ಬಾಗಲಕೋಟೆ, ಜುಲೈ 16: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ ಜಡಿದಿದ್ದು, ಹೊಸ ಚರ್ಚೆ ಹುಟ್ಟು ಹಾಕಿತ್ತು. ಇದು ಕಾಂಗ್ರೆಸ್ ನಾಯಕ ವಿಜಯಾನಂದ ಕಾಶಪ್ಪನವರ ಮತ್ತು ಪಂಚಮಸಾಲಿ ಶ್ರೀಗಳ ಮಧ್ಯೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಇಂದು ಕೂಡ ಪೀಠದ ಎದುರು ಪೊಲೀಸ್ ಬಿಗಿಭದ್ರತೆ ಒದಗಿಸಲಾಗಿದ್ದು, ಪೀಠಕ್ಕೆ ಜಡಿದಿದ್ದ ಬೀಗವನ್ನು ನಿನ್ನೆಯೇ ತೆರೆಯಲಾಗಿದೆ. ಆ ಮೂಲಕ ಇಬ್ಬರ ಮಧ್ಯೆದ ಗುದ್ದಾಟ ತಾತ್ಕಾಲಿಕ ಸುಖಾಂತ್ಯ ಕಂಡಿದೆ.
ಕಳೆದ ನಾಲ್ಕು ದಿನದ ಹಿಂದೆಯೇ ಕೂಡಲ ಸಂಗಮದ ಪೀಠಕ್ಕೆ ಬೀಗ ಬಿದ್ದಿತ್ತು. ವಿವಾದ ತೀವ್ರಗೊಳ್ಳುತ್ತಿದ್ದಂತೆ ಪಂಚಮಸಾಲಿ ಸಮುದಾಯದ ಮುಖಂಡರು ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಅವರೊಂದಿಗೆ ಸಭೆ ಮಾಡಿ ಇದೀಗ ಪೀಠಕ್ಕೆ ಜಡಿದಿದ್ದ ಬೀಗವನ್ನು ತೆರೆದಿದ್ದಾರೆ. ಬಳಿಕ ವಿಜಯಾನಂದ ಕಾಶಪ್ಪನವರ್ ಮತ್ತು ಬಸವಜಯಮೃತ್ಯುಂಜಯ ಸ್ವಾಮೀಜಿ ಬೆಂಬಲಿಗರಿಂದ ಪೀಠದಲ್ಲಿ ಸಭೆ ಕೂಡ ಮಾಡಲಾಗಿದೆ. ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಜೊತೆಗೆ ವಿವಾದ ಹಿನ್ನಲೆ ಬಂದ ಆಗಿದ್ದ ಪೀಠದಲ್ಲಿರುವ ಕನ್ನಡ ಪ್ರಾಥಮಿಕ ಶಾಲೆ ಕೂಡ ಇದೀಗ ಆರಂಭಗೊಂಡಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.