Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದರ್ಶನ್ ಒಳಿತಿಗಾಗಿ ಸಹೋದರಿಯ ಪತಿ ಶನೇಶ್ವರ, ರಾಮಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಾರವಾರ (ಉತ್ತರ ಕನ್ನಡ): ನಟ ದರ್ಶನ್ ಒಳಿತಿಗಾಗಿ ಅವರ ಸಹೋದರಿಯ ಪತಿ ಕಾರವಾರದ ಕೈಗಾದಲ್ಲಿರುವ ಶನೇಶ್ವರ, ರಾಮಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾರವಾರ ತಾಲೂಕಿನ ಕೈಗಾದಲ್ಲಿ ಉದ್ಯೋಗಿಯಾಗಿರುವ ದರ್ಶನ್ ಅವರ ಭಾವ ಮಂಜುನಾಥ ಅವರು ನಟ ಸಂಕಷ್ಟದಿಂದ ಹೊರ ಬರುವಂತಾಗಲಿ, ಪ್ರಕರಣದಿಂದ ಮುಕ್ತರಾಗಬೇಕು ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.


ಕೈಗಾ ವಸತಿ ಸಂಕೀರ್ಣದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಸಲ್ಲಿಸಿದ ಅವರು ಪ್ರಕರಣದಿಂದ ಬೇಗ ಮುಕ್ತರಾಗಿ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.


 ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಪಟ್ಟಿಯಲ್ಲಿರುವ ನಟ ದರ್ಶನ್ ಈಗಾಗಲೇ ಅರೆಸ್ಟ್ ಆಗಿದ್ದಾರೆ. ಬಂಧಿತರ ಸಂಖ್ಯೆ 18ಕ್ಕೇರಿದೆ. ದರ್ಶನ್ ಮತ್ತು ಪವಿತ್ರಾಗೌಡ ಸೇರಿ 13 ಆರೋಪಿಗಳನ್ನು 6 ದಿನಗಳ ಕಾಲ ನಗರದ 24ನೇ ಎಸಿಎಂಎಂ ನ್ಯಾಯಾಲಯ ಪೊಲೀಸರ ವಶಕ್ಕೆ ನೀಡಿ ಆದೇಶಿಸಿತ್ತು. ಭಾಗಶಃ ವಿಚಾರಣೆ ಪೂರ್ಣಗೊಳಿಸಿರುವ ಪೊಲೀಸರು ಇಂದು ಮಧ್ಯಾಹ್ನ ದರ್ಶನ್​ ಸೇರಿ ಆರೋಪಿಗಳನ್ನು ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆಗಳಿವೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕಮಿಷನರ್​ ಬಿ. ದಯಾನಂದ್ ಭೇಟಿ ನೀಡಿ, ಮಾಹಿತಿ ಪಡೆದಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ