Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಭಗೀರಥ ಜಯಂತಿ ಉತ್ಸವ-2025

ಕಠಿಣ ತಪಸ್ಸಿನಿಂದ ಸಕಲ ಜೀವರಾಶಿಗಳಿಗೆ ಗಂಗೆಯನ್ನು ಭೂಮಿಗೆ ತಂದವರು ಭಗೀರಥರು: ಮಲ್ಲಿಕಾರ್ಜುನ ಚೌಕಾಶಿ


ಬೆಳಗಾವಿ,ಮೇ.11: ಶ್ರೀ ಭಗೀರಥರ ಮಹರ್ಷಿಗಳು ಕಠಿಣ ತಪಸ್ಸಿನಿಂದ ಶಿವನನನ್ನು ಒಲಿಸಿಕೊಂಡು ಗಂಗೆಯನ್ನು ಭೂಮಿಗೆ ತಂದು ಸಕಲ ಜೀವಿಗಳಿಗೆ ಬದುಕಲು ಸಹಾಯ ಮಾಡಿದವರು. ಹಟದಿಂದ ಅಸಾಧ್ಯವಾದುದನ್ನೂ ಸಾಧಿಸುವುದು ಭಗೀರಥರ ಸಾಧನೆ ಎಂದು ನ್ಯಾಯವಾದಿ ಮಲ್ಲಿಕಾರ್ಜುನ ಚೌಕಾಶಿ ತಿಳಿಸಿದರು.


 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾ ಮಂದಿರಲ್ಲಿರ ವಿವಾರ (ಮೇ.10) ನಡೆದ ಶ್ರೀ ಭಗೀರಥ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


 

ಕನ್ನಡಿಯಲ್ಲಿ ಚಂದ್ರ ಬಿಂದುವನ್ನ ನೋಡುತ್ತಾ ಚಂದ್ರನನ್ನು ವರ್ಣನೆ ಮಾಡಿದ ಹಾಗೇ ಭಗೀರಥರನ್ನು ಬಣ್ಣಿಸಬಹುದು. ಭಗೀರಥರ ಕುರಿತು ಹೊರದೇಶದವರಿಗೆ ಸಹ ಅರಿವಿದೆ. ಸಂವಿಧಾನದ ಮೂಲ ಪ್ರತಿಯಲ್ಲಿ ಭಗೀರಥರ ಭಾವಚಿತ್ರವಿದೆ, ಅವರ ಬಗ್ಗೆ ತಿಳಿದುಕೊಂಡು ಅವರು ತೋರಿಸಿದ ದಾರಿಯಲ್ಲಿ ಸಮಾಜದ‌ ಜನರು ನಡೆಯಬೇಕು ಎಂದು ಹೇಳಿದರು.


 

ಉಪ್ಪಾ ವೀರರೆ ಉಪ್ಪಾರರು, ಉಪ್ಪಿನ ವ್ಯಾಪಾರದ ಜೊತೆಗೆ ಬ್ರಿಟಿಷರ ಚಲನ-ವಲನಗಳ ಬಗ್ಗೆ ಮಾಹಿತಿ ತಿಳಿಸಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಇರುವಂತಹ ಸ್ವಾತಂತ್ರ್ಯ ಹೋರಾಟಗಾರರಿಗೆ ಸಹಾಯ ಮಾಡಿದಂತ ಸಮಾಜ ನಮ್ಮದು, ದೇಶಕ್ಕೆ ಭಗೀರಥರ ಸಮಾಜದ ಕೊಡುಗೆ ಅಪಾರವಿದೆ ಎಂದು ನ್ಯಾಯವಾದಿಗಳಾದ ಮಲ್ಲಿಕಾರ್ಜುನ ಚೌಕಾಶಿ ಅವರು ತಿಳಿಸಿದರು.


 

ಈ ಸಂದರ್ಭದಲ್ಲಿ ಮಧುರೆ ಭಗೀರಥ ಮಹರ್ಷಿ ಗುರುಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಜಿಗಳು,  ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ , ಮಾರ್ಕೆಟ್ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಮಹಾಂತೇಶ ದ್ಯಾಮಣ್ಣವರ,  ಸಮಾಜದ ಮುಖಂಡರಾದ ರವಿ ಉಪ್ಪಾರ, ಬಸವರಾಜ ಆಯಟ್ಟಿ, ಕುಶಾಲ ಗುಡೆನ್ನವರ, ಶಿವಪುತ್ರಪ್ಪ ಜಕಬಾಳ, ಜಿ.ಎಸ್.ಉಪ್ಪಾರ, ಉದಯ ಇಡಗಲ, ಅರ್ಜುನ ನಾಯಿಕವಾಡಿ ಹಾಗೂ ಮತ್ತಿತರು ಉಪಸ್ಥಿತರಿದ್ದರು.


 

ಇದಕ್ಕೂ ಮುಂಚೆ ಸಂಸದ ಜಗದೀಶ್ ಶೆಟ್ಟರ್ ಅವರು ನಗರದ ಕೋಟೆ ಕೆರೆ ಆವರಣದಲ್ಲಿ  ಶ್ರೀ ಭಗೀರಥ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.


ಕೋಟೆ ಕೆರೆ ಆವರಣದಿಂದ ಪ್ರಾರಂಭವಾದ ಮೆರವಣಿಗೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮಾರ್ಗವಾಗಿ ಕುಮಾರ ಗಂಧರ್ವ ಕಲಾ ಮಂದಿರದವರೆಗೆ ತಲುಪಿತು.


ಮೆರವಣಿಗೆಯಲ್ಲಿ ಕುಂಭಮೇಳ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಪಾಲ್ಗೊಂಡಿದ್ದವು.


 

ಈ ಸಂದರ್ಭದಲ್ಲಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಉಪಮಹಾಪೌರರಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ಸಮಾಜದ ಮುಖಂಡರು ಹಾಜರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ