ಬೈಲಹೊಂಗಲ : ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಭದ್ರ ಅಡಿಪಾಯ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಪರಂಪರೆ ಬೆಳೆಯಬೇಕು. ಸಮಾಜದ ಏಳಿಗೆಗಾಗಿ ಯುವಜನರು ನಾಯಕತ್ವ ವಹಿಸಿ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸಬೇಕು. ಸಮಾಜದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರೂ ತಮ್ಮ ಪಾಲಿನ ಕೊಡುಗೆ ನೀಡಿದಾಗ ಮಾತ್ರ ನಿಜವಾದ ಪ್ರಗತಿ ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ರೂಡಗಿ ಹೇಳಿದರು.
ನಗರದ ಶಿವಬಸವ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ, ಬೆಂಗಳೂರು ಹಾಗೂ ತಾಲೂಕು ಘಟಕ ಬೈಲಹೊಂಗಲದ ಸಂಯುಕ್ತಾಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಶಾಸಕ ಮಹಾಂತೇಶ ಕೌಜಲಗಿ, "ಪ್ರತಿ ಕ್ಷೇತ್ರದಲ್ಲೂ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಅವರನ್ನು ಗುರುತಿಸಿ ಗೌರವಿಸುವ ಮೂಲಕ ಇನ್ನಷ್ಟು ಸಾಧನೆಗೆ ಪ್ರೇರಣೆ ನೀಡಬಹುದು. ಸಮಾಜದ ಸಂಘಟನೆಗಳು ಇಂತಹ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಅವುಗಳ ಉದ್ದೇಶ ಸಾರ್ಥಕವಾಗುತ್ತದೆ" ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಘಟಕದ ಅಧ್ಯಕ್ಷ ವೀರುಪಾಕ್ಷ ವಾಲಿ ಮಾತನಾಡಿ, ಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳ ಜವಾಬ್ದಾರಿ ಹಾಗೂ ಆತ್ಮವಿಶ್ವಾಸ ಹೆಚ್ಚುತ್ತದೆ. ಸಮಾಜದ ಸಂಘಟನೆಯನ್ನು ಇನ್ನಷ್ಟು ಚುರುಕುಗೊಳಿಸಿ ರಾಜ್ಯದಲ್ಲೇ ಮಾದರಿಯನ್ನಾಗಿ ರೂಪಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಶಾಖಾ ಮೂರುಸಾವಿರ ಮಠದ ಪ್ರಭುನೀಲಕಂಠ ಸ್ವಾಮೀಜಿ ಸಾನಿಧ್ಯವಹಿಸಿ ಮಾತನಾಡಿದರು.
ರಾಜ್ಯ ಪ್ರ. ಕಾರ್ಯದರ್ಶಿ ಶಿವಾನಂದ ಬಿದರಿ, ಜಿಲ್ಲಾಧ್ಯಕ್ಷ ಗಿರೀಶ ಉದೋಶಿ, ಗೌರವ ಅಧ್ಯಕ್ಷ ಡಾ. ಬಸವರಾಜ ಮಹಾಂತಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಹೇಮಜ್ಯೋತಿ ದೇಶನೂರ, ಯುವ ಘಟಕದ ಅಧ್ಯಕ್ಷ ಸಚಿನ ಚೀಲದ ಹಾಗೂ ರಾಜ್ಯ ಪದಾಧಿಕಾರಿಗಳು, ಕಾರ್ಯಕಾರಿಣಿ ಸಮಿತಿಯ ಸದಸ್ಯರು ವೇದಿಕೆ ಮೇಲಿದ್ದರು.
ಉಪಾಧ್ಯಕ್ಷರುಗಳಾದ ಮಹಾದೇವಪ್ಪ ರಾಯರ, ಸುನೀಲ ವಳಸಂಗ, ಪ್ರ. ಕಾರ್ಯದರ್ಶಿ ಮಲ್ಲಿಕಾರ್ಜುನ ಮೊರಬದ, ಕಾರ್ಯದರ್ಶಿ ದಯಾನಂದ ಗೆಜ್ಜಿ,ಸಹ ಕಾರ್ಯದರ್ಶಿ ಬಸವರಾಜ ಉಪ್ಪಿನ,ಮಹಿಳಾ ಘಟಕದ ಗೌರವ ಅಧ್ಯಕ್ಷೆ ಪಾರಕ್ಕ ವಾಳಿ,ಉಪಾಧ್ಯಕ್ಷೆ ಸ್ನೇಹಲತಾ ಮೆಟಗುಡ್ಡ, ಪ್ರ. ಕಾರ್ಯದರ್ಶಿ ಗೌರಮ್ಮ ಕರ್ಕಿ,
ಯುವ ಘಟಕದ ಉಪಾಧ್ಯಕ್ಷ ಕಾರ್ತಿಕ ಜಿಗಜಿನ್ನಿ, ಪ್ರ. ಕಾರ್ಯದರ್ಶಿ ಮಂಜುನಾಥ ಕೋರಿಶೆಟ್ಟಿ,ಕೋಶಾಧ್ಯಕ್ಷ ಅಮಿತ ಚಿನಗುಡಿ, ಸಮಾಜದ ಮುಖಂಡರಾದ ರಾಜೇಂದ್ರ ಸಂಗೊಳ್ಳಿ,ಅನಿಲ ಮೆಟಗುಡ್ಡ, ಶಿವಾನಂದ ವಾಲಿ, ಸಂಜುಕುಮಾರ ಖಂಡ್ರೆ, ರವಿ ಕರ್ಕಿ, ಶ್ರೀಶೈಲ ಮೆಟಗುಡ್ಡ,ಶಂಕರ ಬಾಳಿ,
ಸೇರಿದಂತೆ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಇದೇ ವೇಳೆ ವಿವಿಧ ಭಾಗಗಳಿಂದ ಆಗಮಿಸಿದ ಸಮಾಜದ ಮುಖಂಡರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಗಜ್ಯೋತಿ ಬಸವೇಶ್ವರ ಹಾಗೂ ಶರಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಮಹಿಳಾ ಘಟಕದ ಅಧ್ಯಕ್ಷೆ ಹೇಮಜ್ಯೋತಿ ದೇಶನೂರ ಸ್ವಾಗತಿಸಿದರು. ಜಯಶ್ರೀ ಹಂಪಣ್ಣವರ
ನಿರೂಪಿಸಿದರು.ಬಸವರಾಜ ತುಪ್ಪದ ವಂದಿಸಿದರು.