LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಹಿರೇಬಾಗೇವಾಡಿಯಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ: ಲಕ್ಷ್ಮೀ ಹೆಬ್ಬಾಳಕರ್ ಭಾಗಿ

ಬೆಳಗಾವಿ: ಶ್ರಾವಣ ಮಾಸದ ಪ್ರಯುಕ್ತ ಹಿರೇಬಾಗೇವಾಡಿಯ ಶ್ರೀ ಜಾಲಿಕರೆಮ್ಮಾ ದೇವಿಯ ದಿವ್ಯ ಸನ್ನಿಧಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮಾಜಿ ಸಚಿವ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಪಾಲ್ಗೊಂಡು ದೇವಿಯ ಕೃಪಾಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಹಾ ರುದ್ರಾಭಿಷೇಕ, ಕುಂಕುಮಾರ್ಚನೆ, ಮಹಾ ಮಂಗಳಾರತಿ ಹಾಗೂ ಮಹಾ ಅನ್ನಪ್ರಸಾದ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಬಳಿಕ ಸುತ್ತಮುತ್ತಲಿನ ಗ್ರಾಮಗಳ ಪೂಜ್ಯ ಶ್ರೀಗಳ ಪಾದಪೂಜೆಯಲ್ಲಿಯೂ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾಗವಹಿಸಿ ಆಶೀರ್ವಾದ ಪಡೆದರು.
ಶ್ರಾವಣ ಮಾಸದ ಪವಿತ್ರ ಸಂದರ್ಭದಲ್ಲಿ ಶ್ರೀ ಜಾಲಿಕರೆಮ್ಮಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ನಾಡಿನ ಸಮಸ್ತ ಜನತೆಯ ಆಯುಷ್ಯ, ಆರೋಗ್ಯ, ಸುಖ-ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.
ಜಗನ್ಮಾತೆ ಶ್ರೀ ಜಾಲಿಕರೆಮ್ಮಾ ದೇವಿಯ ಕೃಪೆಯಿಂದ ಪ್ರತಿಯೊಬ್ಬರ ಜೀವನದಲ್ಲಿ ನೆಮ್ಮದಿ, ಸಂತೋಷ ಮತ್ತು ಸಮೃದ್ಧಿ ನೆಲೆಸಲಿ ಎಂದು ಅವರು ಆಶಿಸಿದರು.
ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹಾಗೂ ಧಾರ್ಮಿಕ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ**ಶ್ರೀ ವರದ ಶಂಕರ ಪೂಜೆ ಮತ್ತು ಮಹಾಪ್ರಸಾದ**ರೈತರಿಂದ ಮತ್ತು ಬಿಜೆಪಿಯಿಂದ  ಲೋಡ್ ಶೆಡ್ಡಿಂಗ್ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ. ತನವ್ ಮೋಹನ್ ಗೆ ವರ್ಷದ ಕನ್ನಡಿಗ ಪ್ರಶಸ್ತಿರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪಿ.ಟಿ. ಪರಮೇಶ್ವರ ನಾಯ್ಕ ಪ್ರವಾಸಸಮಾಜ ಸಂಘಟನೆಯಲ್ಲಿ ಹಾನಗಲ್ ಕುಮಾರಸ್ವಾಮಿಗಳ ಕೊಡುಗೆ ಅನನ್ಯ-ಪ್ರೊ ಮಿಥುನ ಅಂಕಲಿ ಅಭಿಮತಬಳ್ಳಾರಿ: ಕಂಪ್ಲಿ ಮತ್ತು ಕುಡುತಿನಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ - ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಮಾದಕ ವ್ಯಸನಮುಕ್ತ ಸಮಾಜದಿಂದ ಮಾತ್ರ ಸದೃಢ ದೇಶ ನಿರ್ಮಾಣ ಸಾಧ್ಯ: ಡಾ. ವೀರೇಂದ್ರ ಕುಮಾರ್ ಕರೆಗುಣಾತ್ಮ ಶಿಕ್ಷಣ, ಒಳ್ಳೆಯ ಸಂಸ್ಕಾರ ನೀಡುವುದು ಶಿಕ್ಷಕರ ಆಧ್ಯ ಕರ್ತವ್ಯ: ಶಾಸಕ ಂiಶವಂತರಾಯಗೌಡ ಪಾಟೀಲಬರ ಪೀಡಿತ ತಾಲೂಕು ಘೋಷಣೆ ಶೇ.೨೦೦ ಖಚಿತ-ಶಾಸಕ ನಾಡಗೌಡ