LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಬದುಕಿಗೆ ಶಿಸ್ತು ನೀಡುವ ಅಮೂಲ್ಯ ಸಾಧನವೇ ಕ್ರೀಡೆ: ಎಂ.ವಿ. ಸೊಪ್ಪಿಮಠ

 

ರನ್ನ ಬೆಳಗಲಿ, ಆ. ೨೯: ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಮುಧೋಳ ಇವರ ಸಂಯುಕ್ತ ಆಶ್ರಯದಲ್ಲಿ ರನ್ನ ಬೆಳಗಲಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಶುಕ್ರವಾರ ನಡೆಯಿತು.

ಕ್ರೀಡಾಕೂಟಕ್ಕೆ ಪ್ರಾಚಾರ್ಯ ಎಂ.ವಿ. ಸೊಪ್ಪಿಮಠ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, “ಬದುಕಿಗೆ ಶಿಸ್ತು ನೀಡುವ ಅಮೂಲ್ಯ ಸಾಧನವೇ ಕ್ರೀಡೆ. ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಆದರೆ ಕ್ರೀಡೆಯಲ್ಲಿ ಭಾಗವಹಿಸುವಿಕೆ ಅತ್ಯಂತ ಮುಖ್ಯ. ಸದೃಢ ದೇಹವಿದ್ದಾಗ ಮಾತ್ರ ಸದೃಢ ಮನಸ್ಸನ್ನು ಹೊಂದಲು ಸಾಧ್ಯ. ಆದ್ದರಿಂದ ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಮಹತ್ವ ನೀಡಬೇಕು” ಎಂದು ಹೇಳಿದರು.

ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಸಂಗಮೇಶ ಮುಕ್ಕಾರ್ತಿಹಾಳ ಮಾತನಾಡಿ, ಪ್ರತಿಯೊಂದು ಕ್ರೀಡೆಯಲ್ಲಿಯೂ ಪ್ರಾಮಾಣಿಕತೆ ಬಹಳ ಮುಖ್ಯ. ನಿರ್ಣಾಯಕರ ತೀರ್ಪಿಗೆ ಬದ್ಧರಾಗಿ ಕ್ರೀಡಾ ಮನೋಭಾವದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. “ಸೋಲೇ ಗೆಲುವಿನ ಮೆಟ್ಟಿಲು” ಎಂಬ ತತ್ವವನ್ನು ಅಳವಡಿಸಿಕೊಂಡು, ಗೆಲುವಿಗಾಗಿ ಕಠಿಣ ಪರಿಶ್ರಮ ಹಾಗೂ ನಿರಂತರ ಪ್ರಯತ್ನ ಅಗತ್ಯ. ಕ್ರೀಡಾಕೂಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬರೂ ವಿಜಯಶಾಲಿಗಳೇ ಎಂದು ಹೇಳಿದರು.

ಸಿಆರ್‌ಪಿಗಳಾದ ಬಸವರಾಜ ಬಳ್ಳಾರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕ್ರೀಡೆಯ ಮಹತ್ವ ಹಾಗೂ ಕ್ರೀಡಾಕೂಟದ ಆಯೋಜನೆ ಕುರಿತು ಮಾಹಿತಿ ನೀಡಿದರು. ಅಲ್ಲದೆ, ನಿರ್ಣಾಯಕರಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ದೈಹಿಕ ಶಿಕ್ಷಣ ಶಿಕ್ಷಕ ಕೆ.ಆರ್. ಕಲ್ಲಶೆಟ್ಟಿ ಅವರು ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಸಿಂಗ್ ಆಫೀಸರ್ ಗಜಾನಂದ ಗಾಜರ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

ಪತ್ರಕರ್ತರಾದ ರಾಘವೇಂದ್ರ ನೀಲನ್ನವರ, ಎನ್. ಗೋಪಾಲ, ಉಪಪ್ರಾಚಾರ್ಯ ಸುರೇಶಕುಮಾರ್ ಮುದಕನ್ನವರ, ನಿಲಯ ಪಾಲಕ ಕೆ.ಎ. ಉಳ್ಳಾಗಡ್ಡಿ, ರಾಹುಲ ಸಾಗರ, ಯಲ್ಲಪ್ಪ ಶಿರಗಾಂವಿ, ವಿಲಾಸ ಎನ್ನಿ, ಎಂ.ಎಸ್. ವಿರಕ್ತಮಠ, ಗುರುಲಿಂಗಯ್ಯ ಮಠಪತಿ, ಮುತ್ತು ತೇರದಾಳ, ನಿಂಗಪ್ಪ ಜಂಗಾಲಿ, ಶಿಲ್ಪಾ ಹಾರೂಗೇರಿ ಸೇರಿದಂತೆ ಶಿಕ್ಷಕರು, ನಿರ್ಣಾಯಕರು, ಕ್ರೀಡಾಪಟುಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್