ಕೊಪ್ಪಳ ಅಕ್ಟೋಬರ್ 26 : ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 26ರಂದು ಆಚರಿಸಲಾಯಿತು.
ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸಮಾಜದ ಮುಖಂಡರೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಜ್ಜಪ್ಪ ಸೋಗಲದ, ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಹನುಮೇಶ ದೊಡ್ಡಮನಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಎನ್. ಪುಷ್ಪಲತಾ, ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ಸಂಘಟನಾ ಕಾರ್ಯದರ್ಶಿಗಳಾದ ಸುರೇಶ ಡೊಣ್ಣಿ, ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶರಣಪ್ಪ ನಾಯಕ, ಮುಖಂಡರಾದ ಮಂಜುನಾಥ ಗೊಂಡಬಾಳ, ಲಕ್ಷ್ಮಣ ಚೌಡ್ಕಿ, ಫಕೀರಪ್ಪ ಬಿ. ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
****