Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂಪಿಯಲ್ಲಿ ಮಹಿಳಾ ಸುರಕ್ಷತೆ ಮತ್ತು ಭದ್ರತೆ ಕುರಿತು ವಿಶೇಷ ಜಾಗೃತಿ ಅಭಿಯಾನ

ವಿಜಯನಗರ (ಹೊಸಪೇಟೆ) ಮೇ.11: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,  ಮಹಿಳಾ ಸಬಲೀಕರಣ ಘಟಕ, ಅಕ್ಕ ಪಡೆ ಹಾಗೂ ವಿಜಯ ಮಹಿಳಾ ಸುರಕ್ಷಾ ಪಡೆ ತಂಡಗಳ ಸಂಯುಕ್ತ ಆಶ್ರಯದಲ್ಲಿ ಹಂಪಿ ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಮಹಿಳಾ ಸುರಕ್ಷತೆ ಮತ್ತು ಭದ್ರತೆಯ ಕುರಿತು ಸೋಮವಾರ ವಿಶೇಷ ಜಾಗೃತಿ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತ್ತು.

ವಿಶ್ವ ಪಾರಂಪರಿಕ ತಾಣವಾದ ಹಂಪಿಯ ವಿರೂಪಾಕ್ಷ ದೇವಾಲಯ, ರಥ ಬೀದಿ ಹಾಗೂ ಬಸ್ ನಿಲ್ದಾಣದ ಸುತ್ತಮುತ್ತ ಸಾರ್ವಜನಿಕರು ಮತ್ತು ಪ್ರವಾಸಿ ಮಹಿಳೆಯರಿಗೆ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಮಿಷನ್ ಸಂಯೋಜಕರಾದ ವಿದ್ಯಾ ಹಾಗೂ ಜೆಂಡರ್ ಸ್ಪೆಷಲಿಸ್ಟ್ ಅನ್ನಪೂರ್ಣ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಾದ 'ಮಿಷನ್ ಶಕ್ತಿ', 'ಬೇಟಿ ಬಚಾವೋ ಬೇಟಿ ಪಡವೋ' ಮತ್ತು 'ಸಖಿ ಒನ್ ಸ್ಟಾಪ್ ಸೆಂಟರ್'ಗಳ ಸೌಲಭ್ಯಗಳನ್ನು ಮಹಿಳೆಯರು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ವಿವರಿಸಿದರು. ಸಖಿ ಕೇಂದ್ರದ ನಿರ್ವಾಹಕಿ ಬಶೀರಾ ಬಿ ಅವರು ಸಂಕಷ್ಟದಲ್ಲಿರುವ ಮಹಿಳೆಯರಿಗೆ ಕೇಂದ್ರವು ನೀಡುವ ಆಸರೆಯ ಬಗ್ಗೆ ಮಾಹಿತಿ ನೀಡಿದರು.

ಯಾವುದೇ ಅಹಿತಕರ ಘಟನೆಗಳು ನಡೆದಾಗ ಅಥವಾ ತುರ್ತು ಸಂದರ್ಭದಲ್ಲಿ  ಮಹಿಳಾ ಸಹಾಯವಾಣಿ: 181
ಪೊಲೀಸ್ ತುರ್ತು ಸೇವೆ: 112, ಮಕ್ಕಳ ಸಹಾಯವಾಣಿ: 1098, ಸೈಬರ್ ಕ್ರೈಂ ಸಹಾಯವಾಣಿ: 1930 ಗೆ ಸಂಪರ್ಕಿಸಬಹುದು. ಅಲ್ಲದೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ  ಕುರಿತು ತಂಡದ ಸದಸ್ಯರು ಸಾರ್ವಜನಿಕರಿಗೆ ತಿಳುವಳಿಕೆ ನೀಡಿದರು. ಅಕ್ಕ ಪಡೆ ಮತ್ತು ವಿಜಯ ಮಹಿಳಾ ಸುರಕ್ಷಾ ಪಡೆಯ ಸಿಬ್ಬಂದಿಗಳು ಸ್ಥಳದಲ್ಲಿದ್ದ ಮಹಿಳಾ ಪ್ರವಾಸಿಗರೊಂದಿಗೆ ಸಂವಹನ ನಡೆಸಿ, ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿಗಳು, ಅಕ್ಕ ಪಡೆ ಹಾಗೂ ವಿಜಯ ಮಹಿಳಾ ಸುರಕ್ಷಾ ಪಡೆಯ ಸದಸ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ