LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Dharwad

ಸಂಭ್ರಮದಿಂದ ಜರುಗಿದ ಧಾರವಾಡದ ಶ್ರೀ ಉಳವಿ ಚನ್ನಬಸವೇಶ್ವರ ರಥೋತ್ಸವ

ಧಾರವಾಡ: ಕೊನೆ ಶ್ರಾವಣ ಸೋಮವಾರದ ಪ್ರಯುಕ್ತ ನಗರದ ಉಳವಿ ಚನ್ನಬಸವೇಶ್ವರ ಮಹಾರಥೋತ್ಸವ ಸಡಗರ ಮತ್ತು ಭಕ್ತಿಭಾವದಿಂದ ಜರುಗಿತು.
ಶ್ರಾವಣ ಮಾಸದ ಅಂಗವಾಗಿ  ದೇವರ ಮೂರ್ತಿಗೆ ವಿಶೇಷ ಪೂಜೆ, ರುದ್ರಾಭಿಷೇಕ ಮಾಡಲಾಯಿತು. ವಿವಿಧ ತರಹದ ಹೂಗಳಿಂದ ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ವಿಧಿಗಳು ನೆರವೇರಿದವು. ತಳಿರು-ತೋರಣ, ಹೂವು, ವಿದ್ಯುತ್ ದೀಪಗಳಿಂದ ದೇವಸ್ಥಾನವನ್ನು ಅಲಂಕರಿಸಲಾಗಿತ್ತು. ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ  ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು.
ಸಂಜೆ 4ಗಂಟೆಗೆ  ವಿಶೇಷ ಅಲಂಕೃತ ರಥದಲ್ಲಿ ದೇವರ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ ಸಕಲ ವಾದ್ಯಮೇಳ, ಭಜನಾ ಮಂಡಳಿಗಳ ಜಯಘೋಷ ಮತ್ತು ಮಂಗಳವಾದ್ಯದೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತರು `ಹರ ಹರ ಮಹಾದೇವ, ಉಳವಿ ಚನ್ನಬಸವೇಶ್ವರ ಮಹಾರಾಜ್ ಕೀ ಜೈ' ಘೋಷಣೆ ಮೊಳಗಿಸಿ ರಥದ ಹಗ್ಗ ಹಿಡಿದು ಎಳೆದರು.
ದೇವಸ್ಥಾನದಿಂದ ಹೊರಟ ರಥವು ಉಳವಿ ಚನ್ನಬಸವೇಶ್ವರ ವರ್ತುಲ ಹಾಗೂ ಹಿಂದಿ ಪ್ರಚಾರ ಸಭಾ ಮುಖ್ಯ ರಸ್ತೆ ಮೂಲಕ ಸಂಚರಿಸಿ ಮರಳಿ ದೇವಸ್ಥಾನ ತಲುಪಿ ಸಂಪನ್ನಗೊಂಡಿತು. ರಥ ಸಾಗುವ ಹಾದಿಯುದ್ದಕ್ಕೂ ಭಕ್ತರು ಉತ್ತತ್ತಿ, ಬಾಳೆಹಣ್ಣು ತೂರಿ ಭಕ್ತಿ ಸಮರ್ಪಿಸಿದರು.
ಹೆಜ್ಜೆಮೇಳ, ಭಜನಾ ತಂಡ, ಜಗ್ಗಲಗಿ, ಕರಡಿ ಮಜಲು ಸೇರಿದಂತೆ ವಿವಿಧ ಕಲಾಮೇಳಗಳು ರಥೋತ್ಸವಕ್ಕೆ ಮೆರಗು ನೀಡಿದವು. ಭಕ್ತರು ಬೆಳಿಗ್ಗೆಯಿಂದಲೇ ಪ್ರಸಾದ ಸವಿದು ಪುನೀತರಾದರು. 
ಭದ್ರತೆಗೆ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಯಾದವಾಡ ಆನಂದಧಾಮದ ಸಿದ್ಧಾರೂಢ ಮಠದ ಆನಂದ ಸ್ವಾಮೀಜಿ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಎಸ್.ಆರ್. ರಾಮನಗೌಡರ, ಧರ್ಮದರ್ಶಿ ವಿಜಯೇಂದ್ರ ಪಾಟೀಲ, ಟಿ.ಎಸ್. ಪಾಟೀಲ, ಬಸವರಾಜ ಸೂರಗೊಂಡ, ಜಿ.ಬಿ. ಅಳಗವಾಡಿ, ಎನ್.ಬಿ. ಗೋಲಣ್ಣವರ, ಸುರೇಶ ಪಟ್ಟಣಶೆಟ್ಟಿ, ಸುರೇಶ ಹೆಗ್ಗೇರಿ, ಶಂಕರ ಪಾಗದ, ಸಂಜಯ ಲಕಮನಹಳ್ಳಿ, ಜಿ.ಟಿ. ಶಿರೋಳ ಪಾಲ್ಗೊಂಡಿದ್ದರು.
ಧಾರವಾಡದ ಉಳವಿ ಚನ್ನಬಸವೇಶ್ವರ ಮಹಾರಥೋತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್