Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ಖರೀದಿ ಕೇಂದ್ರ ಪ್ರಾರಂಭ

ಬಳ್ಳಾರಿ,ಜೂ.14: ಜಿಲ್ಲೆಯಲ್ಲಿ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಖರೀದಿ ಮಾಡಲು ಖರೀದಿ ಕೇಂದ್ರಗಳನ್ನು ಪ್ರಾರಂಭ ಮಾಡಲಾಗಿದ್ದು, ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈಗಾಗಲೇ ನೋಂದಣಿ ಮಾಡಿದ ರೈತರು ನೋಂದಾಯಿತ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಜೂ.30 ರೊಳಗಾಗಿ ಜೋಳ ಮಾರಾಟ ಮಾಡಬೇಕು.

ಜೋಳದ ಖರೀದಿ ಅವಧಿಯು ಜೂ.30 ಕ್ಕೆ ಕೊನೆ ದಿನವಾಗಿದ್ದು, ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಜೋಳ ಮಾರಾಟ ಮಾಡಲು ನೋಂದಣಿ ಮಾಡಿದ ರೈತರು ಸಂಬAಧಪಟ್ಟ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಗ್ರೇನ್ ವೋಚರ್ ಪಡೆದುಕೊಳ್ಳಬೇಕು.

ಖರೀದಿಯಾದ ಜೋಳವನ್ನು ಜೋಳ ಉಪಯೋಗಿಸುವ ಜಿಲ್ಲೆಗಳಿಗೆ ಪಡಿತರ ವಿತರಣೆಗೆ ಹಂಚಿಕೆ ನೀಡಲಾಗುವುದು. ಈ ನಿಟ್ಟಿನಲ್ಲಿ ಶೀಘ್ರವಾಗಿ ನೋಂದಾಯಿತ ರೈತರು ಜೋಳವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಸರ್ಕಾರದ ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ನಂತರ ಖರೀದಿ ಅವಧಿಗೆ ಅವಕಾಶವಿರುವುದಿಲ್ಲ.

ಬೆಂಬಲ ಬೆಲೆ ಯೋಜನೆ ಬಗ್ಗೆ ರೈತರಿಗೆ ಯಾವುದೇ ಸಮಸ್ಯೆಗಳಿದ್ದರೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬಳ್ಳಾರಿಯ ಶಾಖಾ ವ್ಯವಸ್ಥಾಪಕರು ಮತ್ತು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಜಿಲ್ಲಾ ವ್ಯವಸ್ಥಾಪಕರು ಹಾಗೂ ಆಯಾ ತಾಲ್ಲೂಕಿನ ತಹಶೀಲ್ದಾರ್, ಕೃಷಿ ಅಧಿಕಾರಿ, ಎ.ಪಿ.ಎಂ.ಸಿ ಕಾರ್ಯದರ್ಶಿ, ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಆಹಾರ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ