Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೀಡೆ ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖ: ಎಸ್ ಎಮ್ ಮುಲ್ಲಾ

ರನ್ನ ಬೆಳಗಲಿ: ಆ.೦೪., ಪಟ್ಟಣದ ಶ್ರೀ ಬಂದ ಲಕ್ಷ್ಮೀ ದೇವಸ್ಥಾನದ ಕ್ರಿಡಾಂಗಣದಲ್ಲಿ ಶ್ರೀ ಗುರು ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಸೋಮವಾರ ದಂದು ಸನ್ ೨೦೨೫-೨೬ನೇ ಸಾಲಿನ ರನ್ನ ಬೆಳಗಲಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ ಗಳು ಜರುಗಿದವು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್ ಎಮ್ ಮುಲ್ಲಾ ಶಿಕ್ಷಣಾಧಿಕಾರಿಗಳು ಶಿಕ್ಷಣ ಮತ್ತು ಕ್ರೀಡೆ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ. ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಇರಲು ಸಾಧ್ಯ. ಜೀವನಪಯಂತ ಮಾನಸಿಕವಾಗಿ,ದೈಹಿಕವಾಗಿ, ಸದೃಢವಾಗಿರಲು ಜ್ಞಾನದ ಜೊತೆಗೆ ಆರೋಗ್ಯವು ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಆದ್ದರಿಂದ ಮಕ್ಕಳಿಗೆ ಓದಿನ ಜೊತೆಗೆ ಕ್ರೀಡೆಯನ್ನು ಬೆಂಬಲಿಸಿ,ಸರಕಾರಿ ಮಟ್ಟದ ಕ್ರೀಡಾಕೂಟಗಳಿಗೆ ಧಾನಿಗಳೇ ಶಕ್ತಿ ಧಾತರು ಅಂತ ಎಲ್ಲಾ ಧಾನಿಗಳಿಗೆ ನಾನು ಅಭಿನಂದಿಸುತ್ತೇನೆ ಎಂದು ತಿಳಿಸಿದರು.

ಶಿಕ್ಷಣ ಸಂಘದ ಅಧ್ಯಕ್ಷರಾದ ಭೀಮನಗೌಡ ಶಿವನಗೌಡ ಪಾಟೀಲ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ದೈಹಿಕ ಶಿಕ್ಷಕರಾದ ಎಸ್ ಬಿ ರಡರಟ್ಟಿ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಸಾನಿಧ್ಯ ವಹಿಸಿದ ಕಾಡಯ್ಯ ಗಣಾಚಾರಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.ಆಡಳಿತ ಮಂಡಳಿಯವರಾದ ಲಕ್ಕಪ್ಪ ದೊಡಹಟ್ಟಿ,ಮಲ್ಲಪ್ಪ ಸನಹಟ್ಟಿ, ಮುತ್ತಪ್ಪ ಹೊಸಪೇಟಿ, ಗುರುನಾಥ ಹಿಪ್ಪರಗಿ, ಶಿವಪ್ಪ ಕೊಣ್ಣೂರ, ಪರಮಾನಂದ ಅಲಗೂರ, ಹನಮಂತ ಕಡಪಟ್ಟಿ, ಈರಪ್ಪ ಹಿಪ್ಪರಗಿ, ಚಿಕ್ಕಪ್ಪ ನಾಯಕ, ಪಂಡಿತ ಪೂಜಾರ, ರವೀಂದ್ರ ಮಂಟೂರ, ಬಸವಂತ ಮುರನಾಳ, ಮಾರುತಿ ಆರೇನಾಡ, ಗಜಾನನ ಸಿದ್ದಾಪೂರ,ಬಸಪ್ಪ ಮಂಟೂರ,ಪ್ರವೀಣ ಬರಮಣಿ, ಮಹಾಲಿಂಗಪ್ಪ ಹಂಪಿಹೊಳಿ ಮತ್ತು ದುಂಡಪ್ಪ ಬರಮನಿ,ಸದಾಶಿವ ಹೊಸಟ್ಟಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಸಿಆರ್‌ಸಿಗಳಾದ ಬಸವರಾಜ ಬಳ್ಳಾರಿ ನಿರ್ಣಾಕಯಕರಿಗೆ ಆಟದ ನಿಯಮಗಳ ಬಗ್ಗೆ ತಿಳಿಸಿ, ಮಾರ್ಗದರ್ಶನ ನೀಡಿದರು.
ಮುಖ್ಯೋಪಾಧ್ಯಾಯರಾದ ಅಶೋಕ ಮುಡಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕರಾದ ಬಸವರಾಜ ಬೂದಿಹಾಳ ಸ್ವಾಗತಿಸಿದರು ವಸಂತ ಚವ್ಹಾನ ನಿರೂಪಿಸಿದರು,ಯೋಗ ಶಿಕ್ಷಕರಾದ ರಾಘವೇಂದ್ರ ನೀಲಣ್ಣವರ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ