Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಎಸ್‌ಕೆ ಸಮಾಜ ಅತ್ಯಂತ ವೇಗವಾಗಿ ಅಭಿವೃದ್ದಿ ಹೊಂದುತ್ತಿದೆ : ಕೆ.ಎಚ್.ಪಾಟೀಲ

ಗದಗ : ಎಸ್‌ಎಸ್‌ಕೆ ಸಮಾಜದಲ್ಲಿ ಯುವ ನಾಯಕರನ್ನು ಗುರುತಿಸುವ ಕೆಲಸವಾಗಬೇಕು ಎಂದು ಯವ ಮುಖಂಡ ಕೃಷ್ಣಗೌಡ ಎಚ್. ಪಾಟೀಲ ಅವರು ಹೇಳಿದರು.
ನಗರದ ಹಳೇ ಸರಾಪ್ ಬಜಾರದ ಶ್ರೀ ಜಗದಂಬಾ ದೇವಸ್ಥಾನದ ಸಹಸ್ರಾರ್ಜುನ ಸಮುದಾಯ ಭವನದ ಬಾಸ್ಕರಸಾ ಪವಾರ ಸಭಾಂಗಣದ ದಸರಾ ದರ್ಬಾರ ವೇದಿಕೆಯಲ್ಲಿ ಜರುಗಿದ ನಮ್ಮೂರ ದಸರಾ-೨೦೨೫ರ ಏಳನೆ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ಒಳ್ಳೆಯ ಕೆಲಸ ಮಾಡುವ ಮೂಲಕ ಸಮಾಜದಲ್ಲಿ ಪರಿವರ್ತನೆ ಕಾಣಬಹುದು.

ಎಸ್‌ಎಸ್‌ಕೆ ಸಮಾಜ ಬಾಂಧವರು ಇಂದಿನ ಯುವ ಪೀಳಿಗೆ ಬಗ್ಗೆ ಹೆಚ್ಚು ಚಿಂತನೆ ಮಾಡಬೇಕಿದೆ. ಸಮಾಜದ ಬಡ ಮಕ್ಕಳಿಗೆ ಕೌಶಲ್ಯ ಅಭಿವೃದ್ದಿ ತರಬೇತಿ ನೀಡುವ ಕುರಿತು ಅಭಿಯಾನ ಹಮ್ಮಿಕೊಳ್ಳಬೇಕು. ಪ್ರತಿಭಾರಿ ನನಗೆ ಬೇಟಿಯಾದ ಯುವಕರು ತಮ್ಮ ಬಯೋಡೆಟಾ ನೀಡಿ ಕೆಲಸ ಕೊಡಿಸುವಂತೆ ಮನವಿ ಮಾಡುತ್ತಾರೆ. ಆದರೆ, ಸಾಕಷ್ಟು ಯುವಕರಲ್ಲಿ ಕೌಶಲ್ಯದ ಕೊರತೆಯಿಂದಾಗಿ ಅವರು ಕೆಲಸ ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಈ ಹಿಂದೆ ಬೃಹತ್ ಉದ್ಯೋಗ ಮೇಳದಲ್ಲಿ ೧೮೦೦ ಜನರು ಪಾಲ್ಗೊಂಡಿದ್ದರು. ಅವರಲ್ಲಿ ೬೦೦ ಜನರಿಗೆ ಸ್ಥಳದಲ್ಲಿ ಆಯ್ಕೆ ಪ್ರಮಾಣಪತ್ರ ನೀಡಲಾಯಿತು. ಅದರಲ್ಲಿ ೬೦ ಜನರ ಯುವಕ ಯುವತಿಯರು ಮಾತ್ರ ಕೆಲಸ ಮಾಡುತ್ತಿದ್ದಾರೆ. ಇದು ನಮ್ಮಲ್ಲಿರುವ ಕೌಶಲ್ಯದ ಕೊರತೆಯನ್ನು ಎತ್ತಿ ತೋರಿಸುತ್ತಿದೆ ಅದ್ದರಿಂದ ಇಂದಿನ ಯುವಕ ಯುವತಿಯರಿಗೆ ಕೌಶಲ್ಯ ತರಬೇತಿ ಅಗತ್ಯವಾಗಿದೆ ಎಂದು ಹೇಳಿದರು.

ಎಸ್‌ಎಸ್‌ಕೆ ಸಮಾಜದ ಪಂಚ ಕಮೀಟಿ ಅಧ್ಯಕ್ಷ ಫಕೀರಸಾ ಬಾಂಡಗೆ ಅಧ್ಯಕ್ಷತೆ ವಹಿಸಿದ್ದರು.ವೇದಿಕೆ ಮೇಲೆ ಗಣ್ಯ ಉದ್ಯಮಿ ಎಸ್.ಡಿ.ಪವಾರ, ಗದಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಎಸ್‌ಎಸ್‌ಕೆ ಸಮಾಜ ಪಂಚ ಕಮೀಟಿ ಉಪಾಧ್ಯಕ್ಷ ರಾಜು ಬದಿ, ಗೌರವ ಕಾರ್ಯದರ್ಶಿ ವಿನೋದ ಶಿದ್ಲಿಂಗ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಂಚ ಕಮೀಟಿ ಸದಸ್ಯರಾದ ಸುರೇಶಕುಮಾರ ಬದಿ, ಪರಶುರಾಮ ಬದಿ, ವಿಷ್ಣುಸಾ ಶಿದ್ಲಿಂಗ, ಮಾರುತಿ ಪವಾರ, ಪ್ರಕಾಶ ಬಾಕಳೆ, ಶ್ರೀನಿವಾಸ ಬಾಂಡಗೆ, ಅಂಬಾಸಾ ಖಟವಟೆ, ವಿನೋದ ಬಾಂಡಗೆ, ತರುಣ ಸಂಘದ ವಿಶ್ವನಾಥಸಾ ಸೋಳಂಕಿ, ರಾಘು ಬಾರಡ, ಶ್ರೀಕಾಂತ ಬಾಕಳೆ, ಸುಧೀರ ಕಾಟಿಗರ, ನಾಗರಾಜ ಖೋಡೆ, ಮಹಿಳಾ ಮಂಡಳದ ಅಧ್ಯಕ್ಷೆ ಉಮಾಬಾಯಿ ಬೇವಿನಕಟ್ಟಿ, ಗೀತಾಬಾಯಿ ಹಬೀಬ ಸೇರಿದಂತೆ ಮುಂತಾದವರಿದ್ದರು.

ಈ ಕಾರ್ಯಕ್ರಮದಲ್ಲಿ ರವಿ ಶಿದ್ಲಿಂಗ ಸ್ವಾಗತಿಸಿದರು. ಜಿ.ಎನ್. ಹಬೀಬ ನಿರೂಪಿಸಿದರು. ಅನಿಲ್ ಖಟವಟೆ ವಂದಿಸಿದರು

 

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ