ಮಧ್ಯಪ್ರದೇಶದ ಛಿಂದ್ವಾರಾ ಪೊಲೀಸರು ರಂಗನಾಥನ್ ಹಿಡಿದುಕೊಟ್ಟವರಿಗೆ 20 ಸಾವಿರ ನೀಡುವುದಾಗಿ ಘೋಷಿಸಿದ್ದರು, ಇದಾದ ಕೆಲವೇ ಗಂಟೆಗಳಲ್ಲಿ ಅವರ ಬಂಧನವಾಗಿದೆ. ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ನಿಂದ ಮಕ್ಕಳ ಸಾವಿನ ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ಇನ್ನೂ ಮೂರು ಮಕ್ಕಳು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 20 ಕ್ಕೆ ತಲುಪಿದೆ. ಐದು ಮಕ್ಕಳು ನಾಗ್ಪುರದಲ್ಲಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವ ರಾಜೇಂದ್ರ ಶುಕ್ಲಾ ಅವರು ಈ ದುರದೃಷ್ಟಕರ ಘಟನೆಯಲ್ಲಿ ಛಿಂದ್ವಾರ, ಪಂಧುರ್ನಾ ಮತ್ತು ಬೇತುಲ್‌ನಲ್ಲಿ 20 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ ಎಂದು ಭರವಸೆ ನೀಡಿದ್ದಾರೆ.