Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಕ್ತ ಸಾಗರದ ಮಧ್ಯೆ ಜರುಗಿದ ಅಮ್ಮಿನಬಾವಿಯ ಶ್ರೀಗುರುಶಾಂತಲಿಂಗ ಶಿವಯೋಗಿಗಳ ರಥೋತ್ಸವ

ಧಾರವಾಡ: ತಾಲೂಕಿನ ಅಮ್ಮಿನಬಾವಿ ಗ್ರಾಮದ ಸಂಸ್ಥಾನ ಪಂಚಗೃಹ ಹಿರೇಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಮಠದ ಕರ್ತೃ ಪುರುಷರಾದ ನಿರ್ವಿಕಲ್ಪ ಸಮಾಧಿಸ್ಥರಾದ ಮಹಾತಪಸ್ವಿ ಶ್ರೀಗುರುಶಾಂತಲಿಂಗ ಶಿವಯೋಗಿಗಳ ರಥೋತ್ಸವ ಬುಧವಾರ ಭಕ್ತಸಾಗರದ ನಿರಂತರ ಜಯಘೋಷದ ಮಧ್ಯೆ ವಿಜೃಂಭಣೆಯಿಂದ ಜರುಗಿತು.


 ಧಾರವಾಡ ಮುರುಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ರಥೋತ್ಸವವನ್ನು ಉದ್ಘಾಟಿಸಿದರು. ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯರು, ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯರು, ಸತ್ತಿಗೇರಿ ಹಿರೇಮಠದ ಶ್ರೀಚಂದ್ರಶೇಖರ ಶಿವಾಚಾರ್ಯರು ಸೇರಿದಂತೆ ಹಲವಾರು ಮಠಾಧೀಶರು ಇದ್ದರು.


ಈ ಬಾರಿ ರಥವನ್ನು ವಿಶೇಷವಾಗಿ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಹೆಜ್ಜೆಮೇಳ, ಕರಡಿಮಜಲು, ಡೊಳ್ಳು, ಜಗ್ಗಲಿಗೆ, ಝಾಂಜ್, ಸಂಬಾಳ ಸೇರಿ ವಿವಿಧ ಜನಪದ ವಾದ್ಯ-ಮೇಳಗಳೊಂದಿಗೆ ಆರಂಭಗೊಂಡ ರಥೋತ್ಸವವು ಪಂಚಗೃಹ ಹಿರೇಮಠದಿಂದ ಹೊರಟು ಇಸ್ಲಾಂ ಧರ್ಮೀಯರ ಪ್ರಾರ್ಥನಾ ಮಂದಿರ, ಅಮ್ಮಿನಬಾವಿ ಮುಖ್ಯ ಪೇಟೆ ರಸ್ತೆಯಲ್ಲಿ ಸಂಚರಿಸಿ ಕರಡಿಗುಡ್ಡ ರಸ್ತೆಗೆ ಹೊಂದಿಕೊಂಡಿರುವ ಈಶ್ವರ ದೇವಾಲಯದವರೆಗೆ ಹೋಗಿ ಮರಳಿ ಅದೇ ಮಾರ್ಗವಾಗಿ ಸಂಸ್ಥಾನ ಪಂಚಗೃಹ ಹಿರೇಮಠವನ್ನು ತಲುಪಿತು.


 *ಪುಷ್ಪವೃಷ್ಟಿ* : ದಾರಿಯುದ್ದಕ್ಕೂ ಭಕ್ತರು ಅಲಂಕೃತ ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ತಮ್ಮ ಭಕ್ತಿ ಸಮರ್ಪಣೆ ಮಾಡುವುದು ಸಾಮಾನ್ಯವಾಗಿತ್ತು. ಜೊತೆಗೆ ಜನರು ತಮ್ಮ ಮನೆಯ ಮೇಲೆ ಹತ್ತಿ ಜಯಘೋಷ ಮೊಳಗಿಸುವುದರೊಂದಿಗೆ ಪುಷ್ಪವೃಷ್ಟಿ ಮಾಡಿದರು.


 ಹುಬ್ಬಳ್ಳಿ-ಧಾರವಾಡ, ಅಮ್ಮಿನಬಾವಿ, ಮರೇವಾಡ, ತಿಮ್ಮಾಪೂರ, ಕರಡಿಗುಡ್ಡ, ಕವಲಗೇರಿ, ಚಂದನಮಟ್ಟಿ, ಹಾರೋಬೆಳವಡಿ ಸೇರಿದಂತೆ ಹಲವಾರು ಕಡೆಗಳಿಂದ ಅಪಾರ ಸಂಖ್ಯೆಯ ಭಕ್ತಸ್ತೋಮ ಈ ರಥೋತ್ಸವದಲ್ಲಿ ಪಾಲ್ಗೊಂಡು ಶಾಂತಪ್ಪಜ್ಜನ ಸಂಭ್ರಮದ ರಥೋತ್ಸವಕ್ಕೆ ಸಾಕ್ಷಿಯಾದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ