Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಅಗಲೀಕರಣ ಸಂತ್ರಸ್ತರ ಧರಣಿಗೆ ಸೋಮಶೇಖರ ರೆಡ್ಡಿ ಬೆಂಬಲ

ಬಳ್ಳಾರಿ, ಮೇ 27: ನಗರದ ಬಾಪೂಜಿ ನಗರ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯಿಂದ ಮನೆ ಕಳೆದುಕೊಂಡ ಸಂತ್ರಸ್ತ ಕುಟುಂಬಗಳ ಹೋರಾಟಕ್ಕೆ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಬೆಂಬಲ ಸೂಚಿಸಿದರು.
ವಾರ್ಡ್ ನಂ. 7 ಮತ್ತು 8ಕ್ಕೆ ಸಂಪರ್ಕ ಹೊಂದಿರುವ ರಸ್ತೆ ಅಗಲೀಕರಣ ಕಾಮಗಾರಿಯ ವೇಳೆ ಕಳೆದ ವರ್ಷ ಇಪ್ಪತ್ತಕ್ಕೂ ಹೆಚ್ಚು ಕುಟುಂಬಗಳ ಮನೆಗಳನ್ನು ತೆರವುಗೊಳಿಸಲಾಗಿತ್ತು. ಆಗ ಸಂತ್ರಸ್ತರಿಗೆ ಪರ್ಯಾಯ ನಿವೇಶನ ಹಾಗೂ ವಸತಿ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಲಾಗಿತ್ತು ಎಂದು ಕುಟುಂಬಗಳು ಆರೋಪಿಸಿವೆ. ಆದರೆ ವರ್ಷ ಕಳೆದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಂತ್ರಸ್ತರು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಇಂದು ಧರಣಿ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಸಂತ್ರಸ್ತ ಕುಟುಂಬಗಳ ಅಹವಾಲು ಆಲಿಸಿ ಅವರಿಗೆ ಬೆಂಬಲ ವ್ಯಕ್ತಪಡಿಸಿದರು. ರಸ್ತೆ ಅಗಲೀಕರಣದ ವೇಳೆ ಮನೆ ಕಳೆದುಕೊಂಡವರಿಗೆ ಪರ್ಯಾಯವಾಗಿ ಮನೆ ಹಾಗೂ ನಿವೇಶನ ನೀಡುವುದು ನ್ಯಾಯಸಮ್ಮತವಾದ ಬೇಡಿಕೆಯಾಗಿದೆ ಎಂದು ಹೇಳಿದರು.
ಡೆಮಾಲಿಶ್ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನೀಡಿದ ಭರವಸೆಗಳನ್ನು ಈಗ ಆಡಳಿತ ನಡೆಸುತ್ತಿರುವವರು ಈಡೇರಿಸಬೇಕು. ಇಲ್ಲವಾದರೆ ಜನರಿಗೆ ಮೋಸ ಮಾಡಿದಂತಾಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ನಡುವೆ, ರಸ್ತೆ ಕಾಮಗಾರಿ ಆರಂಭಿಸುವ ಮೊದಲು ಸುರಕ್ಷಿತ ಮತ್ತು ಕಾನೂನುಬದ್ಧ ನಿವೇಶನ ಒದಗಿಸಬೇಕು. ಇಲ್ಲದಿದ್ದರೆ ಕಾಮಗಾರಿ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಸಂತ್ರಸ್ತ ಕುಟುಂಬಗಳು ಮತ್ತೊಮ್ಮೆ ಎಚ್ಚರಿಕೆ ನೀಡಿವೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ