Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಶ್ರೀ ಮಹಾಲಕ್ಷ್ಮೀ ಅರ್ಬನ ಕೋ-ಆಪ ಕ್ರೆಡಿಟ್ ಸೊಸಾಯಿಟಿಗೆ ೪.೩೦ ಕೋಟಿ ರೂ ಲಾಭ"

ಮೂಡಲಗಿ : ಪಟ್ಟಣದ ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮೀ ಅರ್ಬನ ಕೋ-ಆಪ ಕ್ರೆಡಿಟ್ ಸೊಸಾಯಿಟಿ ಲಿ., ಮೂಡಲಗಿ ಸಂಘವು ಪ್ರಸಕ್ತ ೨೦೨೫-೨೬ ಕ್ಕೆ ರೂ ೪.೩೦ ಕೋಟಿ ನಿವ್ವಳ ಲಾಭಗಳಿಸಿದೆ. ಎಂದು ಸಂಘದ ಅಧ್ಯಕ್ಷರಾದ ಶ್ರೀ ಸಂತೋ? ಪಾರ್ಶಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಶನಿವಾರದಂದು ಪಟ್ಟಣದ ಸಹಕಾರಿ ಸಂಘದ ಪ್ರಧಾನ ಕಛೇರಿಯಲ್ಲಿ ನಡೆದ ಆಡಳಿತ ಮಂಡಳಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ೩.೧೫ ಕೋಟಿ ರೂ ಶೇರು ಬಂಡವಾಳ, ೧೪೨.೮೫ ಕೋಟಿ ರೂ ಠೇವುಗಳು, ೨೨.೭೭ ಕೋಟಿ ರೂ ನಿಧಿಗಳನ್ನು ಹೊಂದಿ ವಿವಿಧ ಬ್ಯಾಂಕುಗಳಲ್ಲಿ ಠೇವಣಿದಾರರ ಭದ್ರತೆಗಾಗಿ ೫೦.೧೪ ಕೋಟಿ ರೂ ಗುಂತಾವಣಿ ಮಾಡಿ, ೧೧೭.೪೨. ಕೋಟಿ ರೂ ಸಾಲ ವಿತರಿಸಿದ್ದು, ೧೭೯.೪೭ ಕೋಟಿ ರೂ ದುಡಿಯುವ ಬಂಡವಾಳ ಹೊಂದಿದೆ ಎಂದು ಹೇಳಿದರು.
ಸಂಘವು ಪ್ರಧಾನ ಕಛೇರಿ ಹಾಗೂ ೧೦ ಶಾಖೆಗಳನ್ನು ಹೊಂದಿದ್ದು, ಪ್ರಧಾನಕಛೇರಿ, ಖಾನಟ್ಟಿ ಮತ್ತು ಸುಣಧೋಳಿ ಶಾಖೆಗಳು ಸಂಘದ ಸ್ವಂತ ಭವ್ಯವಾದ ಕಟ್ಟಡಗಳನ್ನು ಹೊಂದಿವೆ. ಕಟಕೋಳ ಶಾಖೆಗೆ ನಿವೇಶನ ಖರೀದಿಸಲಾಗಿದೆ. ಎಲ್ಲ ಶಾಖೆಗಳು ಗಣಕೀಕೃತವಾಗಿವೆ. ಪ್ರಾರಂಭದಿಂದಲೂ ಪ್ರತಿಶತ ಹದಿನೈದರಂತೆ ಶೇರು ಲಾಭಾಂಶ ವಿತರಿಸುತ್ತಾ ಶೇರುದಾರರ ವಿಶ್ವಾಸವನ್ನು ಗಳಿಸಿರುತ್ತದೆ ಎಂದು ತಿಳಿಸಿ, ಸಮಯಕ್ಕೆ ಸರಿಯಾಗಿ ಸಾಲ ಮತ್ತು ಬಡ್ಡಿಯನ್ನು ಮರುಪಾವತಿ ಮಾಡಿರುವ ಎಲ್ಲ ಸದಸ್ಯರಿಗೆ ಸಂಘದ ಅಧ್ಯಕ್ಷ ಪಾರ್ಶಿಯವರು ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಮಹಾದೇವ ಗೋಕಾಕ, ಸಂಘದ ನಿರ್ದೇಶಕರಾದ ಮುತ್ತಪ್ಪ ಈರಪ್ಪನವರ, ಶಿವಬಸು ಖಾನಟ್ಟಿ, ಮಲ್ಲಪ್ಪ ಗಾಣಿಗೇರ, ಡಾ.ಪ್ರಕಾಶ ನಿಡಗುಂದಿ, ಸಚೀನ ಮುನ್ಯಾಳ, ಸಾಂವಕ್ಕ.ಮು.ಶೆಕ್ಕಿ, ಭಾರತಿ.ರ.ಪಾಟೀಲ, ವಿದ್ಯಾಶ್ರೀ.ಸು.ಮುರಗೋಡ, ಗೌರವ್ವ.ಗಿ.ಪಾಟೀಲ, ಶೋಭಾ.ಮಾ.ಕದಂ, ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಚನ್ನಬಸಪ್ಪ ಬಗನಾಳ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

 

 

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ