Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆ.16 ರಂದು ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ

ಬಳ್ಳಾರಿ,ಆ.11 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಆ.16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಬಿಡಿಎಎ ಫುಟ್‌ಬಾಲ್ ಮೈದಾನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ಮಹಾನಗರ ಪಾಲಿಕೆಯ ಸಭಾ ನಾಯಕರು ಹಾಗೂ ಜಿಲ್ಲಾ ಗೊಲ್ಲರ ಸಂಘ ಅಧ್ಯಕ್ಷ ಪಿ.ಗಾದೆಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಸಿದ್ಧರಾಮ ಕಲ್ಮಠ ಅವರು ಜಯಂತಿ ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ವೈ.ಬಸವರಾಜ ತಂಡದಿAದ ಸಮೂಹ ನೃತ್ಯ ಇರಲಿದೆ.

ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 09.30 ಗಂಟೆಗೆ ನಗರದ ಶ್ರೀ ಕನಕ ದುರ್ಗಮ್ಮ ದೇವಸ್ಥಾನ  ಆವರಣದಿಂದ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಗಡಿಗಿ ಚನ್ನಪ್ಪ ವೃತ್ತದ ಮೂಲಕ ಬಿಡಿಎಎ ಫುಟ್‌ಬಾಲ್ ಮೈದಾನ ಸಭಾಂಗಣದವರೆಗೆ ನಡೆಯಲಿದೆ.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆ ಆಯುಕ್ತರು ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ