LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಆರಂಭವಾಯಿತು ಆರ್ ಸಿ ಸ್ಟುಡಿಯೋಸ್  ಮೊದಲ ಚಿತ್ರ ಫಾದರ್ 

ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಆರ್  ಚಂದ್ರು ಕೆಲವು ದಿನಗಳ ಹಿಂದೆ ಆರ್ ಸಿ ಸ್ಟುಡಿಯೋಸ್ ಎಂಬ ನಿರ್ಮಾಣ‌ ಸಂಸ್ಥೆ ಆರಂಭಿಸುವುದರ ಮೂಲಕ ಐದು ಸಿನಿಮಾಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಆ ಪೈಕಿ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ 'ಫಾದರ್' ಚಿತ್ರ ನಿರ್ಮಾಣವಾಗುತ್ತಿದೆ.


     ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರು ಆರಂಭ ಫಲಕ ತೋರುವುದರ ಮೂಲಕ  'ಫಾದರ್' ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿದರು.ರಾಜಕೀಯ ಮುಖಂಡ ಎಚ್ ಎಂ ರೇವಣ್ಣ, ಶಾಸಕ ಪ್ರದೀಪ್ ಈಶ್ವರ್, ನಿರ್ಮಾಪಕ ಕೆ ಪಿ ಶ್ರೀಕಾಂತ್, ಬಹದ್ದೂರ್ ಚೇತನ್ ಕುಮಾರ್, ಮಂಜುನಾಥ್, ಮಮತ ದೇವರಾಜ್, ಮಂಜುನಾಥ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.


    "ಆರ್ ಚಂದ್ರು ನನ್ನ ಆತ್ಮೀಯರು. ಸಿನಿಮಾವನ್ನು ಹೆಚ್ಚಾಗಿ ಪ್ರೀತಿಸುತ್ತಾರೆ. ಆರ್ ಸಿ ಸ್ಟುಡಿಯೋಸ್ ಮೂಲಕ ಮೊದಲ ಚಿತ್ರವಾಗಿ  'ಫಾದರ್' ಚಿತ್ರ ಆರಂಭಿಸಿದ್ದಾರೆ. ಚಂದ್ರು ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಶುಭವಾಗಲಿ" ಎಂದು ಶಿವರಾಜಕುಮಾರ್ ಹಾರೈಸಿದರು.


     "ನನ್ನ 'ಚಾರ್ ಮಿನಾರ್' ಚಿತ್ರ ಆರಂಭವಾದಗಿನಿಂದ ಹಿಡಿದು ಈವರೆಗೂ ನನಗೆ ಶಿವಣ್ಣ ಹಾಗೂ ಗೀತಾ ಶಿವರಾಜಕುಮಾರ್ ಅವರು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಚುನಾವಣೆ ಸಮಯ. ಆದರೂ ಇಂದು ಇಲ್ಲಿಗೆ ಆಗಮಿಸಿ, ನಮ್ಮ "ಫಾದರ್" ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಅವರಿಗೆ ಹಾಗೂ ಆಗಮಿಸಿರುವ ಎಲ್ಲಾ ಗಣ್ಯರಿಗೂ ಧನ್ಯವಾದ ತಿಳಿಸುತ್ತೇನೆ. ಕೆಲವು ದಿನಗಳ ಮುಂಚೆ ನಮ್ಮ ಆರ್ ಸಿ ಸ್ಟುಡಿಯೋಸ್ ಸಂಸ್ಥೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದರು. ಈ ಸಂಸ್ಥೆಯಿಂದ ಒಂದು ವರ್ಷದಲ್ಲಿ  ಐದು ಸಿನಿಮಾಗಳನ್ನು ನಿರ್ಮಿಸುವುದಾಗಿ ಹೇಳಿದ್ದೆ. ಅದರ ಮೊದಲ ಹೆಜ್ಜೆಯಾಗಿ ಇಂದು 'ಫಾದರ್' ಚಿತ್ರ ಆರಂಭವಾಗಿದೆ. ಶಿವಣ್ಣ ಅವರ 'ಭೈರಾಗಿ' ಚಿತ್ರಕ್ಕೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ರಾಜ್ ಮೋಹನ್ ಈ ಚಿತ್ರದ ನಿರ್ದೇಶಕರು. ಡಾರ್ಲಿಂಗ್ ಕೃಷ್ಣ ನಾಯಕರಾಗಿ, ಅಮೃತ ಅಯ್ಯಂಗಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಪ್ರಕಾಶ್ ರೈ, ಸುನೀಲ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಮುಂಬೈನ ಆನಂದ್ ಪಂಡಿತ್ ಅವರು ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. 'ಹನುಮಾನ್' ಚಿತ್ರದ ಖ್ಯಾತಿಯ ಹರಿ ಸಂಗೀತ ನೀಡುತ್ತಿದ್ದಾರೆ.  ನಮ್ಮ 'ಫಾದರ್' ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ" ಎಂದರು ಆರ್ ಚಂದ್ರು.


     "ಇದೊಂದು ತಂದೆ - ಮಗನ ಬಾಂಧವ್ಯದ ಚಿತ್ರ. ಕಥೆ ತುಂಬಾ ಚೆನ್ನಾಗಿದೆ. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು 'ಫಾದರ್' ಚಿತ್ರದಲ್ಲಿದೆ" ಎಂದರು ನಿರ್ದೇಶಕ ರಾಜ್ ಮೋಹನ್.


"ನಿರ್ದೇಶಕರು ಹೇಳಿದ ಕಥೆ ಮನಸ್ಸಿಗೆ ಹತ್ತಿರವಾಯಿತು. ಆರ್ ಚಂದ್ರು ಅವರ ಜೊತೆಗೆ ಇದು ನನ್ನ ಮೊದಲ ಚಿತ್ರ" ಎಂದು ನಾಯಕ ಡಾರ್ಲಿಂಗ್ ಕೃಷ್ಣ ತಿಳಿಸಿದರು.

"ಕಥೆ ಹಾಗೂ ನನ್ನ ಪಾತ್ರ ಎರಡು ತುಂಬಾ ಚೆನ್ನಾಗಿದೆ" ಎಂದರು ನಾಯಕಿ ಅಮೃತ ಅಯ್ಯಂಗಾರ್. ಸಂಗೀತ ನಿರ್ದೇಶಕ ಹರಿ ಸೇರಿದಂತೆ ಅನೇಕರು ಚಿತ್ರದ ಕುರಿತು ಮಾತನಾಡಿದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ