಅರಸು ಅವರ ಕೊಡುಗೆ ಅಜರಾಮರ: ಜಿಲ್ಲಾಧಿಕಾರಿ ಸ್ನೇಹಲ್ ಆರ್

ಧಾರವಾಡ,21 : ಡಿ. ದೇವರಾಜ ಅರಸು ಅವರು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಸಮಾಜದ ಎಲ್ಲ ವರ್ಗದ ಜನರು ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.

 

 ಕನಾ೯ಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಮಾಜಿ ಮುಖ್ಯ ಮಂತ್ರಿಗಳು, ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರ 111ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.


ಎಲ್ಲರಿಗೂ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಹಾಸ್ಟೆಲ್ಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದರು. ಅವರ ಅವಧಿಯಲ್ಲಿ ಕಲ್ಪಿಸಲಾದ ಉತ್ತಮ ಶೈಕ್ಷಣಿಕ ಅವಕಾಶಗಳ ಫಲವಾಗಿ ಇಂದಿಗೂ ಅನೇಕ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿದೆ. ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿಗಾಗಿ ಡಿ. ದೇವರಾಜ ಅರಸು ಅವರು ಸಾಕಷ್ಟು ಶ್ರಮಿಸಿದ್ದರು. ಹಿಂದುಳಿದ ವರ್ಗಗಳ ಜನರ ಸಾಮಾಜಿಕ ಹಾಗೂ ಆಡಳಿತಾತ್ಮಕ ಭಾಗವಹಿಸುವಿಕೆಯನ್ನು ಹೆಚ್ಚಿಸುವುದರ ಜೊತೆಗೆ ಶಿಕ್ಷಣ ಮತ್ತು ಉದ್ಯೋಗದ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದರು ಎಂದು ಅವರು ಹೇಳಿದರು.

ರೈತರ ಹಿತದೃಷ್ಟಿಯಿಂದಉಳುವವನಿಗೆ ಭೂಮಿಎಂಬ ಮಹತ್ವದ ಕಾರ್ಯಕ್ರಮವನ್ನು ಜಾರಿಗೊಳಿಸುವ ಮೂಲಕ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ಭದ್ರತೆಯ ಬುನಾದಿ ಕಲ್ಪಿಸಿದರು. ಇದರ ಪ್ರಯೋಜನ ಹಿಂದುಳಿದ ವರ್ಗದವರಿಗೆ ಮಾತ್ರವಲ್ಲದೆ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಅನೇಕ ಜನರಿಗೆ ದೊರೆಯಿತು ಎಂದು ಅವರು ತಿಳಿಸಿದರು.

ಹಿಂದಿನ ನಾಯಕರು ಸಮಾಜದ ಅಭಿವೃದ್ಧಿಗಾಗಿ ಕೈಗೊಂಡ ಸುಧಾರಣೆಗಳು ಹಾಗೂ ಅವರು ಎದುರಿಸಿದ ಸವಾಲುಗಳ ಕುರಿತು ಇಂದಿನ ಯುವಕರು ತಿಳಿದುಕೊಳ್ಳುವುದು ಅಗತ್ಯ. ನಾಡಿನ ಅಭಿವೃದ್ಧಿಗೆ ಹಿರಿಯರು ನೀಡಿದ ಕೊಡುಗೆಗಳನ್ನು ಅರಿತುಕೊಂಡು, ಅವರು ಹಾಕಿಕೊಟ್ಟ ಮಾರ್ಗವನ್ನು ಮುಂದುವರಿಸುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಹೇಳಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಸೇರಿದಂತೆ ನಾಡಿನ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಹಿರಿಯ ನಾಯಕರ ಕುರಿತು ಇರುವ ಪುಸ್ತಕಗಳನ್ನು ಯುವಕರು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಇಂತಹ ಪುಸ್ತಕಗಳನ್ನು ಹಾಸ್ಟೆಲ್ಗಳಲ್ಲಿ ಇರಿಸುವ ಮೂಲಕ ವಿದ್ಯಾರ್ಥಿಗಳಿಗೆ ಹಿರಿಯ ನಾಯಕರು ಹಾಗೂ ನಾಡಿನ ಅಭಿವೃದ್ಧಿಗೆ ಶ್ರಮಿಸಿದವರ ವಿಚಾರಗಳನ್ನು ತಿಳಿದುಕೊಳ್ಳಲು ಅವಕಾಶ ಕಲ್ಪಿಸಬೇಕು. ನಾಡಿಗೆ ಸೇವೆ ಸಲ್ಲಿಸಿದ ಎಲ್ಲ ಹಿರಿಯರನ್ನು ಸ್ಮರಿಸುವುದರ ಜೊತೆಗೆ ಅವರು ಹಾಕಿಕೊಟ್ಟ ದಾರಿಯನ್ನು ಇನ್ನಷ್ಟು ಉತ್ತಮಗೊಳಿಸಿ ಮುಂದಿನ ಸಮಾಜವನ್ನು ಕಟ್ಟಬೇಕಾಗಿದೆ ಎಂದು ತಿಳಿಸಿದರು.

ಕರ್ನಾಟಕ ಸರ್ಕಾರ ಯುವಕರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. 16 ರಿಂದ 35 ವರ್ಷದ ಯುವಕರಲ್ಲಿ ದೇಶದ ಬಗ್ಗೆ ಗೌರವ, ರಾಷ್ಟ್ರೀಯ ಏಕತೆಯ ಮನೋಭಾವ ಬೆಳೆಸುವ ಉದ್ದೇಶದಿಂದಭಾರತ್ ಜೋಡೋ ಯುವ ಸಂಘಗಳನ್ನು ರಚಿಸಲಾಗುತ್ತಿದೆ. ಪ್ರತಿ ಹಳ್ಳಿ ಹಾಗೂ ನಗರ ಪ್ರದೇಶಗಳ ವಾರ್ಡ್ಗಳಲ್ಲಿ ಇಂತಹ ಸಂಘಗಳನ್ನು ರಚಿಸಲಾಗುತ್ತಿದ್ದು, ಯುವಕರಲ್ಲಿ ಒಗ್ಗಟ್ಟು ಮತ್ತು ಸಹಬಾಳ್ವೆಯ ಭಾವನೆ ಬೆಳೆಸುವುದು ಇದರ ಉದ್ದೇಶವಾಗಿದೆ ಎಂದರು.

ಭಾರತ್ ಜೋಡೋ ಯುವ ಸಂಘಯಾವುದೇ ಒಂದು ವರ್ಗ, ಜಾತಿ ಅಥವಾ ಲಿಂಗಕ್ಕೆ ಸೀಮಿತವಾಗಿಲ್ಲ. 16 ರಿಂದ 35 ವರ್ಷದ ಎಲ್ಲ ಯುವಕರು ಹಾಗೂ ಯುವತಿಯರಿಗೂ ಸದಸ್ಯರಾಗುವ ಅವಕಾಶವಿದ್ದು, ಕಾಲೇಜು ಅಥವಾ ತಮ್ಮ ಊರಿನ ವ್ಯಾಪ್ತಿಯಲ್ಲಿ ಸಂಘಕ್ಕೆ ಸೇರ್ಪಡೆಯಾಗಿ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಿದರು. ಯುವಕರಿಗೆ ಶಿಕ್ಷಣ ಪಡೆಯಲು ಪೆÇ್ರೀತ್ಸಾಹ ನೀಡಬೇಕು. ಅವರು ಉದ್ಯಮಿಗಳಾಗಲಿ, ಸರ್ಕಾರಿ ಉದ್ಯೋಗ ಪಡೆಯಲಿ ಅಥವಾ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲಿ, ದೇಶ ಹಾಗೂ ನಾಡಿಗೆ ಉತ್ತಮ ಪ್ರಜೆಗಳಾಗಬೇಕು. ತಂದೆ-ತಾಯಿಗಳಿಗೆ ಉತ್ತಮ ಮಕ್ಕಳಾಗಿ, ಸಮಾಜಕ್ಕೆ ಸೇವೆ ಸಲ್ಲಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಹಿರಿಯರು ಉತ್ಸಾಹದಿಂದ ಉತ್ತಮ ಸಮಾಜವನ್ನು ಕಟ್ಟಿಕೊಟ್ಟಿದ್ದಾರೆ. ಸಮಾಜವನ್ನು ಇನ್ನಷ್ಟು ಉತ್ತಮಗೊಳಿಸಿ, ಎಲ್ಲರ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಮಾತನಾಡಿ.ಡಿ. ದೇವರಾಜ ಅರಸು ಅವರು ಮಾನವ ಜನಾಂಗಕ್ಕೆ ಬಹುದೊಡ್ಡ ಹಾಗೂ ಮಹತ್ತರವಾದ ಕೊಡುಗೆ ನೀಡಿದ ಧೀಮಂತ ರಾಜಕಾರಣಿಯಾಗಿದ್ದಾರೆ. ಅವರ ದೂರದೃಷ್ಟಿಯ ಫಲವಾಗಿ ಇಂದು ಅನೇಕ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯ ಪಡೆದು ಶಿಕ್ಷಣ ಪಡೆಯುತ್ತಿದ್ದಾರೆ.
ವಿಶೇಷವಾಗಿ ಹೆಣ್ಣುಮಕ್ಕಳಿಗೆ ಸುರಕ್ಷಿತ ಹಾಗೂ ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಅವರು ಹೆಚ್ಚಿನ ಒತ್ತು ನೀಡಿದ್ದರು. ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುವ ಮೂಲಕ ಶಿಕ್ಷಣಕ್ಕೆ ಪೆÇ್ರೀತ್ಸಾಹ ನೀಡಿದರು. ಅಲ್ಲದೆ ಕಾಳಿ, ಘಟಪ್ರಭಾ ಹಾಗೂ ಕೃಷ್ಣ ಯೋಜನೆಗಳ ಸೇರಿದಂತೆ ನೀರಾವರಿ ಕ್ಷೇತ್ರದ ಹಲವು ಯೋಜನೆಗಳಿಗೂ ಅವರು ಆದ್ಯತೆ ನೀಡಿದ್ದರು ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಮಾತನಾಡಿ, ಹಲವಾರು ಮುಖ್ಯಮಂತ್ರಿಗಳನ್ನು ಕಂಡಿರುವ ಕರ್ನಾಟಕ ರಾಜ್ಯಕ್ಕೆ ಅಮೂಲ್ಯವಾದ ಕೊಡುಗೆ ನೀಡಿ ಅಜರಾಮರವಾಗಿ ಉಳಿದ ಮಹನೀಯರಲ್ಲಿ ಡಿ.ದೇವರಾಜ ಅರಸು ಅವರು ಪ್ರಮುಖರಾಗಿದ್ದಾರೆ. ಡಿ. ದೇವರಾಜ ಅರಸು ಅವರು ರೈತರಿಗಾಗಿ ಹಲವು ಮಹತ್ವದ ಕಾರ್ಯಗಳನ್ನು ಕೈಗೊಂಡಿದ್ದರು. ರೈತರ ಸಾಲ ಮನ್ನಾ ಮಾಡುವ ಮೂಲಕ ರೈತರಿಗೆ ನೆರವಾಗಿದ್ದರು. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಅನೇಕ ಹಾಸ್ಟೆಲ್ಗಳನ್ನು ನಿರ್ಮಿಸಿ ಬಡ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡಿದ್ದರು. ಅದರೊಂದಿಗೆ ಶೋಷಿತ ವರ್ಗದವರ ಬದುಕಿನಲ್ಲಿ ಬದಲಾವಣೆ ತರಲು ಮಲ ಹೊರುವ ಪದ್ಧತಿಯನ್ನು ನಿಷೇಧಸುವಂತಹ ಮಹತ್ವದ ಕ್ರಮಗಳನ್ನು ಜಾರಿಗೆ ತಂದಿದ್ದರು. ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದ ಕೀರ್ತಿ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ಪ್ರಕಾಶ ಉಡಿಕೇರಿ ಅವರು ಕರ್ನಾಟಕ ಮಾಜಿ ಮುಖ್ಯ ಮಂತ್ರಿಗಳು, ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಸದ್ಭಾವನಾ ಪ್ರತಿಜ್ಞಾವಿಧಿ ಬೋಧಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಗಂಗಾಧರ ಎಮ್. ದೊಡ್ಡಮನಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರವಿ ಕುಲಕರ್ಣಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮದಲ್ಲಿ ಹಿರೇಮಲ್ಲೂರು ಕಾಲೇಜ ಪ್ರಿನ್ಸಿಪಾಲ್ ಶಶಿಧರ ತೋಟಕರ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ ಹಳಿಯಾಳ, ಅಲೆಮಾರಿ ಸಂಘ ರಾಜ್ಯಾಧ್ಯಕ್ಷ ಶಿವಾನಂದ ಪಾಚಂಗಿ, ಜಿಲ್ಲಾ ಮಟ್ಟದ ಅಲೆಮಾರಿ  ಪ್ರಧಾನ ಕಾರ್ಯದರ್ಶಿ ಗುರುನಾಥ ಹುಲಗೂರ, ಅರೆ ಅಲೆಮಾರಿ ಸಮುದಾಯ ಜಿಲ್ಲಾಧ್ಯಕ್ಷ ಪರಶುರಾಮ ಚುರಮರಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಅಧ್ಯಕ್ಷ ಆನಂದ ಸಿಂಗನಾಥ, ಹಡಪದ ಸಮಾಜದ ಜಿಲ್ಲಾಧ್ಯಕ್ಷ ಈರಣ್ಣ ಚಿಕ್ಕಬೆಳ್ಳಿಗಟ್ಟಿ, ರಾಜ್ಯ ಪದಾಧಿಕಾರಿಗಳು, ವಿಶ್ವಕರ್ಮ ಸಮಾಜ ಪದಾಧಿಕಾರಿ ವಸಂತ ಅರ್ಕಾಚಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್